Featured
ಮೆಟ್ರೋ ಪ್ರಯಾಣ ದರದಲ್ಲಿ ಹಸ್ತಕ್ಷೇಪ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್ ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನ್ಯಾಯಮೂರ್ತಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರು ಅಭಿವೃದ್ದಿಗೆ ಸಂಬಂಧಿಸಿದ ಇಲಾಖೆಗಳು, ಪ್ರಾಧಿಕಾರದ ಅಧಿಕಾರಿಗಳ ಜೊತೆ ನಗರ ಪ್ರದಕ್ಷಿಣೆ ನಡೆಸಿದ ನಂತರ ಬಿಎಂಆರ್ ಸಿಎಲ್ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. ಮೆಟ್ರೋ ಪ್ರಯಾಣ ಟಿಕೆಟ್ ಹಾಗೂ ಕುಡಿಯುವ ನೀರಿನ
ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಸರಕಾರ ಇದೆ: ರಾಜ್ಯಸಭೆಯಲ್ಲಿ ಗುಡುಗಿದ ಹೆಚ್.ಡಿ.ದೇವೇಗೌಡ
ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು; ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು. ಲೋಕಸಭೆಯಲ್ಲಿ ಬಿಜೆಪಿಗೆ
ಬ್ಯಾಂಕ್ ಗೆ ವಂಚನೆ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ 3 ವರ್ಷ ಶಿಕ್ಷೆ!
ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರಿಗೆ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಗೆ ವಂಚಿಸಿದ ಪ್ರಕರಣದಲ್ಲಿ ತಲಾ 3 ವರ್ಷ ಶಿಕ್ಷೆ ಹಾಗೂ 7.75 ಲಕ್ಷ ರೂ. ದಂಡ ವಿಧಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ
ಆದಾಯಕ್ಕಿಂತ ಹೆಚ್ಚು ಆಸ್ತಿ ಜನಪ್ರತಿನಿಧಿಗಳ ವಿಚಾರಣೆ ಲೋಕಾಗೆ ನಿರ್ದೇಶನ: ಅರ್ಜಿ ವಜಾ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಜನಪ್ರತಿನಿಧಿಗಳ ಆಸ್ತಿಗಳು ಮತ್ತು ಅದಕ್ಕೆ ಸಂಬಂಧಿಸಿದ ಮೂಲಗಳ ಕುರಿತು ಲೋಕಾಯುಕ್ತ ಸಂಸ್ಥೆಯಿಂದ ವಿಚಾರಣೆ ನಡೆಸುವುದಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರ
ಕುಮಾರಸ್ವಾಮಿ ಮೊದಲು ಮೇಕೆದಾಟಿಗೆ ಅನುಮತಿ ಕೊಡಿಸಲಿ: ಡಿಕೆ ಶಿವಕುಮಾರ್
ಬೆಂಗಳೂರು: ಮೇಕೆದಾಟು ಅಣೆಕಟ್ಟಿಗೆ ಅನುಮತಿಯನ್ನು ಒಂದೇ ದಿನದಲ್ಲಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರಲ್ಲ, ಮೊದಲು ಈ ಕೆಲಸವನ್ನು ಮಾಡಲಿ, ಆಮೇಲೆ ಮಾತಾಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದ
ಕನಿಷ್ಠ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಸಿದ್ದತೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ
ಬೆಂಗಳೂರು: ಕರ್ನಾಟಕ ರಾಜ್ಯದ ಬೀಜ ನಿಗಮದ ವತಿಯಿಂದ 2025-26ನೇ ಸಾಲಿಗೆ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಗುರಿ ಇರಿಸಿ ಅದರ ಸಾಧನೆಗೆ ಸಿದ್ದತೆ ನಡೆಸುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ಕರ್ನಾಟಕ ರಾಜ್ಯ
ಮೊದಲ ಏಕದಿನ: ಭಾರತಕ್ಕೆ 249 ರನ್ ಗುರಿ
ಭಾರತದ ಸಂಘಟಿತ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ ಮೊದಲ ಏಕದಿನ ಪಂದ್ಯದಲ್ಲಿ 248 ರನ್ ಗೆ ಆಲೌಟಾಗಿದೆ. ನಾಗ್ಪುರದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಸ್ಫೋಟಕ ಆರಂಭದ ಹೊರತಾಗಿಯೂ 47.4 ಓವರ್ ಗಳಲ್ಲಿ 248 ರನ್
ಹಕ್ಕಿಜ್ವರದ ಶಂಕೆ: ಆಂಧ್ರದಲ್ಲಿ 4 ಲಕ್ಷ ಕೋಳಿಗಳು ಹತ್ಯೆ
ಅಮರಾವತಿ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕಳೆದ 45 ದಿನಗಳಲ್ಲಿ ಸುಮಾರು 4 ಲಕ್ಷ ಕೋಳಿಗಳು ಮೃತಪಟ್ಟಿದ್ದು ಹಕ್ಕಿಜ್ವರದ ಅನುಮಾನ ಕಾಡಲಾರಂಭಿಸಿದೆ. ಕೋಳಿಗಳ ಈ ಹಠಾತ್ ಸಾವಿನ ಕಾರಣ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆಯು, ಸತ್ತ
ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ: ಇಬ್ಬರು ಕಾರ್ಮಿಕರು ಸಾವು
ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕದಲ್ಲಿ ಇಬ್ಬರು ಕಟ್ಟಡ ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿಸಂಭವಿಸಿದೆ. ಬೆಂಗಳೂರು ಉತ್ತರದ ಸಿಗೇಹಳ್ಳಿ ಗೇಟ್ ಬಳಿಯ ಶಿವಾಜಿ ಗ್ರೀಲ್ ಲೇಔಟ್ ನಲ್ಲಿ ಗುರುವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಹೊರ ರಾಜ್ಯದ ಇಬ್ಬರು
ವಿಶ್ವಸಂಸ್ಥೆಯಿಂದಲೂ ಹೊರಗುಳಿಯಲಿದೆ ಅಮೆರಿಕ!
ನವದೆಹಲಿ: ಮಾನವ ಹಕ್ಕುಗಳ ಮಂಡಳಿ (ಯುಎನ್‌ಎಚ್‌ಆರ್‌ಸಿ) ಸೇರಿದಂತೆ ವಿಶ್ವ ಸಂಸ್ಥೆಯ ಇತರ ಹಲವಾರು ಘಟಕಗಳಿಂದ ಹಿಂದೆ ಸರಿಯುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಜೊತೆಗಿನ ಸಂಬಂಧದ ಮರುಪರಿಶೀಲನೆ