ರಾಜ್ಯದ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಯಾವುದೇ ಸ್ಥಳದಲ್ಲಿ ನಡೆದರೂ ಕಟ್ಟುನಿಟ್ಟಿನ ಹೈ ಅಲರ್ಟ್ ಭದ್ರತೆ ಒದಗಿಸಲು ಪೊಲೀಸ್ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದೆ. ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತ ಸೀಮಂತ್ ಕುಮಾರ್ ನೇತೃತ್ವದಲ್ಲಿ ಈ ಸಂಬಂಧ ಸಭೆ ನಡೆದಿದ್ದು, ಜಂಟಿ ಆಯುಕ್ತರು ಹಾಗೂ ಡಿಸಿಪಿಗಳು ಭಾಗಿಯಾಗಿದ್ದಾರೆ.
ಬಹು ಸ್ತರಗಳ ಭದ್ರತೆ, ತೀವ್ರ ನಿಗಾ, ಟ್ರಾಫಿಕ್ ನಿರ್ಹವಣೆ, ಎಸ್ಕಾರ್ಟ್, ವಾಹನ ಪಾರ್ಕಿಂಗ್, ಸಿಸಿಟಿ ಕಣ್ಗಾವಲು, ಕ್ಷಿಪ್ರ ಕಾರ್ಯಪಡೆ ನಿಯೋಜನೆ, ಕೆಎಸ್ಆರ್ಪಿ, ನಗರ ಪೊಲೀಸ್ ಸಮನ್ವಯತೆ , ಆಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಭದ್ರತೆಗೆ ಸಂಬಂಧಿಸಿದ ಪ್ರತಿಯೊಂದು ವಿಷಯಗಳ ಬಗ್ಗೆಯೂ ತೀವ್ರವಾದ ಗಮನ ಹರಿಸಲಾಗಿದೆ.
ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮರಳಿದ ಬಳಿಕ ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಭಾನುವಾರ ಸಂಜೆ ನಾಲ್ಕು ಗಂಟೆಗೆ ನಡೆಯಲಿದೆ. ದೆಹಲಿಗೆ ಹೋಗಿರುವ ಶಾಸಕರಿಗೆ ಬೆಂಗಳೂರಿಗೆ ಬರುವಂತೆ ತಿಳಿಸಲಾಗಿದೆ.
ಇಂದು ದೆಹಲಿಯ ಐಟಿಸಿ ಮೌರ್ಯ ಹೋಟೆಲ್ನಲ್ಲಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ್, ಅವರೊಂದಿಗೆ ಊಟ ಮಾಡಿದ್ದಾರೆ. ಯತೀಂದ್ರ ಮತ್ತುಕೆ. ಹೆಚ್. ಮುನಿಯಪ್ಪ, ಜಾರ್ಜ್ ಉಪಸ್ಥಿತರಿದ್ದರು. ದ್ದು, ಈ ವೇಳೆ ಮಹತ್ವದ ಚರ್ಚೆಯಾಗುವ ಸಾಧ್ಯತೆಯಿದೆ.
ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ್ ಅವನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ಇಂದೇ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿವಕುಮಾರ್ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ್ದಾರೆ.
ರಾಜ್ಯದಲ್ಲಿ ನೂತನ ಸಿಎಂ ಹಾಗೂ ಸಚಿವ ಸಂಪುಟ ರಚನೆಯ ಕಸರತ್ತು ತೀವ್ರಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿ ಶಾಸಕರಾದ ಶ್ರೀನಿವಾಸ್ ಮಾನೆ, ಯಾಸೀರ್ ಅಹ್ಮದ್ ಖಾನ್ ಪಠಾಣ್ ಮತ್ತು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಲಾಬಿ ನಡೆಸಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್ ಹಾಗೂ ಜಿ. ಪರಮೇಶ್ವರ್ ಸೇರಿದಂತೆ 11 ರಿಂದ 13 ಹಿರಿಯ ಶಾಸಕರು ಹೈಕಮಾಂಡ್ ಒಪ್ಪಿಗೆಯೊಂದಿಗೆ ಮತ್ತೊಮ್ಮೆ ಸಚಿವರಾಗಿ ನೂತನ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ಬಣದ ಮಾಜಿ ಸಚಿವ ಕೆ.ಎನ್. ರಾಜಣ್ಣ ಪುತ್ರ, ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಎಸ್ಟಿ (ST) ಸಚಿವ ಸ್ಥಾನಕ್ಕಾಗಿ ದೆಹಲಿಗೆ ತೆರಳಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸರ್ಜನೆಗೊಂಡಿರುವ ಬಗ್ಗೆ ಗೆಜೆಟ್ ಅಧಿಸೂಚನೆ ಪ್ರಕಟವಾಗಿದ್ದು, ಸಚಿವರಿಗೆ ಹಂಚಿಕೆಯಾಗಿದ್ದ ಸರ್ಕಾರಿ ವಾಹನಗಳನ್ನು ವಾಪಸ್ ತೆಗೆದುಕೊಳ್ಳಲಾಗಿದೆ. ಮಾಜಿ ಶಾಸಕರೆಲ್ಲರೂ ಖಾಸಗಿ ವಾಹನ ಅವಲಂಬಿಸಿದ್ದಾರೆ.


