Menu

ಚಾಮರಾಜನಗರಕ್ಕೆ ಬಂದಿರುವ ನನ್ನ ಅಧಿಕಾರ ಭವಿಷ್ಯದಲ್ಲಿಯೂ ಭದ್ರ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ  ಸಿಎಂ  ಮಾತನಾಡಿದರು.  ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ.  ಮೂಢನಂಬಿಕೆ ಮತ್ತು ಕಂದಾಚಾರ ನಂಬುವು ದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು,

ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ., ಮೃತಪಟ್ಟವರ ಕುಟುಂಬಕ್ಕೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರ ಪರಿಶೀಲನಾ ಮತ್ತು ಪರಿಹಾರಧನ ವಿತರಣೆ ಸಮಿತಿಯನ್ನು

ನಿತೀಶ್‌ ಕುಮಾರ್‌ ಬಿಹಾರ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕಾರ

10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದರು. ಬಿಹಾರ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌

ಬೆಂಗಳೂರಿನಲ್ಲಿ 7 ಕೋಟಿ ರೂ. ದರೋಡೆ: ತಿರುಪತಿಯಲ್ಲಿ ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ಬುಧವಾರ ಎಟಿಎಂಗೆ ಹಣ ಹಾಕುವ ಕಾರು ತಡೆದು 7 ಕೋಟಿ ರೂ. ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ತಿರುಪತಿಯಲ್ಲಿ ಬಂಧಿಸಿದ್ದಾರೆ.  ಹೇಮಂತ್, ಸುನೀಲ್  ಬಂಧಿತ ಆರೋಪಿಗಳಾಗಿದ್ದು, ದರೋಡೆಗೆ ಬಳಸಿದ್ದಾರೆ ಎನ್ನಲಾದ ಕಾರನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಯನಗರದ ಅಶೋಕ

ಮಸೂದೆ ಅಂಗೀಕಾರಕ್ಕೆ ರಾಷ್ಟ್ರಪತಿ, ರಾಜ್ಯಪಾಲರಿಗೆ ಕಾಲಮಿತಿ ಇಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಮಸೂದೆಗಳನ್ನು ಅಂಗೀಕಾರ ನೀಡಲು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನೇತೃತ್ವದ ಸಾಂವಿಧಾನಿಕ ಪೀಠ ಗುರುವಾರ ನಿಗದಿತ ಕಾಲಮಿತಿಯೊಳಗೆ ಮಸೂದೆಗಳ ಕುರಿತು ತೀರ್ಮಾನ ಕೈಗೊಳ್ಳುವಂತೆ ರಾಷ್ಟ್ರಪತಿ

ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಮಿತಿ ಹೆಚ್ಚಳಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ

ಬೆಳ್ತಂಗಡಿಯಲ್ಲಿ ಸ್ಕೂಟಿಗೆ ಕಾರು ಡಿಕ್ಕಿ: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು

ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿ ಕಾರು ಹಾಗೂ ಸ್ಕೂಟಿ ಮಧ್ಯೆ ನಡೆದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಅಂತಿಮ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ 21 ವರ್ಷದ ಅನನ್ಯಾ ಮೃತಪಟ್ಟ ವಿದ್ಯಾರ್ಥಿನಿ. ಈಕೆ ಕಡಬದ ಸುನೀಲ್ ಎಂಬವರ ಪುತ್ರಿ. ಸ್ಕೂಟಿಯಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿ

ಬಳ್ಳಾರಿಯಲ್ಲಿ ಜೀನ್ಸ್‌ಪಾರ್ಕ್‌ ಎಲ್ಲಿ: ರಾಹುಲ್‌ ಗಾಂಧಿಗೆ ಆರ್‌ ಅಶೋಕ ಪ್ರಶ್ನೆ

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ “ಜೀನ್ಸ್ ಪಾರ್ಕ್” ಮಾಡುತ್ತೇವೆ, ಬಳ್ಳಾರಿಯನ್ನು “ಜೀನ್ಸ್ ರಾಜಧಾನಿ” ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡಿದ್ದ @INCKarnataka ಪಕ್ಷ ಈಗ ಸರಿಯಾದ ಮೂಲಸೌಕರ್ಯವಿಲ್ಲದೆ 36 ಜೀನ್ಸ್ ತಯಾರಿಕಾ ಘಟಕಗಳು ಮುಚ್ಚುವ ಪರಿಸ್ಥಿತಿ ತಂದಿಟ್ಟಿದೆ. ಇದರಿಂದ 2 ಲಕ್ಷಕ್ಕೂ ಹೆಚ್ಚು

ಗಣಿ ಅಧಿಕಾರಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಾರಿಗೆ ಸಿಲುಕಿ ಟಿಪ್ಪರ್‌ ಚಾಲಕ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್‌ನ ಕೃಷ್ಣ ಕನ್ವೆನ್ಷನ್‌ ಸೆಂಟರ್ ಬಳಿ ಗಣಿ ಅಧಿಕಾರಿಗೆ ಹೆದರಿ ಓಡಿ ಹೋಗುವಾಗ ಕಾರಿಗೆ ಅಡ್ಡ ಸಿಕ್ಕಿ ಟಿಪ್ಪರ್‌ ಚಾಲಕ ಮೃತಪಟ್ಟಿರುವ ಘಟನೆಯೊಂದು ನಡೆದಿದೆ. ರಾಯಚೂರು ಲಿಂಗಸೂರಿನ ರಮೇಶ್ (35) ಮೃತಪಟ್ಟಿರುವ ಚಾಲಕ. ಟಿಪ್ಪರ್ ಲಾರಿ ಚೇಸ್

ಬೇಲೂರಿನ ಮನೆಯೊಂದರಲ್ಲಿ ಮಹಿಳೆಯ ನಗ್ನ ಶವ ಪತ್ತೆ

ಬೇಲೂರು ಪಟ್ಟಣದ ಗಾಣಿಗರ ಬೀದಿಯ ಮನೆಯೊಂದರಲ್ಲಿ ಮಹಿಳೆಯ ಶವ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನ (34) ಎಂದು ಗುರುತಿಸಲಾಗಿದೆ. ಈ ಮಹಿಳೆ ಪತಿಯಿಂದ ದೂರಾಗಿ ಎಂಟು ದಿನಗಳ ಹಿಂದೆ ಬೇಲೂರಿನಲ್ಲಿ ಬಾಡಿಗೆ ಮನೆಗೆ ಬಂದು