Wednesday, October 22, 2025
Menu

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಮುಹೂರ್ತ ಫಿಕ್ಸ್

kadle kai parishe

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ ಮುಂದಿನ ತಿಂಗಳು ನವೆಂಬರ್ 17 ಮತ್ತು 18ರಂದು ಎರಡು ದಿನಗಳ ಕಾಲ ಪರಿಷೆ ನಡೆಯಲಿದೆ.

ಶ್ರೀ ದೊಡ್ಡಗಣಪತಿ ದೇವಾಲಯದಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ತನ್ನದೇ ಆದ ವಿಶೇಷ ಇತಿಹಾಸ ಇದೆ. ಪ್ರತಿ ವರ್ಷದಂತೆ ಈ ವರ್ಷವು ಯಾವುದೇ ಅಹಿತಕರ ಘಟನೆ ಆಗದಂತೆ ಅದ್ಧೂರಿ ಆಗಿ ನಡೆಸಲು ನಿರ್ಧರಿಸಲಾಗಿದೆ.

ಗುರುವಾರ ಕಡಲೆ ಕಾಯಿ ಪರಿಷೆ ಸಂಬಂಧ ಸಾರಿಗೆ ಸಚಿವ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ  ನೇತೃತ್ವದಲ್ಲಿ ಸಭೆ ಕೂಡ ನಡೆಯಲಿದ್ದು, ಸಭೆಯಲ್ಲಿ ಸ್ಥಳೀಯ ಶಾಸಕರು ಭಾಗಿಯಾಗಲಿದ್ದಾರೆ.

ವ್ಯಾಪಾರಿಗಳಿಂದ ಯಾವುದೇ ಸುಂಕ ವಸೂಲಾತಿ ಯಾರು ಮಾಡಬಾರದು ಎಂಬುದುನ್ನ ನಿರ್ಧಾರ ಕೈಗೊಳ್ಳುವುದರ ಜೊತೆಗೆ ಏನೆಲ್ಲ ವಿಶೇಷತೆ ಇರುತ್ತೆ ಎಂಬುದನ್ನ ಬಹಿರಂಗ ಪಡಿಸಲಿದ್ದಾರೆ.

Related Posts

Leave a Reply

Your email address will not be published. Required fields are marked *