Tuesday, November 10, 2026
Menu

ವೀಡಿಯೊ ಪೋಸ್ಟ್‌ ಮಾಡಿ ಸಿಎಂಗೆ ಅವಹೇಳನಗೈದ ಪೇದೆ ಅಮಾನತು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪೋಸ್ಟ್‌ ಮಾಡಿದ್ದ ಕೇಂದ್ರ ಕಾರಾಗೃಹದ ಕಾನ್‌ಸ್ಟೆಬಲ್ ಎಚ್.ಎನ್.ಮಧು ಕುಮಾ‌ರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ. ಸಿಎಂ ಅವರು ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ ಬಗ್ಗೆ ಏ.28 ರಂದು ಎಚ್.ಎನ್‌.ಮಧು ಕುಮಾರ್ ವೀಡಿಯೊ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಆ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಶೇರ್‌ ಆಗಿತ್ತು,  ಈ ಹಿನ್ನೆಲೆಯಲ್ಲಿ ಅವರನ್ನು  ಸೇವೆಯಿಂದ

ಬಿಜೆಪಿ ಅಧಿಕಾರದಲ್ಲಿದ್ದಾಗ ಸುಹಾಸ್‌ ಶೆಟ್ಟಿ ರೌಡಿ ಶೀಟರ್‌, ಈಗ ಮಹಾತ್ಮ: ದಿನೇಶ್‌ ಗುಂಡೂರಾವ್‌

ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್‌ ಶೆಟ್ಟಿ ಮೇಲೆ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ ಅವಧಿಯಲ್ಲಿ, ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ ಬಿಜೆಪಿ ನಾಯಕರ ಗಮನಕ್ಕೆ ಇದು ಎಂದು ಹೇಳಿರುವ ಸಚಿವ ದಿನೇಶ್‌ ಗುಂಡೂರಾವ್‌ ಸುಹಾಸ್‌

ಭಾರತ-ಪಾಕ್‌ ಉದ್ವಿಗ್ನತೆ: 1971ರ ಬಳಿಕ ಮೊದಲ ಬಾರಿ ದೇಶಾದ್ಯಂತ ನಾಳೆ ರಕ್ಷಣಾ ಕವಾಯತು

ದೇಶಾದ್ಯಂತ ನಾಳೆ ಅಂದರೆ ಮೇ 7ರಂದು ರಕ್ಷಣಾ ಕಾರ್ಯದ ಅಣಕು ಕವಾಯತು ನಡೆಸುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದೆ. ನಾಗರಿಕರ ರಕ್ಷಣೆಯ ಸಂಬಂಧ ಮೇ 7ರಂದು ದೇಶಾದ್ಯಂತ ಅಣಕು ಪ್ರದರ್ಶನ ನಡೆಸಬೇಕು. ಎಲ್ಲಾ ರಾಜ್ಯಗಳಲ್ಲಿ ವಾಯುದಾಳಿಯ ಸೈರನ್‌ ವ್ಯವಸ್ಥೆ

ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆಯಲಿದ್ದಾರೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಹೋಗುತ್ತಿದ್ದು, ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವರು ಎಂದು ಹೇಳಲಾಗಿದೆ. ದ್ರೌಪದಿ ಮುರ್ಮು, ಕುಮಾರಕೋಮ್ ನಿಂದ ಟೇಕ್ ಆಫ್

ತುಮಕೂರು ಕ್ರಿಕೆಟ್ ಮೈದಾನಕ್ಕೆ 41 ಎಕರೆ ಸ್ವಾಧೀನ ಪತ್ರ ಹಸ್ತಾಂತರ

ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ

ಬೆದರಿಕೆ ಪೋಸ್ಟ್‌ಗಳು: ಮಂಗಳೂರಿನಲ್ಲಿ ಪೊಲೀಸ್‌ ಹೈ ಅಲರ್ಟ್‌, ರಾತ್ರಿ 9.30ರೊಳಗೆ ಎಲ್ಲ ಬಂದ್‌

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ಗಳು ಹರಿದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದು, ಸೋಮವಾರ ರಾತ್ರಿ 9.30ರೊಳಗೆ

ಹುಬ್ಬಳ್ಳಿಯಲ್ಲಿ ಲಾರಿ- ಕಾರು ಡಿಕ್ಕಿಯಾಗಿ ಐವರು ಬಲಿ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಶ್ವೇತ (29), ಅಂಜಲಿ (26), ಸಂದೀಪ್

ಒಂದೇ ಒಂದು ಗ್ರಾಮದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗುವಂತಿಲ್ಲ: ಸಿಎಂ ಖಡಕ್‌ ಸೂಚನೆ

ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳಿಗೆ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಸ್ಪಷ್ಟ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ

ಸುಹಾಸ್‌ ಹತ್ಯೆಯಲ್ಲಿ ಹೆಡ್ ಕಾನ್ಸ್‌ಟೇಬಲ್‌ ಕೈವಾಡ ಶಂಕೆ, ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಮುಸ್ಲಿಂ ಹೆಡ್ ಕಾನ್ಸ್‌ಟೇಬಲ್‌ ಕೈವಾಡ ಇದೆ ಎಂಬ ಆರೋಪ ಕೇಳಿ ಬಂದಿದೆ. ಸೇಡಿಗಾಗಿ ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಆರೋಪಿಗಳ ಬಂಧನ

ಭಾರತ-ಪಾಕ್‌ ಸಂಘರ್ಷ: ವಿಶ್ವಸಂಸ್ಥೆ ಆತಂಕ, ಶಾಂತಿ ಕ್ರಮಕ್ಕೆ ಮನವಿ

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಯುದ್ಧದ ಹಂತಕ್ಕೆ ಹೋಗುತ್ತಿರುವ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕಳವಳ ವ್ಯಕ್ತಪಡಿಸಿ, ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಭಾರತ ಮತ್ತು ಪಾಕಿಸ್ತಾನ ಸಂಯಮ ವಹಿಸಿ ಸೇನಾ