Wednesday, September 17, 2025
Menu

ನೆಫ್ರೋ ಸಂಸ್ಥೆಗೆ NABH ಮಾನ್ಯತೆ, ಈ ಗರಿಮೆಗೆ ಪಾತ್ರವಾದ ರಾಜ್ಯದ 2ನೇ ಸರ್ಕಾರಿ ಆಸ್ಪತ್ರೆ

ಮೂತ್ರಶಾಸ್ತ್ರ ವಿಭಾಗದಲ್ಲಿ ಅತ್ಯಾಧುನಿಕ ಸೇವೆ ಒದಗಿಸುತ್ತಿರುವ ಸರ್ಕಾರದ ಸೂಪರ್‌ ಸ್ಪೆಷಾಲಿಟಿ ನೆಫ್ರೋ-ಮೂತ್ರ ಶಾಸ್ತ್ರ ಸಂಸ್ಥೆ (INU) ಮತ್ತೊಂದು ಮೈಲುಗಲ್ಲು ದಾಟಿದೆ.  ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ (NABH) ಮಾನ್ಯತೆಯನ್ನು ಪಡೆಯುವ ಮೂಲಕ ನೆಫ್ರೋ ಸಂಸ್ಥೆಯು ವಿಶೇಷ ಸ್ಥಾನ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಂತರ ಈ ಸ್ಥಾನಮಾನ ಪಡೆದ ಎರಡನೇ ಸಂಸ್ಥೆ ಇದಾಗಿದೆ.

ನೆಫ್ರೋ ಸಂಸ್ಥೆಗೆ NABH ಮಾನ್ಯತೆ ಸಿಕ್ಕಿರುವ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೋಶಿನ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಮಾನ್ಯತೆ ಪಡೆದ ಆಸ್ಪತ್ರೆಗಳು ರೋಗಿಗಳ ಸುರಕ್ಷತೆ ಮತ್ತು ಆರೈಕೆಯಲ್ಲಿ ಜಾಗತಿಕ ಮಾನದಂಡಗಳನ್ನು ಅನುಸರಿಸುತ್ತದೆ. ಆರೋಗ್ಯ ಆರೈಕೆ ಗುಣಮಟ್ಟ ಸೊಸೈಟಿ (ISQua) ಸೇರಿದಂತೆ ಹಲವು ಅಂತರರಾಷ್ಟ್ರೀಯ ಸಂಸ್ಥೆಗಳು ನೀಡುವ ಗುಣಮಟ್ಟದ ಸರ್ಟಿಫಿಕೇಟ್‌ ಪಡೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.

ರೋಗಿಯ ಸುರಕ್ಷತೆ, ಆರೈಕೆಯ ಗುಣಮಟ್ಟ, ಸೋಂಕು ನಿಯಂತ್ರಣ, ಮೂಲಸೌಕರ್ಯ ಮತ್ತು ಸಿಬ್ಬಂದಿ ಅರ್ಹತೆ ಸೇರಿದಂತೆ ಹಲವಾರು ಕಠಿಣ ಮಾನದಂಡಗಳನ್ನು ಅನುಸರಿಸಿದ ಆಧಾರದ ಮೇಲೆ ಮಾನ್ಯತೆ ನೀಡಲಾಗುತ್ತದೆ. ಸರ್ಕಾರಿ ಆಸ್ಪತ್ರೆಗೆ ಈ ಮಾನ್ಯತೆ ದೊರೆತಿರುವುದು ಹೆಮ್ಮೆಯ ಸಾಧನೆಯಾಗಿದೆಎಂದು ಮೋಶಿನ್‌ ತಿಳಿಸಿದ್ದಾರೆ.

ಐಎನ್‌ಯು ನಿರ್ದೇಶಕ ಡಾ. ಎಂ. ಶಿವಲಿಂಗಯ್ಯ ಮಾತನಾಡಿ, ಸುರಕ್ಷಿತ ಮತ್ತು ಪ್ರಮಾಣೀಕೃತ ರೋಗಿ ಚಿಕಿತ್ಸೆ, ಆರೈಕೆ ಮತ್ತು ಬಿಲ್ಲಿಂಗ್‌ನಲ್ಲಿ ಪಾರದರ್ಶಕತೆ ಕಾಪಾಡಿಕೊಂಡಿರುವ ಹಿನ್ನೆಲೆಯಲ್ಲಿ ಮಾನ್ಯತೆ ದೊರೆತಿದೆ. ಆಯುಷ್ಮಾನ್ ಭಾರತ್, ಡಿಜಿಟಲ್ ಆರೋಗ್ಯ ಮಿಷನ್ ಮತ್ತು ರಾಜ್ಯ ವಿಮಾ ಕಾರ್ಯಕ್ರಮಗಳಂತಹ ಯೋಜನೆಗಳಲ್ಲಿ NABH ಮಾನ್ಯತೆ ಪ್ರಮುಖ ಪಾತ್ರ ವಹಿಸುತ್ತದೆ, ಗುಣಮಟ್ಟದ ಆರೋಗ್ಯ ಸೇವೆ ಮತ್ತು ಸುರಕ್ಷತೆಯೇ ಇಲ್ಲಿ ಪ್ರಮುಖ ಮಾನದಂಡವಾಗಿದೆ ಎಂದು ಅವರು ಹೇಳಿದರು.

Related Posts

Leave a Reply

Your email address will not be published. Required fields are marked *