ಕೇಂದ್ರ ಸಚಿವ ಜೆಪಿ ನಡ್ಡಾ ಅವರ ಮುಗಿದ ಹಿನ್ನೆಲೆಯಲ್ಲಿ ಮಾರ್ಚ್ 15ರ ನಂತರ ಬಿಜೆಪಿ ರಾಷ್ಟ್ರೀಯ ನೂತನ ಅಧ್ಯಕ್ಷರ ನೇಮಕ ಮಾಡಲು ಚಿಂತನೆ ನಡೆದಿದೆ.
ವಿವಿಧ 12 ರಾಜ್ಯಗಳ ಪದಾಧಿಕಾರಿಗಳ ನೇಮಕಾತಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ತುಂಬಾ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ ನಡೆಯಲಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಮಾರ್ಚ್ 15ರಿಂದ ನೂತನ ವರ್ಷಾರಂಭವಾಗಲಿದ್ದು, ಹೊಸ ವರ್ಷದ ವೇಳೆ ಅಥವಾ ನಂತರ ನೂತನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ತಮಿಳುನಾಡು, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಗುಜರಾತ್ ಗಳಲ್ಲಿ ಈಗಾಗಲೇ ಚುನಾವಣೆ ಮುಗಿದಿದೆ. ಅಸ್ಸಾಂನಲ್ಲಿ ಬಾಕಿ ಇದ್ದು, ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಸಮೀಪದಲ್ಲಿಯೇ ಇರುವುದರಿಂದ ಸದ್ಯಕ್ಕೆ ಯಾವುದೇ ಬದಲಾವಣೆ ಮಾಡದೇ ಇರಲು ತೀರ್ಮಾನಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ ಘೋಷಣೆ ನಂತರ ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಾಧ್ಯಕ್ಷರ ನೇಮಕ ಘೋಷಣೆ ಆಗಲಿದೆ.
ಜೆಪಿ ನಡ್ಡಾ ಅವರ ರಾಷ್ಟ್ರೀಯ ಅಧ್ಯಕ್ಷ ಹುದ್ದೆ ಮುಗಿದಿದ್ದರೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 2024 ಜೂನ್ ವರೆಗೂ ವಿಸ್ತರಣೆ ಮಾಡಲಾಗಿತ್ತು. ಇದೀಗ ಈ ಅವಧಿ ಮುಗಿದಿದ್ದರೂ ಯಾವುದೇ ಬದಲಾವಣೆ ಮಾಡದೇ ಇರುವುದು ರಾಜ್ಯ ಮಟ್ಟದ ಸಂಘಟನೆಗಳಲ್ಲಿ ತೊಂದರೆ ಉಂಟಾಗಿತ್ತು ಎಂದು ಹೇಳಲಾಗಿದೆ.