ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ಸಿರೀಶಾನಾವರ ಮೃತದೇಹವನ್ನು ಬಶೆಟ್ಟಿಹಳ್ಳಿ ರಸ್ತೆಯಲ್ಲಿ ಇಟ್ಟು ಸಂಬಂಧಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಶ್ರೀನಾಥ್ ಎಂಬುವರನ್ನು ಪ್ರತಿಸಿ ವಿವಾಹವಾಗಿದ್ದ ಸಿರೀಶಾ ಕ್ರಿಮಿನಾಶಕ ಮಾತ್ರೆ ತಿಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರ ಕುಟುಂಬದವರು ದೂರು ದಾಖಲಿಸಿದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಲಾಗಿದೆ.
ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಡು ರಸ್ತೆಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದ ಹಿನ್ನೆಲೆ ಒಂದು ಕಿ.ಮೀವರೆಗೆ ಟ್ರಾಫಿಕ್ ಜಾಮ್ ಉಂಟಾಯಿತು. ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ.