Breaking
ಲಿವ್ ಇನ್ ಟುಗೆದರ್: ಬೆಂಗಳೂರಿನಲ್ಲಿ ಮಹಿಳೆಯ ಕೊಂದು ವ್ಯಕ್ತಿ ಸುಸೈಡ್
ಲಿವ್ ಇನ್ ಟುಗೆದರ್‌ನಲ್ಲಿದ್ದ ಮಹಿಳೆಯನ್ನು ಕೊಂದ ಬಳಿಕ ವ್ಯಕ್ತಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಇಂದಿರಾ ಪ್ರಿಯದರ್ಶಿನಿ ನಗರದ ಮನೆಯೊಂದರಲ್ಲಿ ನಡೆದಿದೆ. 51 ವರ್ಷದ ಲಕ್ಷ್ಮೀನಾರಾಯಣ 49 ವರ್ಷದ ಲಲಿತಾ ಎಂಬಾಕೆಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಅಂದರೆ ಇಂದು ಮನೆಯ ಬಾಗಿಲು ತೆರೆದಿದ್ದರೂ ಯಾರು ಕಾಣಿಸದ ಕಾರಣ ಅನುಮಾನಗೊಂಡ ಪಕ್ಕದ ಮನೆಯವರು ಬಂದು ನೋಡಿದಾಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ಗಂಡ ಮೃತಪಟ್ಟ ಬಳಿಕ
ಬೆಳಗಾವಿಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್
ಬೆಳಗಾವಿಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಬ್ಬಿನ ಗದ್ದೆಗೆ ಎಳೆದೊಯ್ದು ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 23ರಂದು ಘಟನೆ ನಡೆದಿದ್ದು, ಆರೋಪಿಗಳು ಬಾಲಕಿಯ ಕುಟುಂಬಸ್ಥರಿಗೆ ಜೀವ ಬೆದರಿಕೆ ಒಡ್ಡಿದ್ದ ಹಿನ್ನಲೆ
ಬಿಜೆಪಿ ನಾಯಕರಿಗೆ ಮುಖಭಂಗ: ಸ್ಮಾರ್ಟ್ ಮೀಟರ್ ಗುತ್ತಿಗೆ ಹಗರಣದ ಅರ್ಜಿ ವಜಾ!
ಬೆಂಗಳೂರು: ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಲು ನಿರ್ದೇಶನ ಕೋರಿ ಬಿಜೆಪಿ ಮುಖಂಡರು ಸಲ್ಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರಾದ ಸಿ.ಎನ್. ಅಶ್ವತ್ಥನಾರಾಯಣ, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಸಲ್ಲಿಸಿದ್ದ
ಇಂದಿರಾ ಆಹಾರ ಕಿಟ್ ಸರಬರಾಜಿಗೆ ಕ್ಯೂಆರ್ ಕೋಡ್ ಬಳಕೆಗೆ ಸಿಎಂ ಸೂಚನೆ
ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮೂಲಕ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸೋಮವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನದ ಕುರಿತು ನಡೆದ ಸಭೆಯಲ್ಲಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಬೀಡಿ, ಸಿಗರೇಟ್, ಮೊಬೈಲ್ ಬಂದ್: ಊಟ ಬಿಟ್ಟು ಕೈದಿಗಳ ಪ್ರತಿಭಟನೆ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೆಲವೊಂದು ನಿಯಮಗಳನ್ನು ಕಠಿಣವಾಗಿ ಜಾರಿಗೆ ತರುತ್ತಿದ್ದು, ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಆಗಿದೆ. ಮೊಬೈಲ್ ಕೂಡ ಸಿಗದಂತೆ ಮಾಡಲಾಗಿದೆ. ಇದರಿಂದ ರೊಚ್ಚಿಗೆದ್ದಿರುವ ಕೈದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಜೈಲಿನಲ್ಲಿ ಕೈದಿಗಳು ಊಟ, ತಿಂಡಿ
