ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ನಾಲ್ಕು ಹಸುಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಹಸುಗಳು ಗಂಭೀರ ಗಾಯಗೊಂಡಿವೆ. ಗ್ರಾಮದ ರೈತ ಬಸವಣ್ಣ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ.
ಚಿರತೆಯಿಂದ ತಪ್ಪಿಸಿಕೊಳ್ಳಲು ಹಸುಗಳು ದಿಕ್ಕಾಪಾಲಾಗಿ ಓಡಿವೆ. ಓಡುವಾಗ ಹಸುಗಳು ಹಳ್ಳಕ್ಕೆ ಬಿದ್ದು ಹಸುಗಳ ಕಾಲು, ತೊಡೆ, ಕತ್ತಿನ ಭಾಗಗಳಲ್ಲಿ ಗಂಭೀರ ಗಾಯಗಳಾಗಿವೆ.
ಚಿರತೆ ದಾಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆಯ ಕಾಟ ಹೆಚ್ಚಾಗಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟು, ಚಿರತೆ ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಹಸುಗಳು ಬದುಕುವ ಸಾಧ್ಯತೆ ಇಲ್ಲ, ಸರ್ಕಾರ ಪರಿಹಾರ ನೀಡಬೇಕೆಂದು ರೈತ ಬಸವಣ್ಣ ಆಗ್ರಹಿಸಿದ್ದಾರೆ.