Menu

ನೀಟ್‌ ಅಕ್ರಮ: ಸಚಿವರು ರಾಜೀನಾಮೆ ನೀಡಲಿ, ವಿದ್ಯಾರ್ಥಿಗಳಿಗೆ ಕೇಂದ್ರ ನ್ಯಾಯ ಒದಗಿಸಲಿ ಎಂದು ಸಿಎಂ ಆಗ್ರಹ

ನೀಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ  ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ ಹೋರಾಟವನ್ನು ದಮನಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದನ್ನು ಇದೇ ದೇಶ ಖಂಡಿಸುತ್ತದೆ. ಕಾಂಗ್ರೆಸ್‌ ವಿದ್ಯಾರ್ಥಿಗಳ ಜೊತೆ ನಿಲ್ಲುತ್ತದೆ ಎಂದು ಮುಕ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ದೇಶದಾದ್ಯಂತ ಯುವಕರು ಸ್ವಯಂ ಪ್ರೇರಿತರಾಗಿ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದರು. ದೇಶದ ಮುಂದಿನ ಭವಿಷ್ಯದ ಮೇಲೆ ನೀವು ಮಾಡುತ್ತಿರುವ ಹಲ್ಲೆ, ನಿಮ್ಮ ಮಕ್ಕಳ ಮೇಲೆ ಮಾಡುವ ಹಲ್ಲೆಯಲ್ಲವೇ? ಕಾಂಗ್ರೆಸ್ ಪಕ್ಷ ಇದರ ವಿರುದ್ಧ ಧ್ವನಿ ಎತ್ತಿದೆ. ಇದು ಭಾರತದ ಯುವಕರ ಬದುಕಿನ ಪ್ರಶ್ನೆ. ಯುವಕರು, ವಿದ್ಯಾರ್ಥಿಗಳು, ಪೋಷಕರು ಹೋರಾಟ ಮಾಡುತ್ತಿದ್ದಾರೆ. ನೀವೆಲ್ಲರೂ ಹೋರಾಟದ ಸ್ವರೂಪ ನೋಡಿದ್ದೀರಿ. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ರಾಹುಲ್ ಗಾಂಧಿ ಅವರು ಹೋರಾಟ ಮಾಡುತ್ತಿದ್ದಾರೆ. ಪ್ರಿಯಾಂಕಾ ಗಾಂಧಿ ಕೂಡ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದೇ ಈ ದೇಶದಲ್ಲಿ ಗಾಂಧಿ ಕುಟುಂಬದ ಶಕ್ತಿ. ನಮ್ಮ ಸಂಸತ್ ಸದಸ್ಯರನ್ನು ಬಂಧಿಸಿರುವುದನ್ನು ಕರ್ನಾಟಕ ರಾಜ್ಯ ಸೇರಿದಂತೆ ಇಡೀ ದೇಶ ಖಂಡಿಸುತ್ತದೆ ಎಂದರು.

ವಿದ್ಯಾರ್ಥಿಗಳ ಮೇಲೆ ನಡೆಸಿರುವ ಲಾಠಿಚಾರ್ಚ್ ಮಾಡಿದ್ದಾರೆ. ಮಾಧ್ಯಮಗಳಿಗೆ ಈ ಹೋರಾಟವನ್ನು ರೆಕಾರ್ಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿಲ್ಲ. ಪ್ರಾಣಿಗಳಿಗಿಂತ ಕೀಳಾಗಿ ನಮ್ಮ ವಿದ್ಯಾರ್ಥಿಗಳಿಗೆ ಹೊಡೆದಿದ್ದಾರೆ. ವಿದ್ಯಾರ್ಥಿಗಳು ಹಕ್ಕು ಕೇಳಲು ಬಂದಾಗ  ಲಾಠಿಯಲ್ಲಿ ಹೊಡೆದಿದ್ದಾರೆ. ಅವರಿಗೆ ಅಪಮಾನ ಮಾಡಿ, ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಆ ವಿದ್ಯಾರ್ಥಿಗಳ ಜೊತೆ ನಿಲ್ಲಲಿದೆ. ನೂರು ಸಂಸತ್ ಸದಸ್ಯರನ್ನು ಬಂಧಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಕ್ಕಳ ಭವಿಷ್ಯ ಮುಖ್ಯ. ಕೇಂದ್ರ ಸಚಿವರು ರಾಜೀನಾಮೆ ಕೊಡಲೇಬೇಕು. ಮಕ್ಕಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.

