Menu

ಮುಂಬೈ ಮಹಾನಗರ ಪಾಲಿಕೆ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಗೆಲುವು

ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದಾರೆ.

2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ ಹತ್ಯೆ ನಡೆದಿತ್ತು. ಪಂಗಾರ್ಕರ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಗಿತ್ತು. ಸೆಪ್ಟೆಂಬರ್ 4, 2024 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಶ್ರೀಕಾಂತ್ ಪಂಗಾರ್ಕರ್ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 13 ರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಶ್ರೀಕಾಂತ್ ಪಂಗಾರ್ಕರ್ ಡಾನ್ಸ್‌ ಮಾಡುತ್ತ, ಡ್ರಮ್ಸ್ ಬಾರಿಸುತ್ತ ಪುಷ್ಪಗಳನ್ನು ಎಸೆಯುತ್ತ ಬೆಂಬಲಿಗರೊಂದಿಗೆ ಗೆಲುವನ್ನು ಸಂಭ್ರಮಿಸಿದ್ದಾರೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು ಈ ವಾರ್ಡ್‌ನಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಬಿಎಂಸಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಏಕನಾಥ ಶಿಂಧೆ ನೇತೃತ್ವದ ಮಹಾಯುತಿ ಬಹುಮತ ದಾಟಿ ಅತ್ಯಧಿಕ ಸ್ಥಾನಗಳನ್ನು ಗೆದ್ದುಕೊಂಡಿದೆ.

ಪಂಗಾರ್ಕರ್ 2001 ಮತ್ತು 2006 ರ ನಡುವೆ ಶಿವಸೇನೆಯಿಂದ ಜಲ್ನಾ ಪುರಸಭೆಯ ಸದಸ್ಯರಾಗಿದ್ದರು. 2011 ರಲ್ಲಿ ಶಿವಸೇನೆ ಟಿಕೆಟ್ ನಿರಾಕರಿಸಿದ ನಂತರ ಹಿಂದೂ ಜನಜಾಗೃತಿ ಸಮಿತಿಯನ್ನು ಸೇರಿದ್ದರು. ರಾಜ್ಯದ ಭಾಗಗಳಿಂದ ಕಚ್ಚಾ ಬಾಂಬ್‌ಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಆಗಸ್ಟ್ 2018 ರಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿತ್ತು.

Related Posts

Leave a Reply

Your email address will not be published. Required fields are marked *