Friday, September 19, 2025
Menu

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೆ. 22ರಿಂದ ಅ. 7ರವರೆಗೆ

ಮಧುಸೂದನ್ ಅವರ ಸಮಿತಿ ಮತ್ತು ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕ‌ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ಡಿಸೆಂಬರ್ ಒಳಗೆ ವರದಿ ನೀಡಲಿದೆ. ಎಲ್ಲಾ ಜಾತಿ-ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಕುರಿತು ಮುಖ್ಯಮಂತ್ರಿ  ಕೃಷ್ಣಾದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು. ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಸಿಪಿ ರಾಧಾಕೃಷ್ಣನ್ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕಾರ

ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿರ್ಗಮಿತ ರಾಜ್ಯಪಾಲರಾದ ಜಗದೀಪ್‌ ಧನ್ಕರ್‌ ಸೇರಿದಂತೆ ಗಣ್ಯರ ಸಮ್ಮುಖ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಹಾಸನದಲ್ಲಿ ಪತ್ನಿಯನ್ನು ತವರಿಗೆ ಕರೆದೊಯ್ದ ಅತ್ತೆಯ ಕೊಲೆ ಮಾಡಿದ ಅಳಿಯ

ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ಪತ್ನಿಯನ್ನು ತವರುಮನೆಗೆ ಕರೆದುಕೊಂಡು ಹೋದ ಕಾರಣಕ್ಕೆ ಸಿಟ್ಟಿಗೆದ್ದ ಅಳಿಯನೊಬ್ಬ ಅತ್ತೆಯನ್ನು ಹತ್ಯೆ ಮಾಡಿದ್ದಾನೆ. ಫೈರೋಜಾ (58) ಕೊಲೆಯಾದ ಅತ್ತೆ. ರಸೂಲ್‌ ಕೊಲೆಗಾರ ಅಳಿಯ. ರಾಮನಾಥಪುರ ನಿವಾಸಿ ಫೈರೋಜಾ ತನ್ನ ಮಗಳು ಶೆಮಿನಾ ಬಾನು ಎಂಬಾಕೆಯನ್ನು ರಸೂಲ್‌ಗೆ ಮದುವೆ

ಹುಣಸೂರಿನಲ್ಲಿ ಪರಿಹಾರ ಹಣಕ್ಕಾಗಿ ಪತಿಯ ಹತ್ಯೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿದ್ದ ಪತ್ನಿ ಅರೆಸ್ಟ್‌

ಹುಣಸೂರು ತಾಲೂಕಿನ ಚಿಕ್ಕಹೆಜ್ಜೂರಿನಲ್ಲಿ ಪತಿಯನ್ನು ಹತ್ಯೆ ಮಾಡಿ ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ನಂಬಿಸಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಲ್ಲಾಪುರಿ ಎಂಬಾಕೆ ವಿಷ ಹಾಕಿ ಪತಿ ವೆಂಕಟಸ್ವಾಮಿಯನ್ನು ಕೊಲೆ ಮಾಡಿದ ಬಳಿಕ ನಾಟಕವಾಡಿದ್ದಾಳೆ. ಕಾಡುಪ್ರಾಣಿ ದಾಳಿಯಿಂದ ಮೃತಪಟ್ಟಿದ್ದಾರೆ ಅಂದರೆ ಪರಿಹಾರ

ಆದಾಯ ತೆರಿಗೆ ವಂಚನೆ: ಪೋಥಿಸ್ ಬೆಂಗಳೂರು ಶೋ ರೂಂ ಮೇಲೆ ಐಟಿ ದಾಳಿ

ಆದಾಯ ತೆರಿಗೆ ವಂಚನೆ ಆರೋಪ ಹಿನ್ನೆಲೆ ಬೆಂಗಳೂರಿನಲ್ಲಿ ಪೋಥಿಸ್ ಬಟ್ಟೆ ಶೋ ರೂಂಗಳ ಮೇಲೆ ಶುಕ್ರವಾರ ಬೆಳಗ್ಗೆ ಐಟಿ ದಾಳಿ ನಡೆಸಿದೆ. ಮೈಸೂರು ರಸ್ತೆಯ ಟೆಂಬರ್ ಲೇಔಟ್​ನಲ್ಲಿರುವ ಪೋಥಿಸ್​ ಶೋ ರೂಮ್​ಗೆ 25ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ

ಅಮೆರಿಕದಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಮತ್ತು ಮಗನ ಎದುರೇ ಕರ್ನಾಟಕದ ವ್ಯಕ್ತಿಯ ಹತ್ಯೆ

ಅಮೆರಿಕದ ಡಲ್ಲಾಸ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಮತ್ತು ಮಗನ ಎದುರೇ ಕರ್ನಾಟಕ ಮೂಲದ ವ್ಯಕ್ತಿಯನ್ನು ಮಚ್ಚಿನಿಂದ ಹಲ್ಲೆಗೈದು ಶಿರಚ್ಛೇದ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕರ್ನಾಟಕದ ಚಂದ್ರ ನಾಗಮಲ್ಲಯ್ಯ (೩೭) ಎಂದು ಗುರುತಿಸಲಾಗಿದೆ. ಯೋರ್ಡಾನಿಸ್ ಕೋಬೋಸ್-ಮಾರ್ಟಿನೆಜ್ ಕೊಲೆಗಾರ. ಡಲ್ಲಾಸ್‌ನ ಮೋಟೆಲ್‌ವೊಂದರಲ್ಲಿ

ಹಿರಿಯ ನಾಗರಿಕರಿಗೆ ವಯೋ ವಂದನಾ ಯೋಜನೆಯನುಸಾರ ಆರೋಗ್ಯ ಸೇವೆ ವಿಸ್ತರಣೆ

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಎಲ್ಲಾ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ (ESIS ಲಾಭ ಪಡೆಯುವವರನ್ನು ಸೇರಿಸಿ) ವಯೋ ವಂದನಾ ಯೋಜನೆಯನುಸಾರ ಆರೋಗ್ಯ ಸೇವೆಗಳನ್ನು ವಿಸ್ತರಿಸಲು

ಸಿಟಿ ರವಿ ವಿರುದ್ಧದ  ಪ್ರಕರಣವನ್ನು ಸರ್ಕಾರ ಹಿಂಪಡೆಯಬೇಕು: ಆರ್‌ ಅಶೋಕ

ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ವಿರುದ್ಧ ದಾಖಲಿಸಿದ ಪ್ರಕರಣವನ್ನು ಸರ್ಕಾರ ಹಿಂಪಡೆಯಬೇಕು. ಅವರು ಯಾವುದೇ ದ್ವೇಷ ಭಾಷಣ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಮಾಡಿರುವುದನ್ನು ವಿರೋಧಿಸಿ ಮೊದಲ

ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ: ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ಕಲಾವಿದರಾದ ದಿ. ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾದೇವಿಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕನ್ನಡ ಚಿತ್ರರಂಗದ ಇಬ್ಬರು ಮೇರು ಕಲಾವಿದರಿಗೆ

ಶಿಕಾರಿಪುರದಲ್ಲಿ ಕೆಲವೇ ದಿನಗಳಲ್ಲಿ ಮದುವೆಯಾಗಲಿದ್ದ ಜೋಡಿ ಅಪಘಾತಕ್ಕೆ ಬಲಿ

ಶಿಕಾರಿಪುರ ತಾಲೂಕಿನ ಅಂಬಾರಕೊಪ್ಪ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಕಳೆದ ತಿಂಗಳು ನಿಶ್ಚಿತಾರ್ಥ ಆಗಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದ ಜೋಡಿ ಮೃತಪಟ್ಟಿದೆ. ಬೈಕ್​​ನಲ್ಲಿ ತೆರಳುತ್ತಿರುವಾಗ ಅಪಘಾತ ಸಂಭವಿಸಿದ್ದು, ಬಸವನಗೌಡ (24) ಹಾಗೂ ರೇಖಾ (22) ಮೃತಪಟ್ಟವರು. ಈ ಜೋಡಿಗೆ ಶ್ರಾವಣ ಮಾಸದಲ್ಲಿ ನಿಶ್ಚಿತಾರ್ಥವಾಗಿತ್ತು.