Breaking
ಹುಬ್ಬಳ್ಳಿ-ಧಾರವಾಡ ನಡುವೆ ವಿದ್ಯುತ್ ಕ್ಷಿಪ್ರ ಸಾರಿಗೆ (ERT): ಸಿಎಂ ಜೊತೆ ಸಚಿವ ಲಾಡ್ ಸಭೆ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಸುಸಜ್ಜಿತ Electric Rapid Transit (E-RT) ಯೋಜನೆ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಭೆಯಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಭಾಗವಹಿಸಿದ್ದರು. ಯೋಜನೆಯನ್ನು ಕೈಗೊಳ್ಳಲು ಮುಖ್ಯ ಅಂಶಗಳನ್ನು ಮುಖ್ಯಮಂತ್ರಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ಮೂಲಕ ಸಚಿವರು ವಿವರಿಸಿದರು. ಇಆರ್‌ಟಿ ಪರಿಚಯಿಸಲು ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿರುವ HESS ಇಂಡಿಯಾ
ರೇಡಿಯೋಲಾಜಿಸ್ಟ್‌ನಿಂದ ಲೈಂಗಿಕ ಕಿರುಕುಳ ದೂರು ನೀಡಿದಾಕೆ ವಿರುದ್ಧ ಎಫ್‌ಐಆರ್: ಆನೇಕಲ್ ಪೊಲೀಸ್ ವಿರುದ್ಧ ಸಾರ್ವಜನಿಕರ ಆಕ್ರೋಶ
ರೇಡಿಯೋಲಾಜಿಸ್ಟ್‌ನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಪ್ರಕರಣ ದಾಖಲಿಸಿದರೆ ಆನೇಕಲ್ ಪೊಲೀಸರು ಆಕೆಯ ವಿರುದ್ಧವೇ ಎಫ್‌ಐಆರ್ ದಾಖಲಿಸಿದ್ದು, ಇದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣದಾಸೆಗೆ ಪೊಲೀಸರು ಆರೋಪಿ ಪರವಾಗಿ ಸಂತ್ರಸ್ತೆಯ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ನ್ಯಾಯ ದೊರಕಿಸಿ ಕೊಡಿ
ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: ಅಡುಗೆ ಸಿಬ್ಬಂದಿ, ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ
ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ಕ್ಲಬ್ನಲ್ಲಿ ಬೆಂಕಿ ಹೊತ್ತಿಕೊಂಡು 25 ಜನ ಸಜೀವ ದಹನಗೊಂಡಿದ್ದಾರೆ. ಘಟನೆಯಲ್ಲಿ 50 ಜನರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿ 12 ಗಂಟೆಗೆ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ ಸಂಭವಿಸಿದೆ, ಕ್ಲಬ್ನ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್
ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು: ಸಿಎಂ ಸಿದ್ದರಾಮಯ್ಯ
ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ, ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು ಎಂದು ಅವರು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಅಹಿಂದ ವರ್ಗಕ್ಕೆ ಸಿದ್ದರಾಮಯ್ಯನವರ ಕೊಡುಗೆಯ ಬಗ್ಗೆ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ
ಖರೀದಿ ಮಾಡುವ ಶಕ್ತಿ ನನಗಿದೆ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಕೆ ಶಿವಕುಮಾರ್
ನನ್ನ ಶ್ರಮ, ಸಂಪಾದನೆ, ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ, ನಾನು ನನ್ನ ದುಡ್ಡಲ್ಲಿ ಎಷ್ಟು ವಾಚ್ ಬೇಕಾದರೂ ಖರೀದಿ ಮಾಡುತ್ತೇನೆ. ಖರೀದಿ ಮಾಡುವ ಶಕ್ತಿ ನನಗಿದೆ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ವಿಮಾನ ಪ್ರಯಾಣ ದರಕ್ಕೆ ಕೇಂದ್ರ ಬ್ರೇಕ್: 500 ಕಿ.ಮೀ. 7500 ರೂ. ನಿಗದಿ!
ನವದೆಹಲಿ: ಇಂಡಿಗೋ ಸಂಸ್ಥೆಯ ಎಲ್ಲಾ ದೇಶೀಯ ವಿಮಾನಗಳ ವಿಳಂಬ ಮತ್ತು ರದ್ದತಿ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳು ಬೇಕಾಬಿಟ್ಟಿ ದರ ನಿಗದಿ ಮಾಡಿ ಪ್ರಯಾಣಿಕರ ಲೂಟಿಗೆ ಮುಂದಾಗಿರುವುದಕ್ಕೆ ಕೇಂದ್ರ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ. ಕಳೆದ 5 ದಿನಗಳಿಂದ ಇಂಡಿಗೋ ಸಂಸ್ಥೆಯ ವಿಮಾನಗಳ
8 ರಿಂದ ಟಿಬಿ ಡ್ಯಾಂ 32 ಗೇಟ್ ಬದಲಾವಣೆ ಕಾರ್ಯಾರಂಭ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಡಿಸೆಂಬರ್ 8 ರಿಂದ ಜಿಲ್ಲೆಯ ಮುನಿರಾಬಾದ್‌ನಲ್ಲಿರುವ ತುಂಗಭದ್ರಾ ಜಲಾಶಯದ 32 (ಈಗಾಗಲೇ ಒಂದು ಗೇಟ್ ಬದಲಿಸಲಾಗಿದೆ.) ಕ್ರಸ್ಟ್‌ಗೇಟ್‌ಗಳನ್ನು ಬದಲಾಯಿಸುವ ಕಾರ್ಯ ಆರಂಭವಾಗಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕರ್ನಾಟಕ
ಗ್ಯಾರಂಟಿಗಳು ವ್ಯರ್ಥ ಎಂದವರಿಗೆ ಜನರೇ ಉತ್ತರ ಕೊಡಬೇಕು: ಸಿಎಂ ಸಿದ್ದರಾಮಯ್ಯ ಕರೆ
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್ ಸರ್ಕಾರ ಮಾತ್ರ ಕೊಟ್ಟ ಮಾತಿನಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಾಸನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಸನ
ಕೊಟ್ಟ ಮಾತಿನಂತೆ 142 ಭರವಸೆ ಈಡೇರಿಸಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್
ಹಾಸನ: “ನಮ್ಮದು ನುಡಿದಂತೆ ನಡೆವ ಸರ್ಕಾರ. ಕೊಟ್ಟ ಮಾತಿನಂತೆ 142 ಭರವಸೆಗಳನ್ನು ಈಗಾಗಲೇ ಈಡೇರಿಸಿದೆ. ನಮ್ಮ ಸರ್ಕಾರದ ಸಾಧನೆಗಳಿಗೆ ಜನರ ಕಣ್ಣುಗಳೇ ಸಾಕ್ಷಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಹಾಸನದಲ್ಲಿ ಶನಿವಾರ ನಡೆದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಡಿಸಿಎಂ
ಕುಲದೀಪ್ ‘ಪ್ರಸಿದ್ಧ’ ದಾಳಿ: ಕ್ವಿಂಟನ್ ಶತಕದ ಹೊರತಾಗಿಯೂ ದ. ಆಫ್ರಿಕಾ 270ಕ್ಕೆ ಆಲೌಟ್
ಆರಂಭಿಕ ಕ್ವಿಂಟನ್ ಡಿಕಾಕ್ ಶತಕದ ಹೊರತಾಗಿಯೂ ಭಾರತದ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ 270 ರನ್ ಗೆ ಆಲೌಟಾಗಿದೆ. ವಿಶಾಖಪಟ್ಟಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ




