Tuesday, November 10, 2026
Menu

ಆಪರೇಷನ್ ಸಿಂಧೂರ್: ಕರ್ನಾಟಕದಿಂದ ಐದು ರಾಜ್ಯಗಳಿಗೆ ವಿಮಾನ ಸಂಚಾರ ರದ್ದು

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆಯಿಂದ ದಾಳಿ ನಡೆದ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಐದು ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಯಾಣಿಕರಿಗೆ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸುವಂತೆ ಸೂಚಿಸಿದೆ. ಉಗ್ರರ ನೆಲಗಳ ಮೇಲೆ ಭಾರತದ ವಾಯುಪಡೆಯ ದಾಳಿ ಬಳಿಕ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಕೇಂದ್ರ ಸರ್ಕಾರದ ಸೂಚನೆಯಂತೆ

10 ಕುಟುಂಬ ಕಳೆದುಕೊಂಡೆ: ಜೈಷೆ ಮುಖ್ಯಸ್ಥ ಮಸೂದ್ ಅಜರ್ ಗೋಳಾಟ

ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಿಂದ 10 ಕುಟುಂಬಗಳನ್ನು ಕಳೆದುಕೊಂಡೆ ಎಂದು ಉಗ್ರ ಸಂಘಟನೆ ಜೈಷೆ ಇ ಮೊಹಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಹೇಳಿಕೊಂಡಿದ್ದಾನೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಮಂಗಳವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಜೈಷೆ ಇ ಮೊಹಮದ್ ಮತ್ತು

‘ಆಪರೇಷನ್ ಸಿಂಧೂರ್ ‘ ನಮ್ಮ ಸೇನೆ ನಮ್ಮ ಹೆಮ್ಮೆ: ಸಚಿವ ಜಮೀರ್ ಅಹಮದ್ 

ಪಹಲ್ಗಾಮ್‌ ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್ ‘ ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್  ಅಭಿನಂದನೆ

Operation Sindoor: ಭಾರತೀಯ ಸೇನೆಯ 25 ನಿಮಿಷದ ಕಾರ್ಯಾಚರಣೆ ಹೇಗಿತ್ತು ಗೊತ್ತಾ?

ನವದೆಹಲಿ: ಭಾರತೀಯ ಸೇನೆ ಮಂಗಳವಾರ ತಡರಾತ್ರಿ ಪಾಕಿಸ್ತಾನ ಆಕ್ರಮಿತ ಜಮ್ಮು ಕಾಶ್ಮೀರದ ಪಂಜಾಬ್ ಪ್ರಾಂತ್ಯದ ಮೇಲೆ ನಡೆಸಿದ `ಆಪರೇಷನ್ ಸಿಂಧೂರ’ದ 25 ನಿಮಿಷ ಕಾರ್ಯಾಚರಣೆಯ ವಿವರಗಳನ್ನು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ 26 ಪ್ರವಾಸಿಗರನ್ನು ಹತ್ಯೆಗೈದ ಉಗ್ರರ ವಿರುದ್ದ

ಆಪರೇಷನ್ ಸಿಂಧೂರ್: ‘ಭಾರತ ಕ್ಷಮಿಸಲ್ಲ, ಮರೆಯಲ್ಲ’ ಅಂದ್ರು ನಟ ಕಿಚ್ಚ ಸುದೀಪ್‌

ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿ ಪಹಲ್ಗಾಮ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಭಾರತೀಯರಿಗೆ ನ್ಯಾಯವನ್ನು ಒದಗಿಸಿದೆ ಎಂದು ಎಲ್ಲೆಡೆಯಿಂದ ಅಭಿನಂದನೆಗಳು ಸಲ್ಲುತ್ತಿವೆ. ಕನ್ನಡ ಚಿತ್ರ ರಂಗದ ಅಭಿನಯ ಚಕ್ರವರ್ತಿ

“ಆಪರೇಷನ್ ಸಿಂಧೂರ್” ಬಳಿಕ ರಾಜ್ಯದ ಡ್ಯಾಂ, ಏರ್‌ಪೋರ್ಟ್‌ಗಳಿಗೆ ಬಿಗಿ ಭದ್ರತೆ: ಸಚಿವ ಪರಮೇಶ್ವರ್‌

