Menu

ಜ್ಯೋತಿಷಿಯ ಮಾತಿಗೆ ಹೆದರಿ ಬೆಂಗಳೂರಿನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡರಾ?

ಬೆಂಗಳೂರು ನಗರದ ಬಾಗಲಗುಂಟೆಯ ಎಂಇಐ ಲೇಔಟ್‌ನಲ್ಲಿ ಜ್ಯೋತಿಷಿಯು ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದಕ್ಕೆ ಹೆದರಿಕೊಂಡ ಟೆಕ್ಕಿ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ವಿದ್ಯಾಜ್ಯೋತಿ (29) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಆಕೆ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿ ವರ್ಕ್ ಫ್ರಂ ಹೋಮ್‌ನಲ್ಲಿದ್ದರು. ಆಕೆಗೆ ಜ್ಯೋತಿಷಿಯೊಬ್ಬರು ನೀನು ಅಲ್ಪಾಯುಷಿ ಎಂದು ಭವಿಷ್ಯ ನುಡಿದಿ ದ್ದರು. ಹೀಗಾಗಿ ಮನೆಯವರು, ಅಪ್ಪ, ಅಮ್ಮ ಮಗಳ ಆಸೆಯಂತೆ ಎಲ್ಲವನ್ನೂ ಮಾಡಿದ್ದರು. ಕೊಡಗು ಮೂಲದ ಯುವಕನ ಪ್ರೀತಿಸುತ್ತಿದ್ದ

ನನ್ನ ಪರ ಯಾರೂ ದೆಹಲಿಗೆ ಹೋಗ್ಬೇಕಿಲ್ಲ, ನಾವು ಹಳಬರಾಗಿದ್ದೇವೆ, ಹೊಸಬರಿಗೆ ಮಂತ್ರಿಯಾಗುವ ಆಸೆ: ಡಿಕೆ ಶಿವಕುಮಾರ್

“ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಖಾಸಗಿ ಹೋಟೆಲ್ ಹಾಗೂ ಅರಮನೆ ಮೈದಾನದ ಗಾಯತ್ರಿ ವಿಹಾರ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ಗುರುವಾರ ಸಭೆ ಸೇರಿದ್ದ ಸಚಿವರು, ಶಾಸಕರು ದೆಹಲಿಗೆ ಹೋಗಿ

ಲಿಟಿಗೇಷನ್‌ ಮುಕ್ತ ನೇಮಕಾತಿಯೇ ಸರ್ಕಾರದ ಮುಂದಿನ ದೊಡ್ಡ ಸವಾಲು

ಸರ್ಕಾರದ ಮೇಲೆ ಯುವಜನತೆಗೆ ಸಂಪೂರ್ಣ ನಂಬಿಕೆ ಹಾಗೂ ವಿಶ್ವಾಸ ಉಂಟಾಗುವುದು ಘೋಷಿತ ಹುದ್ದೆಗಳ ನೇಮಕಾತಿ ಪ್ರಕ್ರಿಯೆ, ಯಾವ ಲಿಟಿಗೇಷನ್ ಚಕ್ರವ್ಯೂಹಕ್ಕೂ ಸಿಲುಕದೆ ಇದು ಪೂರ್ಣಗೊಂಡಾಗ ಮಾತ್ರ. ಸರ್ಕಾರವೀಗ ಘೋಷಿಸಿರುವ ಹುದ್ದೆಗಳ ಭರ್ತಿ ಯುವ ಸಮೂಹಕ್ಕೆ ಬಹುದೊಡ್ಡ ಪರಿಹಾರ ಎಂಬುದು ಗೋಚರಿಸಿದರೂ, ಕಾನೂನು

