Menu

ನೆಲಮಂಗಲ ಹೋಟೆಲ್‌ನಲ್ಲಿ ಕುಕ್‌ ಆತ್ಮಹತ್ಯೆ

ನೆಲಮಂಗಲದಲ್ಲಿರುವ ಉಡುಪಿ ಹೋಟೆಲ್‌ ಬಾಣಸಿಗ ಮೇಲ್ಭಾಗದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಛತ್ತೀಸ್‌ಗಢದ ಆಶಿಶ್ ಕುಮಾರ್(43) ಆತ್ಮಹತ್ಯೆ ಮಾಡಿಕೊಂಡವರು. ಅವರು ಹೋಟೆಲ್‌ ನ್ಲಿ ಕಳೆದೊಂದು ವರ್ಷದಿಂದ ಚೈನೀಸ್‌ ಫಾಸ್ಟ್ ಫುಡ್ ಮಾಡುತ್ತಿದ್ದರು. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ತಿಳಿದು ಬಂದಿಲ್ಲ, ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೊಬೈಲ್ ಫೋನ್ ವಶಕ್ಕೆ ಪಡೆದುಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ತೋಟದ ಮನೆಯಲ್ಲಿ ಮಹಿಳೆಯ ಕೊಲೆ ತುಮಕೂರಿನ ಗುಬ್ಬಿ ಹಿಂಡಸಗೆರೆ ಗ್ರಾಮದ ತೋಟದ ಮನೆಯಲ್ಲಿ

ರಾಜ್ಯದಲ್ಲಿ ಒಂದೇ ಒಂದು ಮೆಕ್ಕೆ ಜೋಳ ಖರೀದಿ ಕೇಂದ್ರ ಆರಂಭವಾಗಿಲ್ಲ: ಆರ್‌ ಅಶೋಕ

ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ @siddaramaiah ಅವರು ಆಶ್ವಾಸನೆ ನೀಡಿ 10 ದಿನಗಳು ಕಳೆದಿವೆ. ಆದರೆ ಮೆಕ್ಕೆಜೋಳ ಖರೀದಿ ಕೇಂದ್ರಗಳು ಪೊಳ್ಳು ಭರವಸೆಗಳಲ್ಲಿ, ಸರ್ಕಾರಿ ಆದೇಶ ಪತ್ರಗಳಲ್ಲಿ ಮಾತ್ರ ಇದೆಯೇ ಹೊರತು ಇದುವರೆಗೂ ರಾಜ್ಯದಲ್ಲಿ ಒಂದೇ ಒಂದು ಖರೀದಿ ಕೇಂದ್ರ

ಕಸದ ಮಾಫಿಯಾಕ್ಕೆ ಬಗ್ಗದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ: ಡಿಕೆ ಶಿವಕುಮಾರ್

“ಕಸದ ಮಾಫಿಯಾದವರು ನನ್ನ ಮೇಲೆ ಏನೇನು ಗೂಬೆ ಕೂರಿಸಬೇಕೋ ಅದೆಲ್ಲವನ್ನು ಮಾಡಿದರು. ನಾನು ಯಾವುದಕ್ಕೂ ಬಗ್ಗದೆ, ಹೆದರದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನಿಸಲಾಗಿದೆ. ಕಸದಿಂದ ರಸ ತೆಗೆಯಬೇಕು ಎಂದು ಹೊರಟಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಗಡಿ

ಲೈಂಗಿಕ ಸಮಸ್ಯೆಗೆ ಔಷಧಿ: ಬೆಂಗಳೂರು ಟೆಕ್ಕಿಗೆ 48 ಲಕ್ಷ ರೂ. ವಂಚಿಸಿದ್ದ ನಕಲಿ ಗುರೂಜಿ ಅರೆಸ್ಟ್‌

ಲೈಂಗಿಕ ಸಮಸ್ಯೆಯ ಪರಿಹಾರಕ್ಕೆ ಆಯುರ್ವೇದ ಔಷಧಿ ನೀಡುವುದಾಗಿ ನಂಬಿಸಿ ಬೆಂಗಳೂರಿನ ಟೆಕ್ಕಿಗೆ ೪೮ ಲಕ್ಷ ರೂ. ವಂಚಿಸಿದ್ದ ನಕಲಿ ಗುರೂಜಿಯನ್ನು ಜ್ಞಾನ ಭಾರತಿ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಸಮಸ್ಯೆ ಸೇರಿದಂತೆ ನಾನಾ ಕಾಯಿಲೆಗಳಿಗೆ ಔಷಧಿ ನೀಡುವುದಾಗಿ ನಂಬಿಸಿ ಈ ಗುರೂಜಿ ಸಾರ್ವಜನಿಕರನ್ನು

