ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದ ವರೆಗಿನ 19.5 ಕಿ.ಮೀ ನಮ್ಮ ಮೆಟ್ರೋ ಯೆಲ್ಲೋ ಲೈನ್ ಆಗಸ್ಟ್ 10ರಂದು ಉದ್ಘಾಟನೆಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಈ ಮಾರ್ಗ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸಲಿದೆ. ಪ್ರತಿದಿನ 25,000 ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚರಿಸುವ ನಿರೀಕ್ಷೆ ಇದೆ. ರೈಲುಗಳು 20 ರಿಂದ 30 ನಿಮಿಷಗಳ ಅಂತರದಲ್ಲಿ ಸಂಚರಿಸಲಿವೆ.
ಈ ಮಾರ್ಗದ ಬಗ್ಗೆ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತ ಎ.ಎಂ. ಚೌಧರಿ ಸುರಕ್ಷತಾ ತಪಾಸಣೆ ವರದಿ ಸಲ್ಲಿಕೆ ಮಾಡಿದ್ದಾರೆ. ವರದಿಯಲ್ಲಿ ಕೆಲವು ಸಣ್ಣಪುಟ್ಟ ಷರತ್ತುಗಳನ್ನು ವಿಧಿಸಲಾಗಿದೆ. ಅವುಗಳನ್ನು ಕೆಲವೇ ದಿನಗಳಲ್ಲಿ ಸರಿಪಡಿಸುವುದಾಗಿ ಬಿಎಂಆರ್‌ಸಿಎಲ್‌ಹೇಳಿದೆ.
ಪ್ರಧಾನಿ ನರೇಂದ್ರ ಮೋದಿಯವರು ಈ ಮಾರ್ಗ ಉದ್ಘಾಟಿಸಲಿದ್ದು, ಮೆಟ್ರೋ ಫೇಸ್ 3ಗೂ ಅಂದೇ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸಚಿವ ಮನೋಹರ್ ಲಾಲ್ ಮಾಹಿತಿ ನೀಡಿದ್ದಾರೆ.