Wednesday, August 20, 2025
Menu

ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಎನ್ ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ಭೇಟಿ!

hd devegowda

ನವದೆಹಲಿ: ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿದರು.

ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ರಾಧಾಕೃಷ್ಣನ್ ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗೌರವಪೂರ್ವಕವಾಗಿ ಬರಮಾಡಿಕೊಂಡರು.

ತಮ್ಮ ಹಾಗೂ ಪ್ರಧಾನಿಗಳ ನಡುವಿನ ಬಾಂಧವ್ಯವನ್ನು ಸ್ಮರಿಸಿದ ರಾಧಾಕೃಷ್ಣನ್, ಎನ್ ಡಿಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಆಗಿರುವ ತಮಗೆ ಬೆಂಬಲ ನೀಡಿದ್ದಾಗಿ ಅಭ್ಯರ್ಥಿಯಾಗಿ ಧನ್ಯವಾದ ತಿಳಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ಮಲ್ಲೇಶ್ ಬಾಬು ಮತ್ತು ಡಾ. ಸಿ.ಎನ್. ಮಂಜುನಾಥ್, ಜೆಡಿಎಸ್ ಪಕ್ಷದ ಹಿರಿಯ ನಾಯಕ ವೆಂಕಟರಾವ್ ನಾಡಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿನೋದ್ ತಾವಡೆ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳು ಹಾಗೂ ಕೇಂದ್ರ ಸಚಿವರು ಸಿ.ಪಿ. ರಾಧಾಕೃಷ್ಣನ್ ಅವರಿಗೆ ಶುಭ ಹಾರೈಸಿದರು.

Related Posts

Leave a Reply

Your email address will not be published. Required fields are marked *