Breaking
ಗ್ಯಾರಂಟಿಗಾಗಿ 2.5 ಲಕ್ಷ ಕೋಟಿ ಸಾಲ ಮಾಡಿದ ಸರ್ಕಾರ: ಸಿಎಜಿ ವರದಿ
ಬೆಂಗಳೂರು: ಪಂಚ ಗ್ಯಾರಂಟಿಗಳಿಂದ ರಾಜ್ಯದ ಸಾಲದ ಪ್ರಮಾಣ ಹೆಚ್ಚುತ್ತಿರುವುದಾಗಿ ಸಿಎಜಿ ತನ್ನ ವರದಿಯಲ್ಲಿ ಆತಂಕ ವ್ಯಕ್ತಪಡಿಸಿದೆ. ಗ್ಯಾರಂಟಿ ಅನುಷ್ಠಾನದ ಮೊದಲ ವರ್ಷದಲ್ಲೇ ರಾಜ್ಯದ ಸಾಲದ ಮೊತ್ತದಲ್ಲಿ ಗಣನೀಯ ಏರಿಕೆ ಆಗಿದ್ದು, ಕಳೆದೆರಡು ವರ್ಷದಲ್ಲಿ 2.5 ಲಕ್ಷ ಕೋಟಿ ಸಾಲ ಮಾಡಲಾಗಿದೆ ಎಂದು ಸಿಎಜಿ ವರದಿ ನೀಡಿದೆ. ಪಂಚ ಗ್ಯಾರಂಟಿ ಯೋಜನೆಗಳಿಗಾಗಿ 2023ರಿಂದ ಜುಲೈ 2025ರ ವರೆಗೆ ಬರೋಬ್ಬರಿ 95,000 ಕೋಟಿ ರೂ. ಹಣ ವಿನಿಯೋಗ ಮಾಡಲಾಗಿದೆ ಎಂದು ಪಂಚ ಗ್ಯಾರಂಟಿ
ಅಕ್ಟೋಬರ್ ನಲ್ಲಿ 800 ಕೆಪಿಎಸ್ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ಅಕ್ಟೋಬರ್ನಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು. ಈ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಶಿವಮೊಗ್ಗದಲ್ಲಿಯೇ ಚಾಲನೆ ನೀಡಲಿದ್ದಾರೆ ಎಂದು ಸಾಕ್ಷರತಾ ಹಾಗೂ ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ. ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 800 ಕೆಪಿಎಸ್
ಅತ್ಯಾಚಾರ ಪ್ರಕರಣದ ಬಂಧಿತ ಶಾಸಕ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿ
ಅತ್ಯಾಚಾರ ಪ್ರಕರಣದಲ್ಲಿ ಬಂಧಿತ ಪಂಜಾಬ್ ಎಎಪಿ ಶಾಸಕ ಮತ್ತು ಸಹಚರರು ಪೊಲೀಸರ ಮೇಲೆ ಗುಂಡು ಹಾರಿಸಿ ವಾಹನಗಳಲ್ಲಿ ಪರಾರಿಯಾಗಿದ್ದು ಪೊಲೀಸರು ಬಂಧಿಸಲು ಕಾರ್ಯಾಚರಣೆ ಕೈಗೊಂಡಿದ್ದಾರೆ. ರೇಪ್ ಕೇಸ್ನಲ್ಲಿ ಸನೂರ್ನ ಎಎಪಿ ಶಾಸಕ ಹರ್ಮೀತ್ ಪಠಾಣಮಜ್ರಾ ಅವರನ್ನು ಕರ್ನಾಲ್ನಲ್ಲಿ ಬಂಧಿಸಿ ಸ್ಥಳೀಯ ಪೊಲೀಸ್
ಧರ್ಮಸ್ಥಳ ಪ್ರಕರಣದಲ್ಲಿ ಫಾರಿನ್ ಫಂಡ್ ಆರೋಪ: ತನಿಖೆಗೆ ಮುಂದಾದ ಇಡಿ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಹಣಕಾಸು ವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಜಾರಿ ನಿರ್ದೇಶನಾಲಯ ತನಿಖೆಗೆ ಮುಂದಾಗಿದೆ. ವಿದೇಶಿ ಎನ್ಜಿಒಗಳಿಂದ ಹಣ ಬಂದಿದೆಯೇ ಎಂಬ ವಿಚಾರ ತಿಳಿಯಲು ಒಡನಾಡಿ ಹಾಗೂ ಸಂವಾದ ಸಂಸ್ಥೆಗಳ ಅಕೌಂಟ್ ಗಳ ಬಗ್ಗೆ ಇಡಿ
ಮಕ್ಕಳ ಅಪಹರಣ ಜಾಲ ಬೇಧಿಸಿದ ಹೈದ್ರಾಬಾದ್ ಪೊಲೀಸರಿಂದ ಆರು ಮಂದಿಯ ರಕ್ಷಣೆ
ಹೈದ್ರಾಬಾದ್ನಲ್ಲಿ ಐದು ವರ್ಷಗಳಿಂದ ನಡೆಯುತ್ತಿದ್ದ ಮಕ್ಕಳ ಅಪಹರಣ ಜಾಲವನ್ನು ಪೊಲೀಸರು ಪತ್ತೆಹಚ್ಚಿ ಐವರು ಆರೋಪಿಗಳನ್ನು ಬಂಧಿಸಿ ಆರು ಮಕ್ಕಳನ್ನು ರಕ್ಷಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಹೈದರಾಬಾದ್, ಸೈಬರಾಬಾದ್ ಮತ್ತು ಸಂಗರೆಡ್ಡಿ ಜಿಲ್ಲೆಗಳಲ್ಲಿ ಐದು ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಈ ಜಾಲ ಕಾರ್ಯನಿರ್ವಹಿಸುತ್ತಿತ್ತು. ಹೆಚ್ಚು
ಬಿಆರ್ ಎಸ್ ಪಕ್ಷದಿಂದ ಮಗಳನ್ನೇ ಅಮಾನತುಗೊಳಿಸಿದ ತಂದೆ ಚಂದ್ರಶೇಖರ್ ರಾವ್!
