Menu

ನಮ್ಮ ಮೆಟ್ರೊ ಟಿಕೆಟ್‌ ದರ ನಾಳೆಯಿಂದಲೇ ಏರಿಕೆ: ಬಿಎಂಆರ್‌ಸಿಎಲ್‌

namma metro

ನಮ್ಮ ಮೆಟ್ರೊ ಟಿಕೆಟ್‌ ದರ ಸೋಮವಾರದಿಂದಳೇ ಏರಿಕೆ ಆಗಲಿದೆ ಎಂದು ಬಿಎಂಆರ್‌ಸಿಎಲ್‌ ಆಡಳಿತ ನಿರ್ದೇಶಕ ರವಿಶಂಕರ್ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರದಿಂದ ಅಧಿಸೂಚನೆ ಬಾರದ ಕಾರಣ ಮೆಟ್ರೋ ದರ ಏರಿಕೆಗೆ ಸದ್ಯ ತಡೆಯಿಲ್ಲ. ತುರ್ತಾಗಿ ದರ ಏರಿಕೆ ನಿಲ್ಲಿಸುವಂತೆ ಆದೇಶ ಬಂದರೆ ಮಾತ್ರ ಈ ನಿರ್ಧಾರಕ್ಕೆ ಬ್ರೇಕ್​​ ಬೀಳಲಿದೆ ಎಂದಿದ್ದಾರೆ.

ಸೋಮವಾರದಿಂದ ನಮ್ಮ ಮೆಟ್ರೋ ರೈಲುಗಳ ಟಿಕೆಟ್ ದರ ಹೆಚ್ಚಳ ಇಲ್ಲ, ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಕಟ್ಟರ್ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದಾರೆ ಎಂದು ಸಂಸದ ತೇಜಸ್ವಿಸೂರ್ಯ ಹಾಗೂ ಪ್ರತಿಪಕ್ಷ ನಾಯಕರಾಗಿರುವ   ಆರ್‌ ಅಶೋಕ ಹೇಳಿದ್ದರು.

ಬಿಎಂಆರ್‌ಸಿಎಲ್‌ ಅಧಿಖಾರಿಗಳು ಮಾತ್ರ ನಮಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ. ಅಲ್ಲಿಯವರೆಗೆ ಆದೇಶದಲ್ಲಿ ಬದಲಾವಣೆ ಇಲ್ಲ. ಮಾಹಿತಿ ಬಂದ ನಂತರ ಟಿಕೆಟ್ ದರ ಇಳಿಕೆ ಬಗ್ಗೆ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ.

ಈ ವರ್ಷ ಫೆಬ್ರವರಿಯಲ್ಲಿ ಟಿಕೆಟ್​​ ದರ ವಾರ್ಷಿಕವಾಗಿ ಶೇ.5ರಷ್ಟು ಹೆಚ್ಚಳ ಮಾಡದಿದ್ದರೆ ಮುಂದಿನ ವರ್ಷ ಶೇ.10ರಷ್ಟು ಏರಿಕೆ ಮಾಡುವ ಅನಿವಾರ್ಯತೆ ಸೃಷ್ಟಿಯಾಗಲಿದೆ ಎನ್ನುವ ಬಗ್ಗೆ ಮಾಹಿತಿಯನ್ನು ಬಿಎಂಆರ್‌ಸಿಎಲ್‌ ಅಧಿಕಾರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಫೆಬ್ರವರಿ 9ರಿಂದ ಟಿಕೆಟ್ ದರ ಏರಿಕೆ ಹಿನ್ನೆಲೆ ಬೆಂಗಳೂರಿನ ಹಲವು ಮೆಟ್ರೋ ನಿಲ್ದಾಣಗಳಲ್ಲಿ ಭದ್ರತೆ ಕೋರಿ ಪೊಲೀಸರಿಗೆ ಪತ್ರ ಬರೆಯಲಾಗಿದೆ. ದರ ಏರಿಕೆ ವಿರೋಧಿಸಿ ಆಗಬಹುದಾದ ಅಹಿತಕರ ಘಟನೆ ತಪ್ಪಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗ್ತಿದ್ದು, ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣಕ್ಕೆ ಭದ್ರತೆ ಕೋರಿ ಶಂಕರಪುರಂ ಠಾಣೆಗೆ ಮನವಿ ನೀಡಲಾಗಿದೆ.

Related Posts

Leave a Reply

Your email address will not be published. Required fields are marked *