Wednesday, November 11, 2026
Menu

ಕಂದಕಕ್ಕೆ ಕಾರು ಉರುಳಿ ತಂದೆ ಮಗ ಸೇರಿ ಮೂವರು ದುರ್ಮರಣ

ಕಂದಕಕ್ಕೆ ಕಾರು ಉರುಳಿ ಬಿದ್ದು ತಂದೆ-ಮಗ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಭವಿಸಿದೆ. ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಸಂಭವಿಸಿದ ಅಪಘಾತದಲ್ಲಿ ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ತಂದೆ ಮಗ ಅಣ್ಣು ನಾಯ್ಕ್, ರಮೇಶ್ ನಾಯ್ಕ್ ಮತ್ತು ಚಿದಾನಂದ, ಮೃತಪಟ್ಟಿದ್ದಾರೆ. ಕಾರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿತ್ತು. ನಸುಕಿನ ಜಾವ 4:15ರ ಸುಮಾರಿಗೆ ನಿದ್ದೆ ಮಂಪರಿನಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಬಿದ್ದಿದೆ.

ಖ್ಯಾತ ನಟಿಯ ಕಾರು ಹರಿದು ಒಬ್ಬ ಕಾರ್ಮಿಕ ಸಾವು, ಹಲವರಿಗೆ ಗಾಯ

ಮರಾಠಿ ಚಿತ್ರದ ಖ್ಯಾತ ನಟಿ ಕಾರು ಹರಿದ ಪರಿಣಾಮ ಒಬ್ಬ ಕಾರ್ಮಿಕ ಮೃತಪಟ್ಟು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನಲ್ಲಿ ಸಂಭವಿಸಿದೆ. ಮರಾಠಿ ಚಿತ್ರದ ಖ್ಯಾತ ನಟಿ ಉರ್ಮಿಳಾ ಕೊತಾರೆ ಕಾಂಡಿವಿಲ್ಲಿ ಬಳಿ ಶೂಟಿಂಗ್ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಈ

ಜನಪರ ಕಾಯ್ದೆ ಮೂಲಕ ಭಾರತದ ಭವಿಷ್ಯ ಬದಲಾಯಿಸಿದ ಮನಮೋಹನ್ ಸಿಂಗ್: ಡಿಕೆ ಶಿವಕುಮಾರ್

ನವದೆಹಲಿ: ಜನಪರ ಕಾಯ್ದೆಗಳ ಮೂಲಕ ಭಾರತದ ಭವಿಷ್ಯವನ್ನು ಬದಲಾಯಿಸಿದವರು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ದೆಹಲಿಯಲ್ಲಿ ಶನಿವಾರ ಪುಷ್ಪಗುಚ್ಛ ಇರಿಸಿ, ಅಂತಿಮ ನಮನ

ಬೆಂಗಳೂರು: ಹೊಸ ವರ್ಷಾಚರಣೆ ದಿನ ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ಹೊಸ ವರ್ಷಾಚರಣೆ ದಿನ ಬೆಂಗಳೂರು ನಗರದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮಾದಕ ಜಾಲದ ಮೇಲೂ ಕೂಡ ಕಣ್ಣಿಡಲಾಗಿದೆ. ಈಗಾಗಲೇ‌ ಮೂವರು ವಿದೇಶಿ ಡ್ರಗ್ ಪೆಡ್ಲರ್ ಸೇರಿದಂತೆ‌ 70 ಜನರನ್ನು ಬಂಧಿಸಲಾಗಿದೆ. ಎರಡೂವರೆ ಕೋಟಿಗೂ ಅಧಿಕ ಮೌಲ್ಯದ

ನಿತಿಶ್ ರೆಡ್ಡಿ ಚೊಚ್ಚಲ ಶತಕ: ಮತ್ತೆ ಫಾಲೋಆನ್ ಭೀತಿಯಿಂದ ಭಾರತ ಪಾರು

ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಭಾರತ ತಂಡ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಫಾಲೋಆನ್ ಭೀತಿಯಿಂದ ಪಾರಾಗಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಪಂದ್ಯದ 3ನೇ ದಿನದಾಟ ಮಳೆಕಾಟದಿಂದಾಗಿ ಬೇಗನೇ ಅಂತ್ಯಗೊಂಡಿದ್ದು,

ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಲು ಕೇಂದ್ರ ಒಪ್ಪಿಗೆ

ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಮುಖ್ಯಸ್ಥರಿಂದ ಮನಮೋಹನ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತಿಮ ಯಾತ್ರೆ: ಅಂತಿಮ ನಮನ ಸಲ್ಲಿಸಿದ ಸಿಎಂ ಡಿಸಿಎಂ!

ಮಾಜಿ ಪ್ರಧಾನಿ ಹಾಗೂ ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನೆರವೇರಲಿದೆ. ಅಂತ್ಯಕ್ರಿಯೆಗೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮನಮೋಹನ್ ಸಿಂಗ್ ನಿಧನಕ್ಕೆ ಇಡೀ ದೇಶವೇ ಕಂಬನಿ

6 ಬಾರಿ ಛಡಿಯೇಟು ಹೊಡೆದುಕೊಂಡ ಬಿಜೆಪಿ ನಾಯಕ ಅಣ್ಣಾಮಲೈ!

ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ಕೊಯಮತ್ತೂರಿನಲ್ಲಿ ಛಾಟಿಯಿಂದ ಹೊಡೆದುಕೊಂಡು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೊಯಮತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಡಿಎಂಕೆ ಪಕ್ಷದ ಆಡಳಿತದಿಂದ ಕಾನೂನು ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ೬ ಬಾರಿ

ಮನಮೋಹನ್ ಸಿಂಗ್ ನಿಂದಿಸಿದ್ದ ಪಾಕ್ ಪ್ರಧಾನಿಗೆ ಮೋದಿ ತರಾಟೆ!

ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನಿಂದಿಸಿದ್ದ 2013ರಲ್ಲಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ನರೇಂದ್ರ ಮೋದಿ ಸಾರ್ವಜನಿಕವಾಗಿಯೇ ಟೀಕಿಸಿದ್ದರು. ನ್ಯೂಯಾರ್ಕ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಪತ್ರಕರ್ತರ ಜತೆಗೆ ನಡೆಸಿದ ಸಭೆಯಲ್ಲಿ ಷರೀಫ್ ಅವರು ಪ್ರಧಾನಿ ಸಿಂಗ್ ಅವರನ್ನು `ಹಳ್ಳಿಯ ಮಹಿಳೆ’

ಆರ್ಥಿಕವಾಗಿ ಭೀಕರ ಸ್ಥಿತಿಯಲ್ಲಿದ್ದ ದೇಶವನ್ನು ಸರಿದಾರಿಗೆ ತಂದ ಮನಮೋಹನ್ ಸಿಂಗ್: ಹೆಚ್.ಡಿ.ದೇವೇಗೌಡ

ಬೆಂಗಳೂರು: ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