Thursday, January 30, 2025
Menu

ಹೊಸ ತಂತ್ರಾಂಶ ಅಳವಡಿಕೆ : ಬೆಸ್ಕಾಂ ಗ್ರಾಮಾಂತರ ಪ್ರದೇಶಗಳಲ್ಲಿ 3 ದಿನ ಸೇವೆ ಅಲಭ್ಯ

ಬೆಂಗಳೂರು: ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ (ನಾನ್ ಆರ್ಎಪಿಡಿಆರ್ ಪಿ) ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಕೈಗೆತ್ತಿಕೊಂಕೊಂಡಿದೆ.

ಈ ಹಿನ್ನೆಲೆಯಲ್ಲಿ ದಿನಾಂಕ 30.01.2025 ರಿಂದ 01.02.2025 (3 ದಿನ)ರ ವರೆಗೆ ಬಿಲ್ಲಿಂಗ್, ಹೊಸ ಸಂಪರ್ಕ, ಕಂದಾಯ ಸಂಗ್ರಹ ಹಾಗೂ ತಂತ್ರಾಂಶ ಆಧಾರಿತ ಸೇವೆಗಳು ಲಭ್ಯವಿರುವುದಿಲ್ಲ. ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆ ಹೊರತು ಪಡಿಸಿ, ಬೆಸ್ಕಾಂ ವ್ಯಾಪ್ತಿಯ ಉಳಿದ 7 ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಲ್ಲಿ ತಂತ್ರಾಂಶ ಆಧಾರಿತ ಸೇವೆಗಳಲ್ಲಿ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Related Posts

Leave a Reply

Your email address will not be published. Required fields are marked *