Menu

ಮುಂಬೈ, ಸಂಸತ್‌ ದಾಳಿಗಳ ಸಂಚುಕೋರ ಅಬ್ದುಲ್ ಅಜೀಜ್ ಸಾವು

2001ರಲ್ಲಿ ನಡೆದ ಸಂಸತ್‌ ಭವನದ ಮೇಲಿನ ದಾಳಿಯ ಸಂಚುಕೋರ ಹಾಗೂ 26/11ರ ಮುಂಬೈ ದಾಳಿಯ ಪ್ರಮುಖ ಸಂಚುಕೋರ ಲಷ್ಕರ್-ಎ-ತೈಬಾದ ಪ್ರಮುಖ ಉಗ್ರ ಅಬ್ದುಲ್ ಅಜೀಜ್ ಪಾಕಿಸ್ತಾನದ ಬಹಾವಲ್ಪುರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಉಗ್ರ ಅಬ್ದುಲ್ ಅಜೀಜ್ ಪಾಕಿಸ್ತಾನ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಪ್ರಮುಖ ಹಣಕಾಸು ಕಾರ್ಯಾಚರಣಾ ಮತ್ತು ಕಾರ್ಯತಂತ್ರದ ಸಂಯೋಜಕರಾಗಿದ್ದ. ಕಳೆದ ಮೇ 7 ರಂದು ಭಾರತದ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಕ್ಷಿಪಣಿ ದಾಳಿಗೆ ತುತ್ತಾಗಿ ಗಾಯಗೊಂಡಿದ್ದ ಎನ್ನಲಾಗಿದೆ.

ಅಬ್ದುಲ್ ಅಜೀಜ್ ಅಂತ್ಯಕ್ರಿಯೆಯಲ್ಲಿ ಸೈಫುಲ್ಲಾ ಕಸೂರಿ ಮತ್ತು ಅಬ್ದುರ್ ರೌಫ್ ಅವರಂತಹ ಹಿರಿಯ ಲಷ್ಕರ್ ನಾಯಕರು ಭಾಗಿಯಾಗಿದ್ದಾರೆ. ಅಜೀಜ್ ಲಷ್ಕರ್ ಸಂಘಟನೆಗೆ ಗಲ್ಫ್ ರಾಷ್ಟ್ರಗಳು, ಬ್ರಿಟನ್ ಮತ್ತು ಅಮೆರಿಕದಲ್ಲಿರುವ ಪಾಕಿಸ್ತಾನಿ ಸಮುದಾಯಗಳು ಮತ್ತು ಮೂಲಭೂತ ಇಸ್ಲಾಮಿಸ್ಟ್ ಗುಂಪುಗಳಿಂದ ಹಣ ಸಂಗ್ರಹಿಸುತ್ತಿದ್ದ. ಲಾಜಿಸ್ಟಿಕ್ಸ್, ಶಸ್ತ್ರಾಸ್ತ್ರ ಪೂರೈಕೆ ಮತ್ತು ವಿವಿಧ ಭಯೋತ್ಪಾದಕ ಚಟುವಟಿಕೆಗಳಿಗೆ ನೇಮಕಾತಿ ನಿರ್ವಹಿಸುತ್ತಿದ್ದ. ಭಾರತದಲ್ಲಿ ನಡೆದ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದ.

ದಾಳಿಯಲ್ಲಿ ನೇರ ಮಾಡದಿದ್ದರೂ ಹಣ ಮತ್ತು ಸಂಪನ್ಮೂಲ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ. 2001ರಲ್ಲಿ ಸಂಸತ್‌ ಭವನದ ಮೇಲಿನ ದಾಳಿಗೆ ಪಾಕಿಸ್ತಾನದಿಂದ ಹಣ ಮತ್ತು ಉಪಕರಣಗಳನ್ನು ಸಾಗಿಸಲು ಸಹಾಯ ಮಾಡಿದ್ದ ಎಂದು ಗುಪ್ತಚರ ವರದಿಗಳು ತಿಳಿಸಿವೆ.

2006ರ ಮುಂಬೈ ಸ್ಥಳೀಯ ರೈಲು ಸ್ಫೋಟಗಳಿಗೂ ಆತ ಹಣಕಾಸು ಒದಗಿಸಿದ್ದ ಎನ್ನಲಾಗಿದೆ, 2008ರ ಮುಂಬೈ ದಾಳಿ ಸಮಯದಲ್ಲಿ ಅಜೀಜ್ ಸಮುದ್ರ ಮಾರ್ಗಗಳ ಮೂಲಕ ಶಸ್ತ್ರಾಸ್ತ್ರಗಳು ಮತ್ತು ಉಪಗ್ರಹ ಫೋನ್‌ಗಳನ್ನು ಒದಗಿಸಿದ್ದ. ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯ ಭಯೋತ್ಪಾದಕ ಕಾರ್ಯಗಳಿಗೆ ಹಣಕಾಸು ಒದಗಿಸುವ ಜೊತೆಗೆ ಯುವಕರನ್ನು ಸಂಘಟನೆಗಳಿಗೆ ಸೇರಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಹೇಳಲಾಗಿದೆ.

Related Posts

Leave a Reply

Your email address will not be published. Required fields are marked *