Breaking
ಉಗ್ರ ನಸೀರ್‌ಗೆ ಜೈಲಿನಲ್ಲಿ ನೆರವು: ಮೂವರ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್
ಉಗ್ರ ನಸೀರ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೆರವು ಪ್ರಕರಣದಲ್ಲಿ ಮೂವರು ಆರೋಪಿಗಳ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದೆ. ಸಿಎಆರ್ ಕಾನ್ಸ್ಟೇಬಲ್ ಚಾಂದ್ ಪಾಷಾ, ಅನಿಸಾ ಫಾತಿಮಾ, ಜೈಲಿನಲ್ಲಿ ಮನೋವೈದ್ಯನಾಗಿದ್ದ ಡಾ ನಾಗರಾಜ್ ವಿರುದ್ಧ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಪರಾರಿಯಾಗಿದ್ದ ಜುನೈದ್ ಸೇರಿ ಒಂಬತ್ತು ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು, ಇದೀಗ ಮೂವರು ಆರೋಪಿಗಳ ವಿರುದ್ಧ ಎನ್‌ಐಎ ಹೆಚ್ಚುವರಿಯಾಗಿ ಚಾರ್ಜ್ ಶೀಟ್ ಸಲ್ಲಿಸಿದೆ. ಜುನೈದ್ ಅಹಮದ್ ತಾಯಿ ಅನಿಸ್
ಮಗಳಿಗೆ ಹಿಂಸಿಸುತ್ತಿದ್ದನೆಂದು ಶಿವಮೊಗ್ಗದಲ್ಲಿ ಅಳಿಯನ ಕೊಲೆಗೈದ ಮಾವ
ಶಿವಮೊಗ್ಗ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಶ್ರೀನಿಧಿ ವೈನ್ ಶಾಪ್ ಎದುರು ಮಾವನೊಬ್ಬ ಅಳಿಯನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಅರುಣ ಎಂಬಾತ ವೈನ್ ಶಾಪ್ ಮುಂದೆ ನಿಂತಿದ್ದಾಗ ಅಲ್ಲಿಗೆ ಬಂದ ಇಬ್ಬರು ರಾಡ್ನಿಂದ ದಾಳಿ ಮಾಡಿದ್ದಾರೆ, ಆತ
ಬೊಮ್ಮಾಯಿ, ಬಿಎಸ್‌ವೈ, ಡಿವಿಎಸ್ ಅವಧಿಯಲ್ಲೇ ಮನೆಗಳಿದ್ದವು: ಕೋಗಿಲು ಸಂತ್ರಸ್ತರ ಪರ “ದುಡಿಯೋ ಜನರ ವೇದಿಕೆ”
ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ವಿಚಾರದಲ್ಲಿ “ದುಡಿಯೋ ಜನರ ವೇದಿಕೆ”ಯ ಸಾಮಾಜಿಕ ಕಾರ್ಯಕರ್ತರು ನಿರಾಶ್ರಿತಗೊಂಡವರ ಬೆಂಬಲಕ್ಕೆ ನಿಂತಿದ್ದು, 2012ರಲ್ಲಿ ಫಕೀರ್ ಲೇಔಟ್‌ನಲ್ಲಿ ಮನೆಗಳಿದ್ದ ಗೂಗಲ್ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಡಿ ಇಲ್ಲಿ ಮನೆಗಳು ನಿರ್ಮಾಣಗೊಂಡಿರುವುದಲ್ಲ. ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ
ಮದುವೆ ಭರವಸೆಯಿತ್ತು ವೈದ್ಯನಿಂದ ಅತ್ಯಾಚಾರ: ಮದುವೆಯಾಗೆಂದರೆ ಖಾಸಗಿ ಪೋಟೊ ತೋರಿಸಿ ವಿದ್ಯಾರ್ಥಿನಿಗೆ ಬೆದರಿಕೆ
ಲಕ್ನೋದ KGMU ಸರ್ಕಾರಿ ವೈದ್ಯಕೀಯ ಸಂಸ್ಥೆಯ ವೈದ್ಯ ಮದುವೆಯಾಗುವುದಾಗಿ ನಂಬಿಸಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ಆಕೆಯೊಂದಿಗಿನ ಖಾಸಗಿ ಫೋಟೊಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆಯೊಡ್ಡಿರುವುದಾಗಿ ಪ್ರಕರಣ ದಾಖಲಾಗಿದೆ. ವೈದ್ಯನ ಹಿನ್ನೆಲೆ ಮತ್ತು ವಿಳಾಸಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿ ಮೊಹ್ಮದ್ ಅದಿಲ್‌ನನ್ನು ಪತ್ತೆಹಚ್ಚಲು ಪ್ರಯತ್ನಗಳು
ಕೋಗಿಲು ಪ್ರಕರಣಕ್ಕೆ ಪ್ರತಿಕ್ರಿಯಿಸಲು ರಾಜ್ಯದ ಗಡಿ ಅಡ್ಡ ಬರುವುದಿಲ್ಲವೆಂದು ಪಿಣರಾಯಿ ಸಮರ್ಥನೆ
ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯನ್ನು ‘ಬುಲ್ಡೋಜರ್ ನ್ಯಾಯ’ ಎಂದು ಟೀಕಿಸಿ, ಕರ್ನಾಟಕ ಸರ್ಕಾರದ ಆಕ್ರೋಶಕ್ಕೆ ಗುರಿಯಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ಇಂತಹ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯದ ಗಡಿ ಅಡ್ಡ ಬರುವುದಿಲ್ಲ ಎನ್ನುವ ಮೂಲಕ
ಕೋವಿಡ್ ಭ್ರಷ್ಟರ ಹೆಸರನ್ನು ಸರ್ಕಾರ ಬಹಿರಂಗಪಡಿಸಲಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ
ಕೋವಿಡ್ ಸಮಯದಲ್ಲಿ ಭ್ರಷ್ಟ ಅಧಿಕಾರಿಗಳು ಮತ್ತು ಅಂದಿನ ಮಂತ್ರಿಗಳ ಕೈಚಳಕದಿಂದ ಕೈಲಾಗದಂತಹ ಸಾವಿರಾರು ಮಂದಿ ಆಮ್ಲಜನಕದ ಸಿಲಿಂಡರ್ ಮತ್ತು ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಪ್ರಾಣ ತ್ಯಜಿಸಿದರು! ಇಂತಹವರನ್ನು ಶಿಕ್ಷೆಗೆ ಗುರಿಪಡಿಸಲು ಸಿದ್ದರಾಮಯ್ಯ ಸರ್ಕಾರ ಮೀನ- ಮೇಷ ಎಣಿಸುವ ಅಗತ್ಯವಿಲ್ಲ . ಸರ್ಕಾರಕ್ಕೆ
ನನ್ನ ಫಿನಿಶ್ ಮಾಡಲೆಂದೇ ಗುಂಡಿನ ದಾಳಿ: ಶಾಸಕ ಜನಾರ್ದನ ರೆಡ್ಡಿ
ಶಾಸಕ ಭರತ್ ರೆಡ್ಡಿ ಅಪ್ತ ಸತೀಶ್ ರೆಡ್ಡಿ ನನ್ನ ಹತ್ಯೆಗೆ ಸಂಚು ರೂಪಿಸಿದ್ದು, ನನ್ನನ್ನು ಫಿನಿಶ್ ಮಾಡಲೆಂದೇ ಈ ದಾಳಿ ಗುಂಡಿನ ದಾಳಿ ನಡೆಸಿದ್ದಾರೆ. ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ಮನೆ ಬಳಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಶಾಸಕ ಜನಾರ್ಧನ
ಬ್ಯಾನರ್ ವಿಷಯದಲ್ಲಿ ಬಿಜೆಪಿ ಬಣಗಳ ನಡುವೆ ಜಟಾಪಟಿ: ಗನ್ ಮ್ಯಾನ್ ಗಳಿಂದ ಫೈರಿಂಗ್, ಲಾಠಿಪ್ರಹಾರ
ಬ್ಯಾನರ್ ಹಾಕಿಸುವ ವಿಚಾರದಲ್ಲಿ ಬಿಜೆಪಿ ಮುಖಂಡರಾದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಬಣಗಳ ನಡುವೆ ಉಂಟಾದ ಹೊಡೆದಾಟ ವಿಕೋಪಕ್ಕೆ ತಿರುಗಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಗನ್ ಮ್ಯಾನ್ ಗಳು ಫೈರಿಂಗ್ ಮಾಡಿದ ಘಟನೆ ಬಳ್ಳಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ವಾಲ್ಮೀಕಿ
ನಮ್ಮ ಮೆಟ್ರೋಗೆ ಒಂದೇ ದಿನದಲ್ಲಿ 3 ಕೋಟಿ ರೂ. ಆದಾಯ!
2006ರ ಹೊಸ ವರ್ಷಾಚರಣೆ ಸಂಭ್ರಮದ ನಡುವೆ ನಮ್ಮ ಮೆಟ್ರೋ ಒಂದೇ ದಿನದಲ್ಲಿ 3 ಕೋಟಿಗೂ ಅಧಿಕ ಆದಾಯ ಗಳಿಸಿ ದಾಖಲೆ ಬರೆದಿದೆ. ಡಿಸೆಂಬರ್ 31ರಂದು ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ ಸಾರ್ವಜನಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 3 ಗಂಟೆಯವರೆಗೂ ರೈಲು ಸಂಚಾರ ವಿಸ್ತರಿಸಿತ್ತು. ಅಲ್ಲದೇ
ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: “ಜಿಬಿಎ ಪಾಲಿಕೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ ಬಳಿಕ ಹಾಗೂ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬೆಂಗಳೂರು ನಗರಾಭಿವೃದ್ಧಿ