ಗಂಡನ ಚಿಕಿತ್ಸೆಗಾಗಿ ಕೆಲಸ ಮಾಡುತ್ತಿದ್ದ ಮನೆಯಲ್ಲಿ ಬೆಳ್ಳಿ ಕದ್ದ ಮಹಿಳೆಯ ಬಂಧನ

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಂಡನ ಚಿಕಿತ್ಸೆ ವೆಚ್ಚಕ್ಕಾಗಿ ಮಹಿಳೆ ಬೆಂಗಳೂರಿನಲ್ಲಿ ತಾನು ಕೆಲಸ ಮಾಡುತ್ತಿದ್ದ ಮನೆಯಿಂದಲೇ 12.5 ಕೆಜಿ ಬೆಳ್ಳಿ ಕಳವು ಮಾಡಿದ್ದು, ಪೊಲೀಸರು ಬಂಧಿಸಿದ್ದಾರೆ.  ಜೀವನ್ ಭೀಮಾ ನಗರ ಪೊಲೀಸರು ಆರೋಪಿ ಚೈತ್ರಾ ಎಂಬಾಕೆಯನ್ನು ಬಂಧಿಸಿ 35 ಲಕ್ಷ ರೂ. ಮೌಲ್ಯದ

2028ರ ವೇಳೆಗೆ 50 ಸಾವಿರ ವಿದ್ಯಾರ್ಥಿಗಳಿಗೆ ಎವಿಜಿಸಿ-ಎಕ್ಸ್ ಆರ್ ತರಬೇತಿ; ಡಿಸಿಎಂ

ಎವಿಜಿಸಿ- ಎಕ್ಸ್ ಆರ್ ವಿಭಾಗದಲ್ಲಿ 2028 ರ ವೇಳೆಗೆ ಸುಮಾರು 50,000 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ.  70% ಉದ್ಯೋಗಿಗಳು ಸೃಜನಶೀಲ ವೃತ್ತಿಪರರಾಗಿದ್ದಾರೆ. ಈ ಮೂಲಕ, 2028 ರ ವೇಳೆಗೆ 30,000 ಕ್ಕೂ ಹೆಚ್ಚು ಉತ್ತಮ ಗುಣಮಟ್ಟದ ಉದ್ಯೋಗಗಳನ್ನು ಸೃಷ್ಟಿಸುವ

ಮಾಜಿ ಸಿಎಂ ದಿ. ಕೆಸಿ ರೆಡ್ಡಿಯವರ ಆದರ್ಶಗಳು ನಮಗೆ ಸ್ಫೂರ್ತಿ: ಸಿದ್ದರಾಮಯ್ಯ

ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ದಿವಂಗತ ಕೆಸಿ ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ ಹಾಗೂ ಮಾರ್ಗದರ್ಶನ ನೀಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಅವರು  ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿ ಯವರ ಪುಣ್ಯ ತಿಥಿಯ

ಕಮಿಶನ್‌ ಆಸೆಗಾಗಿ ಕ್ರೀಡಾಂಗಣ, ಕೆಎಸ್‌ಐಸಿ ಮುಚ್ಚಿಹಾಕುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌ ಅಶೋಕ

ಕಮಿಶನ್‌ ಆಸೆಗಾಗಿ ಹಾಗೂ ಕೆಎಸ್‌ಐಸಿ ಮುಚ್ಚಿಹಾಕಲು ಕಾರ್ಖಾನೆಯ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ. ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ

ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ

ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಆಗ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ಮಾಹಿತಿ ಮುಚ್ಚಿಟ್ಟ ಆರೋಪದ ಹಿನ್ನೆಲೆ ಅವರ ಆಯ್ಕೆ ರದ್ದುಗೊಂಡಿತ್ತು.

GAFX ಕ್ಷೇತ್ರವು ಕೇವಲ ಆರ್ಥಿಕ ಅವಕಾಶವಲ್ಲ, ಒಂದು ನಾಗರಿಕತೆಗೆ ನೀಡಿರುವ ಅವಕಾಶ: ಸಿಎಂ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿ ಉದ್ಘಾಟಿಸಿ, GAFX ಕ್ಷೇತ್ರವು ಕೇವಲ ಆರ್ಥಿಕ ಅವಕಾಶವಲ್ಲ; ಇದು ಒಂದು ನಾಗರಿಕತೆಗೆ ನೀಡಿರುವ ಅವಕಾಶ. ಇದು ಯುವಜನರಿಗೆ ತಮ್ಮ ಕಲ್ಪನಾಶಕ್ತಿಯನ್ನು ಜೀವನೋಪಾಯವಾಗಿ ಪರಿವರ್ತಿಸಲು , ಕಥೆಗಾರರಿಗೆ ತಮ್ಮ ಕಥಾನಿರೂಪಣೆಗೆ ಡಿಜಿಟಲ್

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.