Menu

ಕಿಡಿಗೇಡಿಗಳ ಓಡಿಸಿದ ಗೃಹರಕ್ಷಕಿ ಸರಿಯಾದ ಬಟ್ಟೆ ಹಾಕೆಂದು ಹೇಳಿದ್ದಕ್ಕೆ ಯುವತಿಯಿಂದ ಹಲ್ಲೆ

ಬೆಂಗಳೂರಿನ ರಸ್ತೆಯಲ್ಲಿ ಯುವತಿಯ ಉಡುಪಿನ ಬಗ್ಗೆ ಅಶ್ಲೀಲವಾಗಿ ಮಾತನಾಡುತ್ತಿದ್ದ ಕಿಡಿಗೇಡಿಗಳನ್ನು ಅಲ್ಲಿಂದ ತೆರಳುವಂತೆ ಮಾಡಿ, ಯುವತಿಗೆ ಸಾರ್ವಜನಿಕ ಸ್ಥಳದಲ್ಲಿ ಸರಿಯಾದ ಬಟ್ಟೆ ಹಾಕಿಕೊಳ್ಳುವಂತೆ ಸಲಹೆ ನೀಡಿದ ಗೃಹರಕ್ಷಕ ದಳದ ಲಕ್ಷ್ಮೀ ನರಸಮ್ಮ ಮೇಲೆ ಯುವತಿ ಹಲ್ಲೆ ಮಾಡಿದ್ದು, ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಮಹದೇವಪುರ ನಾರಾಯಣಪುರದ ದಾಮಿನಿ ಎಂಬ ಯುವತಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಬಾಣಸವಾಡಿ

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ತಾನೆಂದು ಹೇಳಿಕೊಂಡ ಟ್ರಂಪ್‌

ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕದ ಪಡೆಗಳು ಬಂಧಿಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತನ್ನನ್ನು ತಾನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ‘ಟ್ರುತ್ ಸೋಷಿಯಲ್’ನಲ್ಲಿ ಹೀಗೆಂದು ಟ್ರಂಪ್‌ ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ. ಟ್ರಂಪ್

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪತ್ರಿಕೆ ಸೋರಿಕೆ: ಶಿಕ್ಷಕರು ಸೇರಿ ಎಂಟು ಮಂದಿ ಅರೆಸ್ಟ್‌

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಒಟ್ಟು ಎಂಟು ಆರೋಪಿಗಳನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ನಾನಾ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ

ಮನೆಗೆ ನುಗ್ಗಿ  ಸೆಕ್ಸ್‌ಗೆ ಪೀಡಿಸಿದ ಪಿಯುಸಿ ಹುಡುಗ: ನಿರಾಕರಿಸಿದ ಮಹಿಳಾ ಟೆಕ್ಕಿಯ ಕೊಂದು ಬೆಂಕಿ ಹಚ್ಚಿ ಪರಾರಿ

ಇತ್ತೀಚೆಗೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದ ಮಹಿಳಾ ಟೆಕ್ಕಿ ಶರ್ಮಿಳಾ ಸಾವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಪಕ್ಕದ ಮನೆಯ ಪಿಯುಸಿ ವಿದ್ಯಾರ್ಥಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಹಲ್ಲೆ ಮಾಡಿ ಬೆಂಕಿ ಹಚ್ಚಿ ಪರಾರಿಯಾಗಿರುವುದು ಪತ್ತೆಯಾಗಿದೆ. ಆರೋಪಿ ವಿರಾಜಪೇಟೆ

ನಾನು ಯಾರ ಬೆನ್ನಿಗೆ ನಿಂತಿದ್ದೆನೋ ಅವರೇ ನನ್ನ ವಿರುದ್ಧ ಬೆನ್ನಿಗೆ ಚೂರಿ ಹಾಕಿದ ಆರೋಪ ಮಾಡಿದ್ರು: ಡಿಕೆ ಶಿವಕುಮಾರ್‌

“ನಾನು ಯಾರ ಬೆನ್ನಿಗೆ ನಿಂತಿದ್ದೆನೋ ಅವರೇ ನನ್ನ ವಿರುದ್ಧ ಬೆನ್ನಿಗೆ ಚೂರಿ ಹಾಕಿದ ಆರೋಪ ಮಾಡಿದರು.  ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಾನು ಎಷ್ಟು ಪ್ರಾಮಾಣಿಕವಾಗಿ ಇದ್ದೆ ಎಂಬುದು ನನ್ನ ಆತ್ಮಸಾಕ್ಷಿಗೆ ಗೊತ್ತು. ಆದರೆ ಕುಮಾರಸ್ವಾಮಿ ಅವರು ನನ್ನ ವಿರುದ್ಧ ಬೆನ್ನಿಗೆ ಚೂರಿ

ಮೋದಿಯೊಂದಿಗೆ ಟ್ರಂಪ್ ಮೈಂಡ್ ಗೇಮ್!