ಕಾಂಗ್ರೆಸ್‌ ಮಾಜಿ ಶಾಸಕ ಆರ್‌ವಿ ದೇವರಾಜ್‌ ನಿಧನ

ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​. ವಿ. ದೇವರಾಜ್ ಹೃದಯಾಘಾತದಿಂದ ನಿಧನರಾದರು. ನಾಳೆ (ಡಿಸೆಂಬರ್‌೩) ಜನ್ಮದಿನ ಹಿನ್ನೆಲೆ ಸೋಮವಾರ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ

ಕುಕ್ಕುಟ ಉದ್ಯಮಕ್ಕೆ ಯಾವುದೇ ತೊಂದರೆಯಾಗದಂತೆ ರಾಜ್ಯ ಸರ್ಕಾರದಿಂದ ಕ್ರಮ

ಕುಕ್ಕುಟ ಉದ್ಯಮಕ್ಕೆ ಯಾವುದೇ ತೊಂದರೆಯಾಗದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ. ಪಶು ಹಾಗೂ ಕುಕ್ಕುಟ ಆಹಾರ ಉತ್ಪಾದಕರು ಕೇಂದ್ರ ಸರ್ಕಾರ ನಿಗದಿಪಡಿಸಿರುವ ರೂ. 2400 ರ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧ

ಸಿಎಂ ಬದಲಾವಣೆ: ಸರಿಯಾದ ಸಮಯದಲ್ಲಿ  ಹೈಕಮಾಂಡ್ ಸೂಕ್ತ ನಿರ್ಧಾರವೆಂದ ಡಿಕೆ ಸುರೇಶ್

“ಎಲ್ಲವೂ ಸುಸೂತ್ರವಾಗಿ ಆಗುತ್ತಿದ್ದು, ಒಂದು ಹಂತಕ್ಕೆ ಬರಲಿದೆ. “ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಪ್ರತಿಕ್ರಿಯೆ ನೀಡಿದರು. ಸಿಎಂ ಬದಲಾವಣೆ ವಿಚಾರವಾಗಿ ನೀವು

ಪಿಎಚ್‌ಡಿ ಪದವಿ ನೀಡದೆ ಕಿರುಕುಳ: ಬೆಳಗಾವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ

ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್​ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಚಿಕ್ಕೋಡಿ ಪಟ್ಟಣದಲ್ಲಿರುವ ಮನೆಯಲ್ಲಿ 19ಕ್ಕೂ ಅಧಿಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗೈಡ್‌ಗಳು ಉದ್ದೇಶಪೂರ್ವಕವಾಗಿ ಪಿಎಚ್‌ಡಿ ಪದವಿ ನೀಡದೆ ಸತಾಯಿಸಿದ್ದರಿಂದ ಬೇಸರಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಮುಂದಾಗಿದ್ದಾರೆ, ಆಕೆಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ

ಉತ್ತಮ ತರಬೇತಿ, ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವಾಗದು: ಸಿಎಂ ಸಿದ್ದರಾಮಯ್ಯ 

ಉತ್ತಮ ತರಬೇತಿ, ತರಬೇತುದಾರು ಹಾಗೂ ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 2022 ಮತ್ತು 2023ರ ಏಕಲವ್ಯ ಜೀವಮಾನ ಸಾಧನೆ ಕರ್ನಾಟಕ ಕ್ರೀಡಾರತ್ನ ಹಾಗೂ

“ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ, ಅಸೂಯೆಯಿಂದ ಅನುದಾನ ಕಡಿತ”

“ಕೇಂದ್ರ ಸರ್ಕಾರವು ನರೇಗಾ, ಜಲ ಜೀವನ್ ಮಿಷನ್ ಸೇರಿದಂತೆ ಇತರೆ ಯೋಜನೆಗಳ ವಿಚಾರದಲ್ಲಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಬೇಸರ ವ್ಯಕ್ತಪಡಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ನಡೆದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