ಭಾರತದ ಭವಿಷ್ಯ ಯುವ ವಿದ್ಯಾರ್ಥಿಗಳ ಮೇಲೆ ನಿಂತಿದೆ. 25 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಷ್ಟಪಟ್ಟು ತಯಾರಿ ಮಾಡಿಕೊಂಡಿರುವಾಗ, ಪ್ರರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಅವರ ಕನಸನ್ನು ನಾಶ ಮಾಡಿದೆ. ಹೀಗಾಗಿ ತಮ್ಮ ನೋವನ್ನು ವ್ಯಕ್ತಪಡಿಸಲು ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಾರೆ. ಆದರೆ ಪ್ರತಿಭಟನೆ ಮಾಡುವವರನ್ನು ಯಾವ ದೃಷ್ಟಿಯಲ್ಲಿ ನೋಡಲಾಗುತ್ತಿದೆ ಎಂಬುದು ಮುಖ್ಯ. ಕಾಂಗ್ರೆಸ್ ನಾಯಕರು ವಿದ್ಯಾರ್ಥಿಗಳ ಭಾವನೆಗೆ ಸ್ಪಂದಿಸಿದೆ ಎಂದು ಹೇಳಿದರು.

ಕೇಂದ್ರ ಮಂತ್ರಿಗಳು ಆಗಮಿಸಿದ್ದರು. ನಮಗೆ ಈ ವಿಚಾರವಾಗಿ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಿ, ಸಚಿವರ ರಾಜೀನಾಮೆ ಪಡೆಯಿರಿ ಎಂದು ಬೇಡಿಕೆ ಇಟ್ಟಿದ್ದೇವೆ. ನಾವು ಸಭ್ಯ ರೀತಿಯಲ್ಲೇ ಪ್ರತಿಭಟನೆ ಮಾಡಿದ್ದೇವೆ. ರಾಹುಲ್ ಗಾಂಧಿ  ವಿರೋಧ ಪಕ್ಷದ ನಾಯಕರು. 240 ಸದಸ್ಯರ ನಾಯಕರು. ಅವರನ್ನು ಯಾವ ರೀತಿ ಬಂಧಿಸಿದರು ಎಂದು ನೀವು ನೋಡಿದ್ದೀರಿ. ನಮ್ಮ ಸಂಸದರು ಅಲ್ಲಿಗೆ ಆಗಮಿಸಲು ಅವಕಾಶ ನೀಡದಂತೆ ಬಂಧಿಸಿದ್ದಾರೆ. ನಮ್ಮ ಪ್ರತಿಭಟನೆ ವೇಳೆ ಅದರಲ್ಲೂ ನಮ್ಮ ಮಹಿಳಾ ಸಂಸದರನ್ನು ಅಸಭ್ಯವಾಗಿ ನಡೆಸಿಕೊಂಡಿದ್ದಾರೆ. ಅವರ ಮೇಲೆ ಕೈ ಹಾಕಿ ನಂತರ ಮಹಿಳಾ ಪೋಲೀಸರನ್ನು ಕರೆತಂದು ಕರೆದೊಯ್ದರು. ನಂತರ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿದ್ದಾರೆ ಎಂದು ವಿವರಿಸಿದರು.

Related Posts

Leave a Reply

Your email address will not be published. Required fields are marked *