ಭಾರತದ ವಾಯುಪಡೆಯು ಉಗ್ರರ ತಾಣಗಳ ಮೇಲೆ “ಆಪರೇಷನ್ ಸಿಂಧೂರ್” ಕಾರ್ಯಾಚರಣೆ ನಡೆಸಿದ ಬಳಿಕ ಕೇಂದ್ರ ಸರ್ಕಾರದ ಸೂಚನೆಯನ್ವಯ  ರಾಜ್ಯದಲ್ಲೂ ನಾಗರಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ರಾಜ್ಯದ ವಿಮಾನ ನಿಲ್ದಾಣಗಳು ಮತ್ತು ಡ್ಯಾಮ್‌ಗಳಿಗೆ ಹೆಚ್ಚಿನ ಭದ್ರತೆ

ಆಪರೇಷನ್ ಸಿಂಧೂರ್‌: ಉಗ್ರರ ನೆಲೆಗಳ ನಾಶ, ಸೇನಾಪಡೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದೇಶದ ಸೇನಾಪಡೆಯು ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದೆ,  ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸೇನೆಯನ್ನು ಅಭಿನಂದಿಸಿದ ಮುಖ್ಯಮಂತ್ರಿ,  ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ

ʻಆಪರೇಷನ್‌ ಸಿಂಧೂರʼದಿಂದ ಹೆಚ್ಚಿದ ಉದ್ವಿಗ್ನತೆ: ವಾಯುಪಡೆ ನಿಯಂತ್ರಣಕ್ಕೆ ಶ್ರೀನಗರ ವಿಮಾನ ನಿಲ್ದಾಣ

ʻಆಪರೇಷನ್‌ ಸಿಂಧೂರ್ʼ ದಾಳಿಯ ನಂತರ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದ ಉದ್ವಿಗ್ನತೆ ತೀವ್ರಗೊಂಡಿದ್ದು, ಭಾರತೀಯ ವಾಯುಪಡೆಯು ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದುಕೊಂಡಿದೆ. ನಾಗರಿಕ ವಿಮಾನಗಳ ಕಾರ್ಯಾಚರಣೆಯನ್ನು ಅನಿರ್ದಿಷ್ಟಾವಧಿವರೆಗೆ ತಡೆ ಹಿಡಿಯಲಾಗಿದೆ. ಜಮ್ಮು ಮತ್ತು ಕಾಶ್ಮೀರ, ಅಮೃತಸರ, ಚಂಡೀಗಢ, ಧರ್ಮಶಾಲಾ, ಲೇಹ್‌ನ

ಪಾಕ್‌ನಲ್ಲಿ ಗೂಗಲ್‌ ಟ್ರೆಂಡ್‌ ಆಯ್ತು “ಸಿಂಧೂರ್”, ಅರ್ಥಕ್ಕಾಗಿ ಸರ್ಚ್‌

ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿರುವ ಭಾರತ ವಾಯುಪಡೆ ನಡೆಸಿರುವ ಭಯೋತ್ಪಾದಕರ ತಾಣಗಳ ಮೇಲಿನ ದಾಳಿ ” ಆಪರೇಷನ್‌ ಸಿಂಧೂರ್‌” ಪಾಕ್‌ನಲ್ಲಿ ಗೂಗಲ್‌ ಟ್ರೆಂಡ್‌ ಆಗಿದೆ. ಅಲ್ಲಿನ ಜನತೆ ಸಿಂಧೂರ್ ಪದದ ಅರ್ಥವೇನು ಎಂದು ಹುಡುಕಾಟ ನಡೆಸುತ್ತಿದ್ದಾರೆ. ಗೂಗಲ್‌ನಲ್ಲಿ ವಾಯುದಾಳಿ, ಭಾರತೀಯ ಸೇನೆ, ಭಾರತ

ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ನಿಧನ

ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಸಿದ್ದಲಿಂಗಯ್ಯ(94) ಬೆಂಗಳೂರಿನ  ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