Menu

ಯಾರು ಎಷ್ಟೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ: ಡಿಕೆ ಶಿವಕುಮಾರ್ 

ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಈ ಹಿಂದಿನ ಗಣತಿ ಸರಿಯಿಲ್ಲ ಎಂದರು. ಅದಕ್ಕೆ ಹೊಸದಾಗಿ ಗಣತಿ ಮಾಡಲಾಗುತ್ತಿದೆ. ಎಲ್ಲರೂ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದರು. ಎರಡು ಮೂರು ದಿನಗಳಲ್ಲಿ ಸಮೀಕ್ಷೆ

ಕಾಂತಾರ ವೀಕ್ಷಿಸಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಜೆ ಕಾಂತಾರ-1 ವೀಕ್ಷಿಸಲಿದ್ದಾರೆ. ಇತ್ತೀಚೆಗೆ ಭಾರತೀಯ ಅಂಚೆ ವಿಭಾಗದಿಂದ ಕಾಂತಾರಗೆ ವಿಶೇಷ ಗೌರವ ಲಭಿಸಿತ್ತು. ಅಂಚೆ ಲಕೋಟೆಗಳ ಮೇಲೆ ಕಾಂತಾರ ಚಿತ್ರದ ಪೋಸ್ಟರ್‌ಗಳನ್ನು ಪ್ರಕಟಿಸಿತ್ತು. ಅಂಚೆ ವಿಭಾಗದ ಜೊತೆ ಕೈ

ವಿಕಿಪೀಡಿಯಾಗೆ ಪ್ರತಿಯಾಗಿ ಗ್ರೋಕಿಪೀಡಿಯಾ ಶೀಘ್ರ ಬಿಡುಗಡೆ: ಎಲಾನ್‌ ಮಸ್ಕ್‌

ಟೆಸ್ಲಾ ಮುಖ್ಯಸ್ಥ ವಿಶ್ವದ ನಂಬರ್‌ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌ ವಿಕಿಪೀಡಿಯಾಗೆ ಪ್ರತಿಯಾಗಿ ಗ್ರೋಕಿಪೀಡಿಯಾ ತರುವುದಾಗಿ ಘೋಷಣೆ ಮಾಡಿದ್ದು ಆರಂಭಿಕ ಆವೃತ್ತಿಯನ್ನು ಮುಂದಿನ ಎರಡು ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಗ್ರೋಕಿಪೀಡಿಯಾ ಜನರು ಮತ್ತು ಎಐ ಬಳಕೆಗೆ ಯಾವುದೇ ಮಿತಿಗಳಿಲ್ಲದೆ

ಸಾಹಿತಿ ಮೊಗಳ್ಳಿ ಗಣೇಶ್‌ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಸಾಹಿತಿ, ವೈಚಾರಿಕ ವಿಮರ್ಶಕ,ಕಥೆಗಾರ, ಕಾದಂಬರಿಕಾರ, ಪ್ರಬಂಧಕಾರ ಡಾ. ಮೊಗಳ್ಳಿ ಗಣೇಶ್‌ (೬೨) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ.  ಅಂತ್ಯಕ್ರಿಯೆಯು ಇಂದು (ಭಾನುವಾರ) ಸಂಜೆ ಹುಟ್ಟೂರು ಮೊಗಳ್ಳಿ

ಮುಖ್ಯಮಂತ್ರಿ- ಫಾಕ್ಸ್‌ಕಾನ್‌ ಮುಖ್ಯಸ್ಥ ರಾಬರ್ಟ್‌ ಚರ್ಚೆ

ಐಫೋನ್ ಮತ್ತು ಅದರ ಬಿಡಿಭಾಗಗಳ ತಯಾರಿಕೆಗೆ ಹೆಸರಾಗಿರುವ ಫಾಕ್ಸ್‌ಕಾನ್‌ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್‌ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಇಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್‌

ನೀರಿನ ಡ್ರಮ್‌ನಲ್ಲಿ ಮಗುವನ್ನು ಮುಳುಗಿಸಿ ಕೊಂದು ತಂದೆ ಆತ್ಮಹತ್ಯೆ

ನಾಲ್ಕು ತಿಂಗಳ ಗಂಡು ಮಗುವನ್ನು ನೀರಿನ ಡ್ರಮ್​​ನಲ್ಲಿ ಮುಳುಗಿಸಿ ಹತ್ಯೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಜಿಯೋರೈ ತಾಲೂಕಿನ ತಲ್ವಾಡಾ ಗ್ರಾಮದಲ್ಲಿ ನಡೆದಿದೆ. ತಂದೆ ಅಮೋಲ್ ಸೋನಾವಾನೆ ತನ್ನ ಮಗನನ್ನು ಅರ್ಧ ನೀರು ತುಂಬಿದ

ಕೆಮ್ಮು ಸಿರಫ್‌ ಸೇವಿಸಿದ ಮಕ್ಕಳ ಸಾವು: ವೈದ್ಯನ ಬಂಧನ

ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ವೈದ್ಯನನ್ನು ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಬಂಧಿಸಲಾಗಿದೆ. ಮಕ್ಕಳ ತಜ್ಞ ಡಾ. ಪ್ರವೀಣ್ ಸೋನಿಯ ಚಿಕಿತ್ಸಾಲಯದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ವೈದ್ಯ ಕೋಲ್ಡ್ರಿಫ್ ಸಿರಪ್

ಮಳೆಹಾನಿ: ಸರ್ವಪಕ್ಷದ ಸಭೆ ಕರೆಯಿರಿ, ಕೇಂದ್ರಕ್ಕೆ ನಿಯೋಗ ಹೋಗಿ ಎಂದ ಆರ್‌.ಅಶೋಕ

ಬಿಜೆಪಿ ವತಿಯಿಂದ ಉತ್ತರ ಕರ್ನಾಟಕದಲ್ಲಿ ಎರಡು ದಿನಗಳಿಂದ ಮಳೆ ಹಾನಿ ಪರಿಶೀಲನೆ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್‌ ಸರ್ಕಾರದಿಂದ ಯಾರೂ ಬಂದು ಪರಿಶೀಲನೆ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ 10-12 ಲಕ್ಷ ಹೆಕ್ಟೇರ್‌ನಷ್ಟು

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಅಕ್ಕ ಕೆಫೆ

ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದೆ. ಅಭಿಯಾನದ ಉದ್ದೇಶ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನದ ಪ್ರಮಾಣವನ್ನು ಕಡಿಮೆ ಮಾಡುವುದಾಗಿದೆ. ಅಭಿಯಾನದಡಿ ಸ್ವಸಹಾಯ ಗುಂಪುಗಳ ಮಹಿಳೆಯರೆ ನಿರ್ವಹಿಸಲು

ಲೋಕಾಯುಕ್ತ ಅಧಿಕಾರಿಯೆಂದು ಬೆದರಿಸಿ ಹಣಕ್ಕೆ ಬೇಡಿಕೆ: ಆರೋಪಿ ಅರೆಸ್ಟ್‌

ರಾಮನಗರದ ಐಜೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುರೇಗಪ್ಪ ಬಂಧಿತ ಆರೋಪಿ. ಮುರೇಗಪ್ಪ ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಕರೆ