Breaking
ಕೃಷ್ಣಾ ನ್ಯಾಯಾಧೀಕರಣ ಗೆಜೆಟ್ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಮೇ 5: ಕೇಂದ್ರದ ಜಲಶಕ್ತಿ ಸಚಿವರು ಮೇ 7 ರಂದು ಕೃಷ್ಣಾ ಕಣಿವೆಯ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಕೂಡಲೇ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಸಭೆಗೆ ಪೂರಕವಾಗಿ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಕಾನೂನು ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯದ ನಿಲುವು ಏನಿರಬೇಕೆಂದು ಚರ್ಚಿಸಲಾಗಿದೆ ಎಂದರು. ಕೃಷ್ಣಾ
ಗೋವಾ ಜಾತ್ರೆಯಲ್ಲಿ ಕಾಲ್ತುಳಿತಕ್ಕೆ 6 ಬಲಿ, 50ಕ್ಕೂ ಹೆಚ್ಚು ಮಂದಿಗೆ ಗಾಯ!
ಪಣಜಿ: ಜಾತ್ರೆಯ ಮೆರವಣಿಗೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಅಸುನೀಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಆಘಾತಕಾರಿ ಘಟನೆ ಗೋವಾದಲ್ಲಿ ಸಂಭವಿಸಿದೆ. ರಾಜಧಾನಿ ಪಣಜಿಯಿಂದ 40 ಕಿ.ಮೀ. ದೂರದಲ್ಲಿರುವ ಶುಕ್ರವಾರ ತಡರಾತ್ರಿ ಶ್ರೀದೇವಿ ಲಹಿರಿ ಜಾತ್ರೆ ವೇಳೆ ಈ ದುರಂತ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಾಲ್ವರು ಹಿಂದೂಗಳು ಸೇರಿ 8 ಆರೋಪಿಗಳು ಅರೆಸ್ಟ್
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಕೊಲೆ ಆರೋಪಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರು ಪೊಲೀಸರು ನಾಲ್ವರು ಹಿಂದೂಗಳು ಸೇರಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿಯನ್ನು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ
ಮನೆಯಲ್ಲೇ ಸಿಕ್ಕಿಬಿದ್ದ ಪ್ರಿಯಕರ, ಪತ್ನಿ ಕೊಲೆಗೈದು ಪೊಲೀಸರಿಗೆ ಶರಣಾದ ಪತಿ!
ಕಲಬುರಗಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ರಾಸಲೀಲೆಯಲ್ಲಿ ತೊಡಗಿದ್ದಾಗ ರೆಡ್ ಹ್ಯಾಂಡಗಿ ಸಿಕ್ಕಿಬಿದ್ದ ಪತ್ನಿ ಹಾಗೂ ಪ್ರಿಯಕರನನ್ನು ಮಾರಕಾಸ್ತ್ರದಿಂದ ಪತಿ ಕೊಂದ ಭೀಕರ ಘಟನೆ ಅಳಂದ ತಾಲೂಕಿನಲ್ಲಿ ನಡೆದಿದೆ. ಅಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ಸೃಷ್ಟಿ
ಕೃಷ್ಣ ಜಲವಿವಾದ ಅಂತಿಮ ತೀರ್ಪಿನ ಕುರಿತು ಚರ್ಚೆಗೆ ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ತೀರ್ಮಾನ
ಬೆಂಗಳೂರು: ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಧ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ
ಕತ್ತಲಲ್ಲಿ ರಸ್ತೆ ಮಧ್ಯೆ ಇಳಿದ ಭಾರತೀಯ ಯುದ್ಧವಿಮಾನಗಳು: ವಾಯುಪಡೆಯಿಂದ ಭರ್ಜರಿ ಪ್ರಯೋಗ
ಲಕ್ನೋ: ಪೆಹಲ್ಗಾಮ್ ದಾಳಿ ಬೆನ್ನಲ್ಲೇ ಭಾರತೀಯ ವಾಯುಪಡೆ ರಾಫೆಲ್ ಮತ್ತು ಸುಖೋಯ್ ಯುದ್ಧ ವಿಮಾನಗಳನ್ನು ಕತ್ತಲಲ್ಲಿ ಲ್ಯಾಂಡಿಂಗ್ ಮಾಡುವ ಯಶಸ್ವಿ ತರಬೇತಿ ನಡೆಸಿದೆ. ಉತ್ತರ ಪ್ರದೇಶದ ಶಹಜಾನ್ ಪುರದ ಎಕ್ಸ್ ಪ್ರೆಸ್ ವೇನಲ್ಲಿ ಶುಕ್ರವಾರ ರಾತ್ರಿ ಚಂದಿರನ ಬೆಳಕು ಹೊರತುಪಡಿಸಿ ಯಾವುದೇ
ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಮುಂದೆ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ
ಮಂಡ್ಯ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ ಮಾತನಾಡುವ
ನವೀಕೃತ ಸಂಪನ್ಮೂಲ ಬಳಸಿ ಭೂಮಿ ಉಳಿಸೋಣ
ನವೀಕರಿಸಬಹುದಾದ ಶಕ್ತಿಯು ಭೂಮಿಗೆ ಗೇಮ್-ಚೇಂಜರ್ ಆಗಿದ್ದು, ಅದು ಅಗ್ಗದ ಮತ್ತು ಹೆಚ್ಚು ಸುಸ್ಥಿರ ಶಕ್ತಿಯನ್ನು ಒದಗಿಸಬಹುದು. ಪಳೆಯುಳಿಕೆ ಇಂಧನ ಬಳಕೆ ಬಿಟ್ಟು, ೨೦೩೦ ರ ಹೊತ್ತಿಗೆ ಶೇ. ೬೦ ಕ್ಕಿಂತ ಹೆಚ್ಚು ನವೀಕರಿಸಬಹುದಾದ ಇಂಧನವನ್ನು ಜಗತ್ತಿನ ಎಲ್ಲ ದೇಶಗಳು ಉತ್ಪಾದಿಸಲು ಮತ್ತು
ಸ್ಪೀಕರ್ ಖಾದರ್ಗೆ ಮಾತ್ರವಲ್ಲ, ನನಗೂ ಬೆದರಿಕೆ ಕರೆಗಳು ಬರುತ್ತವೆ ಎಂದ ಮುಖ್ಯಮಂತ್ರಿ
ಸ್ಪೀಕರ್ ಯು.ಟಿ ಖಾದರ್ ಗುರುವಾರ ಬೀದರ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದರು. ಈ ವಿಚಾರವಾಗಿ ಮಾಧ್ಯಮದವರು ಶುಕ್ರವಾರ ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಪ್ರಶ್ನಿಸಿದಾಗ , ನನಗೂ ಬೆದರಿಕೆ ಕರೆಗಳು ಬರುತ್ತವೆ. ಏನು ಮಾಡುವುದು, ಈ
ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ: ಡಿ.ಕೆ. ಶಿವಕುಮಾರ್
ಈ ವರ್ಷ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಫಾ) ವತಿಯಿಂದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ




