Breaking
ಬೆಂಗಳೂರು ಸೇರಿ ಬೆಸ್ಕಾಂ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 30 ರವರೆಗೆ ವಿದ್ಯುತ್ ವ್ಯತ್ಯಯ
ಬೆಸ್ಕಾಂ ವ್ಯಾಪ್ತಿಯಲ್ಲಿ 15 ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಘೋಷಿಸಿದೆ. ಇಂದಿನಿಂದ ಸೆಪ್ಟೆಂಬರ್ 30 ರವರೆಗೆ ಬೆಂಗಳೂರು ಸೇರಿ ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಇರಲಿದೆ. ತುರ್ತು ನಿರ್ವಹಣೆ ಸಂಬಂಧ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ. ಸರ್ಜಾಪುರ-ಅತ್ತಿಬೆಲೆ 66 ಕೆವಿ ಲೈನ್ನ ಸಿಂಗಲ್-ಸರ್ಕ್ಯೂಟ್ ಹೆಚ್ಟಿಎಲ್ಎಸ್ ಕಂಡಕ್-ಟರ್ನ ತಂತಿಯನ್ನು ದುರಸ್ತಿಗೊಳಿಸಲು ಸೆಪ್ಟೆಂಬರ್ 19, 20 ಮತ್ತು 21
ಗದಗ ರಸ್ತೆ ಅಪಘಾತ: ಇಬ್ಬರು ಪೊಲೀಸ್ ಸೇರಿ ಮೂವರ ಸಾವು
ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಕಾರು ಮತ್ತು ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಕಾನ್ಸ್ಟೇಬಲ್ಗಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ಗಳಾದ ಅರ್ಜುನ್ ನೆಲ್ಲೂರ(29) ಮತ್ತು ವೀರೇಶ್ ಉಪ್ಪಾರ(31) ಹಾಗೂ ಅರ್ಜುನ್ ಚಿಕ್ಕಪ್ಪ
ಚಾಮರಾಜನಗರದಲ್ಲಿ ವಿಚಿತ್ರ ರೋಗಕ್ಕೆ ಜಾನುವಾರುಗಳು ಬಲಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಕಳೆದೊಂದು ತಿಂಗಳಲ್ಲಿ ವಿಚಿತ್ರ ರೋಗದಿಂದ 15 ಜಾನುವಾರುಗಳು ಮೃತಪಟ್ಟಿವೆ. ದೇಹದ ಮೇಲೆಲ್ಲ ಗುಳ್ಳೆ ಎದ್ದು ರಕ್ತ ಸುರಿದು ಜಾನುವಾರುಗಳು ಸಾಯುತ್ತಿರುವುದು ಪಶು ಸಾಕಣೆದಾರರಲ್ಲಿ ಆತಂಕ ಸೃಷ್ಟಿಸಿದೆ. ವಿಚಿತ್ರ ಗುಳ್ಳೆ ರೋಗ ಕಾಣಿಸಿಕೊಂಡ
ಮೈಸೂರಿನಲ್ಲಿ ನದಿಗೆ ಹಾರಿದ ಯುವತಿ, ಹಾಸನದಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ
ಹುಣಸೂರು ತಾಲೂಕು ಲಕ್ಷ್ಮಣ ತೀರ್ಥ ನದಿ ತೂಗುಸೇತುವೆ ಬಳಿ ನೀರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ಪುತ್ರಿ ದೀಪಿಕಾ ಆತ್ಮಹತ್ಯೆಗೆ ಮಾಡಿಕೊಂಡ ಯುವತಿ. ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ವಿಶ್ವಕವಿ ಕುವೆಂಪು ಕಾಲೇಜಿನಲ್ಲಿ ದ್ವಿತೀಯ
ಮಳಖೇಡದಲ್ಲಿ ಯುವತಿಯ ಹತ್ಯೆ: ಏಳು ದಿನದ ಬಳಿಕ ಶವ ಪತ್ತೆ
ಮಳಖೇಡದಲ್ಲಿ ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಏಳು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಲಬುರಗಿಯ ಜಿಲ್ಲೆ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿ ಆವರಣದಲ್ಲಿ ಮೃತದೇಹ ಸಿಕ್ಕಿದ್ದು, ಭಾಗ್ಯಶ್ರೀ ಸುಲಹಳ್ಳಿ
