Menu

ಭಾನುವಾರ ಕೇಂದ್ರ ಬಜೆಟ್‌ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌!

ಫೆಬ್ರವರಿ 1 ಭಾನುವಾರದಂದು 2026-27ನೇ ಸಾಲಿನ ಬಜೆಟ್‌ ಮಂಡಿಸುವ ಮೂಲಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಿದ್ದಾರೆ. ಫೆಬ್ರವರಿ ೧ರಂದು ಬಜೆಟ್‌ ಮಂಡನೆಗೆ ಕೇಂದ್ರ ಸರ್ಕಾರ ದಿನಾಂಕ ನಿಗದಿಪಡಿಸಿದ್ದು, ಜನವರಿ 29ರಂದು ಆರ್ಥಿಕ ಸಮೀಕ್ಷೆ ವರದಿ ಮಂಡನೆ ಮಾಡಲಿದೆ. 1999ರಲ್ಲಿ ಮೊದಲ ಬಾರಿ ಭಾನುವಾರದಂದು ಬಜೆಟ್‌ ಮಂಡನೆ ಆಗಿದ್ದು. ಆದಾದ ನಂತರ ಇತಿಹಾಸದಲ್ಲಿ ಎರಡನೇ ಬಾರಿ ಭಾನುವಾರದಂದು ಬಜೆಟ್‌ ಮಂಡನೆ ಆಗಲಿದೆ. ಸಾಮಾನ್ಯವಾಗಿ ವಾರಾಂತ್ಯವಾದ

ಹುಬ್ಬಳ್ಳಿಯಲ್ಲಿ ಅವಮಾನಕಾರಿಯಾಗಿ ಮಹಿಳೆಯ ಬಂಧನ: ಕಾಂಗ್ರೆಸ್‌ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯೆಂದ ಆರ್‌. ಅಶೋಕ

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿ ಥಳಿಸಲಾಗಿರುವ  ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವುದು, ಮಹಿಳೆಯರ ಘನತೆಯನ್ನು ರಕ್ಷಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು  ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದ್ದಾರೆ. ಪೊಲೀಸ್

ಬಿಜೆಪಿ- ಜೆಡಿಎಸ್ ವಿಲೀನಕ್ಕೆ ಆ ಪಕ್ಷಗಳ ನಾಯಕರು ಕಾಯುತ್ತಿದ್ದಾರೆ: ಡಿಕೆ ಶಿವಕುಮಾರ್‌

“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ ‘ಆಟಕ್ಕೆ ಮೂರು ಪಕ್ಷ, ಲೆಕ್ಕಕ್ಕೆ ಮಾತ್ರ ಎರಡು ಪಕ್ಷ’ ಎಂಬ

ಗುಬ್ಬಿಯಲ್ಲಿ ಮಹಿಳೆ ಆತ್ಮಹತ್ಯೆ: ಸೊಸೆಯ ಕಾಟವೆಂಬ ಆರೋಪ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಾರೇಕುರ್ಚಿ ಗ್ರಾಮದಲ್ಲಿ ಸೊಸೆ ಕಾಟಕ್ಕೆ ಬೇಸತ್ತು ಅತ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆಯೊಂದು ನಡೆದಿದೆ. ಅತ್ತೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೊಸೆಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಭ್ರಮರಾಂಭಿಕೆ (60) ಆತ್ಮಹತ್ಯೆ ಮಾಡಿಕೊಂಡವರು. ಅನುಮಾನಾಸ್ಪದ ಸ್ಥಿತಿಯಲ್ಲಿ