ಮೈ ಬೆಸ್ಟ್ ಫ್ರೆಂಡ್ ಎಂದು ವಿದೇಶಿ ಮಾಧ್ಯಮಗಳ ಮುಂದೆ ಪ್ರತಿ ಸಾರಿಯೂ ಭಾರತದ ಪ್ರಧಾನಿಯನ್ನು ಹಾಡಿ ಹೊಗಳಿ ಅಟ್ಟಕ್ಕೇರಿಸುವ ಡೊನಾಲ್ಡ್ ಟ್ರಂಪ್, ಒಳಗೊಳಗೆ ಭಾರತಕ್ಕೆ ಚೂರಿ ಹಾಕತ್ತಿರುವುದು ಕಟುಸತ್ಯ! ಜಾಗತಿಕ ಮಟ್ಟದಲ್ಲಿ ಭಾರತದ ನೈಜ ಮತ್ತು ಸದೃಢ ಬೆಳವಣಿಗೆಗೆ ಇಂದು ದೊಡ್ಡ

ಹಾಸನದಲ್ಲಿ ಕೌಟುಂಬಿಕ ಕಲಹ: ತಂದೆಯನ್ನೇ ಕೊಂದ ಮಗ

ಕೌಟುಂಬಿಕ ಕಲಹದ ಕಾರಣ ಮಗನೊಬ್ಬ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ಸತೀಶ್ (60) ಕೊಲೆಯಾದ ತಂದೆ. ರಂಜಿತ್ (28) ತಂದೆಯನ್ನು ಕೊಲೆಗೈದ ಆರೋಪಿ. ಸತೀಶ್ ಸರಿಯಾಗಿ ಕುಟುಂಬ ನಿರ್ವಹಣೆ ಮಾಡದಿರುವುದರ ಜೊತೆಗೆ ಅಕ್ರಮ

ಇರಾನ್‌ನಲ್ಲಿ ಮುಂದುವರಿದ ಪ್ರತಿಭಟನೆ: ಹಿಂಸಾಚಾರಕ್ಕೆ ಬಲಿಯಾದವ ಸಂಖ್ಯೆ 116

ಇರಾನ್‌ ಸರ್ಕಾರದ ವಿರುದ್ಧ ಅಲ್ಲಿನ ನಾಗರಿಕರ ರಾಷ್ಟ್ರವ್ಯಾಪಿ ಪ್ರತಿಭಟನೆ ಆರಂಭವಾಗಿ 15 ದಿನಗಳಾಗಿದ್ದು, ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 116ಕ್ಕೆ ಏರಿಕೆಯಾಗಿದೆ.  ಇಂಟರ್ನೆಟ್ ಸ್ಥಗಿತಗೊಂಡಿದ್ದು, ಫೋನ್ ಸಂಪರ್ಕಗಳು ಕಡಿತಗೊಂಡಿವೆ. 2,600 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ

ಬೆಂಗಳೂರಿನ ಮೇಜರ್ ಸ್ವಾತಿ ಶಾಂತಕುಮಾರ್‌ಗೆ ಯುಎನ್‌ ಸೆಕ್ರಟರಿ ಜನರಲ್‌ ಪ್ರಶಸ್ತಿ

ದಕ್ಷಿಣ ಸೂಡಾನ್‌ನಲ್ಲಿ ನಡೆಯುತ್ತಿರುವ ಯುಎನ್ ಮಿಷನ್‌ನಲ್ಲಿ ಉತ್ತಮ ಸೇವೆ ಸಲ್ಲಿಸಿದ ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್‌ ಅವರಿಗೆ ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಪ್ರಶಸ್ತಿ  ಒಲಿದು ಬಂದಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಬೆಂಗಳೂರಿನ ಭಾರತೀಯ ಸೇನಾಧಿಕಾರಿ ಮೇಜರ್

ಧಾರವಾಡ ಕೆಸಿಡಿ ಕಾಲೇಜ್‌ ಪ್ರೊಫೆಸರ್‌ ಅಂಡಮಾನ್‌ ಪ್ರವಾಸದಲ್ಲಿ ಹೃದಯಾಘಾತಕ್ಕೆ ಬಲಿ

ಅಂಡಮಾನ್, ನಿಕೋಬಾರ್ ಪ್ರವಾಸಕ್ಕೆ ತೆರಳಿದ್ದ ಧಾರವಾಡದ ಕೆಸಿಡಿ ಕಾಲೇಜ್‌ನ ಅಸಿಸ್ಟೆಂಟ್ ಪ್ರೊಫೆಸರ್‌ವೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅರ್ಥಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದ ಎಸ್.ಅನ್ನಪೂರ್ಣ ಮೃತಪಟ್ಟವರು. ಮೂರು ದಿನಗಳ ಹಿಂದೆ ಅನ್ನಪೂರ್ಣ ಅವರು ಕುಟುಂಬದ ಜೊತೆ ಅಂಡಮಾನ್ ನಿಕೋಬಾರ್‌ನ ಫೋರ್ಟ್‍ಬ್ಲೇರ್‌ಗೆ ಹೋಗಿದ್ದರು. ಕಳೆದ