ನಮ್ಮ ಪಕ್ಷ, ನಮ್ಮ ಸರ್ಕಾರ ಯಾವುದೇ ಸಮಾಜವನ್ನು ವಿಭಜಿಸಲು ಇಚ್ಚಿಸುವುದಿಲ್ಲ: ಡಿಸಿಎಂ
“ನಮ್ಮ ಪಕ್ಷ, ನಮ್ಮ ಸರ್ಕಾರವು ಯಾವುದೇ ಸಮಾಜವನ್ನು ವಿಭಜಿಸಲು ಇಚ್ಚಿಸುವುದಿಲ್ಲ. ಎಲ್ಲರಿಗೂ ನ್ಯಾಯ ಒದಗಿಸಿಕೊಡುವ ಉದ್ದೇಶದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ನಡೆಸುತ್ತಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಹಿಂದುಳಿದ ವರ್ಗಗಳ ಆಯೋಗವು
ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್ ನಾಯಕರು ಹೊರತು ದಾಖಲೆ ನೀಡಲಿ: ಆರ್.ಅಶೋಕ
ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್ ನಾಯಕರು ಮಾಧ್ಯಮಗಳ ಮುಂದೆ ಮಾತಾಡುತ್ತಾರೆಯೇ ಹೊರತು ದಾಖಲೆಗಳನ್ನು ನೀಡಲ್ಲ. ಮಾಲೂರು ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಮೊದಲು ಮಾತಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ
ಪ್ರವಾಸೋದ್ಯಮ ಹಾಗೂ ಹೋಟೆಲ್ ಉದ್ಯಮದಲ್ಲಿ ಹೂಡಿಕೆಗೆ ರಾಜ್ಯ ಪ್ರಶಸ್ತ: ಡಿಕೆ ಶಿವಕುಮಾರ್
“ಕರ್ನಾಟಕ ಪ್ರಾಕೃತಿಕವಾಗಿ, ಸಾಂಸ್ಕೃತಿವಾಗಿ ಸದೃಡವಾಗಿದೆ. ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ ಸೇರಿದಂತೆ ಪ್ರತಿಯೊಂದು ಭಾಗವೂ ವೈಶಿಷ್ಟ್ಯ ಪೂರ್ಣವಾಗಿವೆ. ಪ್ರವಾಸೋದ್ಯಮ ಹಾಗೂ ಹೋಟೆಲ್ ಉದ್ಯಮದ ಮೇಲೆ ಹೂಡಿಕೆ ಮಾಡಲು ನಮ್ಮ ರಾಜ್ಯ ಪ್ರಶಸ್ತ್ಯವಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನಲ್ಲಿ ನಡೆದ
ಸ್ಪೇಸ್ ಟೆಕ್: ಶ್ರೇಷ್ಠತಾ ಕೇಂದ್ರ ಸ್ಥಾಪಿಸಲು ಸರ್ಕಾರ ಅನುಮೋದನೆ: ಪ್ರಿಯಾಂಕ್ ಖರ್ಗೆ
ಮುಂದಿನ ಒಂದೂವರೆ ವರ್ಷಗಳ ಅವಧಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಬಾಹ್ಯಾಕಾಶ ತಂತ್ರಜ್ಞಾನ (ಸ್ಪೇಸ್ ಟೆಕ್) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶ್ರೇಷ್ಠತಾ ಕೇಂದ್ರ (ಸೆಂಟರ್ ಆಫ್ ಎಕ್ಸಲೆನ್ಸ್ -CoE) ಸ್ಥಾಪಿಸಲು ಸರ್ಕಾರ ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ
ಬಂಗಾರಪೇಟೆ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ನಿರ್ಣಯ
ಬಂಗಾರಪೇಟೆ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟವು ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಂಡಿದ್ದು, ಅವು ಹೀಗಿವೆ ಸಹಕಾರ ಇಲಾಖೆಯಡಿ ಬೆಂಗಳೂರಿನ ದಾಸನಪುರ,ಕೋಲಾರ, ಮೈಸೂರು ಎಪಿಎಂಸಿಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ)




