ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳದಿಂದ ಬೇಸತ್ತ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿ ಬಂದಿದೆ.
ಗ್ರಾಮ ಪಂಚಾಯತ್ ಲೈಬ್ರೆರಿಯನ್ ಆಗಿದ್ದ ರಾಮಚಂದ್ರಯ್ಯ ಆತ್ಮಹತ್ಯೆ ಮಾಡಿಕೊಂಡವರು, ಇವರು 25 ವರ್ಷದಿಂದ ಅರೆಕಾಲಿಕ ಗ್ರಂಥಾಲಯ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು. ಕಳಲುಘಟ್ಟ ಪಿಡಿಒ ಗೀತಾಮಣಿ ರಾಮಚಂದ್ರಯ್ಯನವರಿಗೆ ಮೂರು ತಿಂಗಳಿಂದ ಸಂಬಳ ನೀಡದೇ ಕಿರುಕುಳ ನೀಡುತ್ತಿದ್ದರು. ಬಯೋಮೆಟ್ರಿಕ್ ಹಾಜರಾತಿ ಹಾಕದೆ ಇಸಲ್ಲದ ಕಾರಣ ಹೇಳಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
ಇದರಿಂದ ನೊಂದ ರಾಮಚಂದ್ರಯ್ಯ ವಿಷ ಸೇವಿಸಿದ್ದರು, ಬಳಿಕ ಒದ್ದಾಡುತ್ತಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ತುಮಕೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ರಾಮಚಂದ್ರಯ್ಯ ಅವರ ಅಣ್ಣನ ಮಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ದಾಖಲಿಸಿದ್ದು, ದೂರಿನನ್ವಯ ಪಿಡಿಓ ಗೀತಾಮಣಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮಾಜಿ ಪ್ರಿಯಕರನ ಜೊತೆ ಸೇರಿ ಲಿವಿಂಗ್ ಟುಗೆದರ್ ಪ್ರಿಯತಮನ ಕೊಲೆ
ದೆಹಲಿಯ ಗಾಂಧಿ ವಿಹಾರ್‌ನಲ್ಲಿ ಯುವತಿಯೊಬ್ಬಳು ಮಾಜಿ ಪ್ರಿಯಕರನ ಜೊತೆ ಸೇರಿ ಲಿವಿಂಗ್ ಟುಗೆದರ್‌ನಲ್ಲಿದ್ದ ಪ್ರಿಯತಮನ ಹತ್ಯೆ ಮಾಡಿರುವ ಪ್ರಕರಣದಲ್ಲಿ ಆರೋಪಿ ಅಮೃತಾ ಚೌಹಾಣ್ ಮತ್ತು ಆಕೆಯ ಮಾಜಿ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.
ಯುಪಿಎಸ್‌ಸಿ ಆಕಾಂಕ್ಷಿಯಾಗಿದ್ದ 32 ವರ್ಷದ ರಾಮಕೇಶ್ ಮೀನಾ ಕೊಲೆಗಿದ್ದು, ಲಿವಿಂಗ್ ಟುಗೆದರ್‌ನಲ್ಲಿದ್ದ ಅಮೃತಾ ಚೌಹಾಣ್ ತನ್ನ ಮಾಜಿ ಪ್ರಿಯಕರನ ಜೊತೆ ಸೇರಿಕೊಂಡು ರಾಮಕೇಶನನ್ನು ಕೊಲೆ ಮಾಡಿದ್ದಳು. ತನಿಕೆ ನಡೆಸಿದ ಪೊಲೀಸರು ಹಲವು ವಿಚಾರಗಳನ್ನು ಬಯಲಿಗೆಳೆದಿದ್ದಾರೆ. ರಾಮಕೇಶ ತನ್ನಲ್ಲಿದ್ದ ಅಮೃತಾಳ ಖಾಸಗಿ ವೀಡಿಯೊ ಡಿಲೀಟ್ ಮಾಡಲಿಲ್ಲ ಎನ್ನುವ ಕಾರಣಕ್ಕೆ ಕೊಲೆ ಮಾಡಿ ಬಳಿಕ ಬೆಂಕಿ ಹಚ್ಚಿದ್ದರು.
ಪೊಲೀಸರು ರಾಮಕೇಶ್ ನಿವಾಸದಿಂದ ವಶಪಡಿಸಿಕೊಂಡ ಹಾರ್ಡ್ ಡಿಸ್ಕ್‌ನಲ್ಲಿ ರಾಮ್ ಲಿವ್-ಇನ್ ಪಾರ್ಟ್‌ನರ್ ಅಮೃತಾ ಸೇರಿದಂತೆ 15ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ವೀಡಿಯೊಗಳು ಪತ್ತೆಯಾಗಿವೆ, ಈ ವೀಡಿಯೊಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.


