ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಹೆಸರು ಹೈಕಮಾಂಡ್ ಮುಂದೆ ಪ್ರಸ್ತಾಪಿಸಿದ್ದಾರೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಕೋಲಾರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಈಗಾಗಲೇ ವಿಜಯೇಂದ್ರ ಇದ್ದಾರೆ. ಅವರು ಬದಲಾಗಬೇಕು ಎಂದು ನಾನು ಬಯಸುವುದಿಲ್ಲ. ಒಂದು ವೇಳೆ ಬದಲಿಸಿ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದರೆ ಕೆಲಸ ಮಾಡುವೆ ಎಂದರು.
ಬಿಜೆಪ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕರೆ ೨೦೨೮ರ ಚುನಾವಣೆಯಲ್ಲಿ ಪಕ್ಷ ೧೫೦ ಸ್ಥಾನ ಗೆಲ್ಲಿಸುವ ಕಡೆ ಕೆಲಸ ಮಾಡುವೆ. ಆಗ ಬಿಎಸ್ ಯಡಿಯೂರಪ್ಪ ಅವರ ಆಶೀರ್ವಾದವೂ ಬೇಕಾಗುತ್ತದೆ ಎಂದು ಅವರು ಹೇಳಿದರು.