ಡಿಸಿಎಂ ನಿವಾಸದಲ್ಲಿ ಸಿಎಂ ಬ್ರೇಕ್‌ಫಾಸ್ಟ್: ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷಗಳ ಎದುರಿಸಲು ರಣನೀತಿಗಳ ಚರ್ಚೆ
ಬೆಳಗಿನ ಉಪಹಾರಕ್ಕಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಈ ವೇಳೆ ಬೆಳಗಾವಿ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಚರ್ಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಉಪಾಹಾರದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ , ಉಪಮುಖ್ಯಮಂತ್ರಿಗಳ ಮನೆಯ
ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್: ಬಸವರಾಜ ಬೊಮ್ಮಾಯಿ ವ್ಯಂಗ್ಯ
ನವದೆಹಲಿ: ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ನವ ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ
ಸಿಎಂ-ಡಿಸಿಎಂ ಭೋಜನದಲ್ಲಿ ನಾಟಿಕೋಳಿ: ಯಾವತ್ತಿದ್ದರೂ ಬ್ರದರ್ಸ್ ಎಂದ ಸಿದ್ದು- ಡಿಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಉಪಹಾರ ಸೇವಿಸಿದ್ದು, ಸುಮಾರು 1 ಗಂಟೆ 20 ನಿಮಿಷಗಳ ಉಪಹಾರದ ವೇಳೆ ಸಿಎಂ ನೆಚ್ಚಿನ ನಾಟಿ ಕೋಳಿ ವಿಶೇಷವಾಗಿತ್ತು. ಸಿಎಂ ನಿವಾಸದಲ್ಲಿ ಉಪಹಾರ ಸೇವಿಸಿದ ನಂತರ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ
ಶಿಕಾರಿಪುರ ರಸ್ತೆಯಲ್ಲಿದ್ದ ನಾಡ ಬಾಂಬ್ ಕೆಎಸ್ಸಾರ್ಟಿಸಿ ಬಸ್ ಟೈರ್‌ಗೆ ಸಿಲುಕಿ ಸ್ಫೋಟ: ತಪ್ಪಿದ ದುರಂತ
ಶಿವಮೊಗ್ಗ ಶಿಕಾರಿಪುರದ ರಸ್ತೆಯಲ್ಲಿ ಬಿದ್ದಿದ್ದ ನಾಡಬಾಂಬ್ ಮೇಲೆ ಕೆಎಸ್ಆರ್‌ಟಿಸಿ ಬಸ್ ಸಂಚರಿಸಿದ್ದು, ಹಿಂಬದಿಯ ಟೈರ್‌ಗೆ ಸಿಲುಕಿ ಸ್ಫೋಟಗೊಂಡಿದೆ. ಅದೃಷ್ಟವಷಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಶಿಕಾರಿಪುರ ತಾಲೂಕಿನ ಹಿರೇಕವಲತ್ತಿ ಗ್ರಾಮದಲ್ಲಿ ಘಟನೆ ನಡೆದಿದ್ದು. ಬಸ್ ಮುಡುಬಾ ಸಿದ್ಧಾಪುರದಿಂದ ಶಿಕಾರಿಪುರಕ್ಕೆ ಸಂಚರಿಸುತ್ತಿತ್ತು. ನಾಡಬಾಂಬ್ ಸ್ಫೋಟದ
ಪೋಕ್ಸೋದಡಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ಪ್ರಕ್ರಿಯೆಗೆ ಸುಪ್ರೀಂ ತಡೆ: ಬಿಎಸ್‌ವೈ ಸದ್ಯಕ್ಕೆ ನಿರಾಳ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪೋಕ್ಸೋ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆದಿದ್ದು, ತ್ವರಿತಗತಿ ನ್ಯಾಯಾಲಯದ ಪ್ರಕ್ರಿಯೆಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ಹೀಗಾಗಿ ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್