ಹೈದರಾಬಾದ್: ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಪುತ್ರಿ ಕೆ.ಕವಿತಾರನ್ನು ಬಿಆರ್ ಎಸ್ ಪಕ್ಷದ ವರಿಷ್ಠರಾಗಿರುವ ತಂದೆ ಕೆ. ಚಂದ್ರಶೇಖರ್ ರಾವ್ ಅಮಾನತುಗೊಳಿಸಿದ್ದಾರೆ. ಭಾರತ್ ರಾಷ್ಟ್ರೀಯ ಸಮಿತಿ ಪಕ್ಷದಿಂದ ವಿಧಾನಪರಿಷತ್ ಸದಸ್ಯೆ ಆಗಿರುವ ಕೆ.ಕವಿತಾ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು
ನ್ಯಾ.ನಾಗಮೋಹನ್ದಾಸ್ ಅಥವಾ ಮಾಧುಸ್ವಾಮಿ ವರದಿಗೆ ಅನುಮೋದನೆ: ಗೋವಿಂದ ಕಾರಜೋಳ ಆಗ್ರಹ
ಬೆಂಗಳೂರು: ರಾಜ್ಯ ಸಚಿವ ಸಂಪುಟದ ಸಭೆ ಇದೇ 4ರಂದು ನಡೆಯಲಿದೆ. ಆ ಸಂದರ್ಭದಲ್ಲಿ ನಾಗಮೋಹನ್ದಾಸ್ ಅವರ ವರದಿ ಅಥವಾ ಮಾಧುಸ್ವಾಮಿಯವರ ನೇತೃತ್ವದ ವರದಿಯನ್ನು ಒಪ್ಪಿ ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು
ಶಾಸಕ ವೀರೇಂದ್ರ ಪಪ್ಪಿ ಮನೆಗೆ ಮತ್ತೆ ಇಡಿ ದಾಳಿ
ಈಗಾಗಲೇ ಇಡಿ ವಶದಲ್ಲಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್ ನೀಡಿದೆ, ಚಳ್ಳಕೆರೆ ಪಟ್ಟಣದಲ್ಲಿರುವ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬೆಳವಣಿಗೆ ವೀರೇಂದ್ರ ಪ್ಪಿಯ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಮನೆಯಲ್ಲಿ ಶೋಧ
ಗಾಳಿ ಸಹಿತ ಮಳೆ: ಕರ್ನಾಟಕ ಕರಾವಳಿಗೆ ರೆಡ್ ಅಲರ್ಟ್
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರಿ ಗಾಳಿಯೊಂದಿಗೆ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಜೊತೆಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ
ಯಾದಗಿರಿಯಲ್ಲಿ ಅಣ್ಣ ತಮ್ಮ ಹೃದಯಾಘಾತಕ್ಕೆ ಬಲಿ
ಯಾದಗಿರಿಯ ಸುರಪುರ ತಾಲೂಕಿನ ಕೆಂಭಾವಿಯ ಮನೆಯೊಂದರಲ್ಲಿ ಅಣ್ಣ ಮತ್ತು ತಮ್ಮ ಹೃದಯಾಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತಪಟ್ಟ ಸೋದರರು. ತಮ್ಮ ಇರ್ಫಾನ್ಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ ಅಣ್ಣ ಶಂಶೋದ್ದೀನ್ಗೂ ತೀವ್ರ