ಕುಮಾರಸ್ವಾಮಿಯಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಸಿಎಂ ಶಿವಕುಮಾರ್ 

“ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ

ದೇಶದಲ್ಲಿ ಪಾಡೆಲ್ ವಿಸ್ತರಣೆಗೆ ಮಹತ್ವದ ಹೆಜ್ಜೆಯಿಟ್ಟ ಎಂಎಸ್ ಧೋನಿ

ಕ್ರಿಕೆಟ್ ದಿಗ್ಗಜ ಮಹೇಂದ್ರ ಸಿಂಗ್ ಧೋನಿ ಅವರು ಪಾಡೆಲ್ ಕ್ಷೇತ್ರದಲ್ಲಿ ತಮ್ಮ ಹೂಡಿಕೆಯನ್ನು ಮತ್ತಷ್ಟು ವಿಸ್ತರಿಸಿದ್ದು, ‘7ಪ್ಯಾಡೆಲ್ ಎಂಎಸ್ ಧೋನಿ’ ಅನ್ನು ದೇಶದ ಪ್ರಮುಖ ಪಾಡೆಲ್ ಇಕೋಸಿಸ್ಟಮ್ ಆಗಿರುವ ಪಾಡೆಲ್ ಪಾರ್ಕ್ ಇಂಡಿಯಾದೊಂದಿಗೆ ವಿಲೀನಗೊಳಿಸಿದ್ದಾರೆ. ಆಗಸ್ಟ್ 2024ರಿಂದ JSW ಸ್ಪೋರ್ಟ್ಸ್‌ನ ಸ್ಥಾಪಕ

ಮದುವೆ ಮಾಡಲಿಲ್ಲವೆಂದು ಹೊಸದುರ್ಗದಲ್ಲಿ ತಂದೆಯನ್ನೇ ಕೊಂದ ಮಗ

ಮದುವೆ ಮಾಡಿಲ್ಲ ಎಂದು ತಂದೆಯನ್ನೇ ಮಗನೊಬ್ಬ ಕೊಲೆಗೈದಿರುವ ಘಟನೆ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಅತ್ತಿಘಟ್ಟ ಗ್ರಾಮ ಕೊಲೆ ನಡೆದಿದೆ. ಸಣ್ಣ ನಿಂಗಪ್ಪ (60) ಕೊಲೆಯಾದ ವೃದ್ಧ ತಂದೆ. ಪುತ್ರ ಲಿಂಗರಾಜ್ ತಂದೆಯನ್ನೇ ಕೊಲೆಗೈದ ಆರೋಪಿ. ಮನೆಯಲ್ಲಿ ಲಿಂಗರಾಜ್‌ ಮದುವೆ ವಿಚಾರಕ್ಕೆ ಜಗಳ

ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ

ಪಶ್ಚಿಮ ಘಟ್ಟಗಳ ಸಂರಕ್ಷಣೆ ವರದಿ ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ (83) ಪುಣೆಯಲ್ಲಿ ಬುಧವಾರ  ನಿಧನರಾದರು. ಮಾಧವ ಗಾಡ್ಗೀಳ್ ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿಯ ಮಾಜಿ ಸದಸ್ಯರಾಗಿ ಮತ್ತು 2010 ರ ಪಶ್ಚಿಮ ಘಟ್ಟಗಳ ಪರಿಸರ

ಬಳ್ಳಾರಿ ಬ್ಯಾನರ್ ಗಲಭೆ: ಬಂಧನ ಭಯಕ್ಕೆ ಬಳ್ಳಾರಿ ತೊರೆದ ಯುವಕರು

ಬಳ್ಳಾರಿಯಲ್ಲಿ ಕೆಲವು ದಿನಗಳ ಹಿಂದೆ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಹಿಂಸಾಚಾರಕ್ಕೆ ತಿರುಗಿ ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಪ್ರಕರಣದ ತನಿಖೆ ತೀವ್ರಗೊಂಡಿದೆ. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 26

ಬೇರೆ ಜಾತಿಯವನೊಂದಿಗೆ ಮಗಳ ಮದುವೆ: ಚಾಮರಾಜನಗರದಲ್ಲಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಬೇರೆ ಜಾತಿ ಯುವನೊಂದಿಗೆ ಮಗಳ ಮದುವೆ ಮಾಡಿದ್ದಕ್ಕಾಗಿ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಂಡಿಗೆರೆ ಗ್ರಾಮದ ಕೃಷ್ಣರಾಜು ಎಂಬವರ ಕುಟುಂಬನ್ನು ಬಹಿಷ್ಕರಿಸಲಾಗಿದೆ. ಈ ಬಹಿಷ್ಕಾರ ತೆರವಾಗಬೇಕಾದರೆ 5 ಲಕ್ಷ ರೂ. ತಪ್ಪು ಕಾಣಿಕೆ ಕೊಡಬೇಕು ಎಂದು ಹೇಳಲಾಗಿದೆ.