ಹಾಸನದ ಆಲೂರು ತಾಲೂಕಿನ ಹಳೇಆಲೂರು ಗ್ರಾಮದ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಸ್ಫೋಟದಿಂದ ಗಾಯಗೊಂಡ ದಂಪತಿ.
ಇಬ್ಬರಿಗೂ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಝೀರೋ ಟ್ರಾಫಿಕ್‍ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ನಿಗೂಢ ಸ್ಪೋಟದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಟಿಪ್ಪರ್ ಲಾರಿ ಹರಿದು ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಸಾವು
ಬೆಂಗಳೂರು ಹೊರ ವಲಯದಲ್ಲಿ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ರಸ್ತೆ ಗುಂಡಿಗೆ ಬಲಿಯಾಗಿದ್ದಾಳೆ. ಧನುಶ್ರೀ (21) ರಸ್ತೆ ಗುಂಡಿಗೆ ಬಿದ್ದು ಮೃತಪಟ್ಟ ವಿದ್ಯಾರ್ಥಿನಿ. ಬೂದಿಗೆರೆ ಕ್ರಾಸ್ ಬಳಿ ಸ್ಕೂಟರ್ ನಲ್ಲಿ ಬರ್ತಿದ್ದಾಗ ರಸ್ತೆಗುಂಡಿಗೆ ಬಿದ್ದು ಸ್ಕೂಟರ್ ನಿಂದ ಕೆಳಗೆ ಬಿದ್ದಿದ್ದಾಳೆ. ಬಿದ್ದ ಆಕೆಯ ಮೇಲೆ ಟಿಪ್ಪರ್ ಲಾರಿ ಹರಿದು ಸ್ಥಳದಲ್ಲೇ ಅಸು ನೀಗಿದ್ದಾಳೆ.
ನಾರಾಯಣ ಮಠದ ನಿವಾಸಿ ಧನುಶ್ರೀ ಖಾಸಗಿ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಕಾಲೇಜಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಸ್ತೆ ಗುಂಡಿ ತಪ್ಪಿಸಲು ಹೋಗಿ ಈ ದುರಂತ ಸಂಭವಿಸಿದೆ. ಟಿಪ್ಪರ್ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ್ದು, ಪೊಲೀಸರು ಟಿಪ್ಪರ್ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.