ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಕ್ಸಲ್ ಚಳುವಳಿಯಲ್ಲಿ ಸಕ್ರಿಯವಾಗಿದ್ದ ತೊಂಬಟ್ಟು ಲಕ್ಷ್ಮೀ ಶರಣಾಗಿದ್ದಾರೆ. ಶರಣಾಗತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ತೊಂಬಟ್ಟು ಲಕ್ಷ್ಮೀ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.
ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಶ್ರೀಪಾಲ್ ಜೊತೆಗಿದ್ದು, ಶರಣಾಗತಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲಾಯಿತು. ಬಳಿಕ ಭದ್ರತೆಯೊಂದಿಗೆ ಡಿಸಿ ಕಚೇರಿಗೆ ಲಕ್ಷ್ಮಿಯನ್ನು ಪೊಲೀಸರು ಕರೆದೊಯ್ದರು. ಶರಣಾದ ನಕ್ಸಲ್ ಜೊತೆ ಆಕೆಯ ಸಹೋದರ ಮತ್ತು ಬಂಧುಗಳು ಹಾಜರಿದ್ದರು.
ಕುಂದಾಪುರ ತಾಲೂಕು ಅಮಾಸೆಬೈಲುವಿನ ತೊಂಬಟ್ಟು ಲಕ್ಷ್ಮೀ ಏಳೆಂಟು ವರ್ಷಗಳ ಹಿಂದೆ ಕರಾವಳಿ-ಮಲೆನಾಡು ಭಾಗದ ನಕ್ಸಲ್ ಚಟುವಟಿಕೆಗಳಿಂದ ಹಠಾತ್ತನೆ ನಾಪತ್ತೆಯಾಗಿ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದರೆಂದು ಹೇಳಲಾಗುತ್ತಿತ್ತು. ದಶಕದ ಹಿಂದೆ ಅವರು ನಕ್ಸಲ್ ಸಂಜೀವ ಎಂಬವರನ್ನು ಮದುವೆಯಾಗಿ ಆಂದ್ರಪ್ರದೇಶಕ್ಕೆ ತೆರಳಿದ್ದು, ಅಲ್ಲಿ ಬದುಕು ಕಟ್ಟಿಕೊಂಡಿದ್ದರೆಂದು ಹೇಳಲಾಗಿತ್ತು.