Menu

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಕಾರ್ಯಾಚರಣೆ

ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗಳ ಪತ್ತೆ ಕಾರ್ಯಾಚರಣೆ ನಡೆಸಲಾಗಿದ್ದು, 30 ಸ್ಥಳಗಳಲ್ಲಿ ಪೊಲೀಸರು  ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವರ್ತೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಶೆಡ್‌ಗಳು ಹಾಗೂ ಕಾರ್ಮಿಕರು ವಾಸಿಸುವ ಪ್ರದೇಶಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ನೂರಕ್ಕೂ ಹೆಚ್ಚು ಶೆಡ್‌ಗಳಿರುವ ಪ್ರದೇಶಗಳಲ್ಲಿಯೂ ಪರಿಶೀಲನೆ ನಡೆಸಲಾಗಿದ್ದು, ಅಲ್ಲಿ ವಾಸಿಸುತ್ತಿರುವ ವ್ಯಕ್ತಿಗಳು ಹಾಗೂ ಮಹಿಳೆಯರ ಗುರುತಿನ ದಾಖಲೆಗಳನ್ನು ಪರಿಶೀಲಿಸಲಾಗಿದೆ. ಅನುಮಾನಾಸ್ಪದವಾಗಿ ಕಂಡುಬಂದ 40

ಬಿಟೆಕ್‌ ವಿದ್ಯಾರ್ಥಿ ಡೆತ್‌ನೋಟ್‌ ಬರೆದಿಟ್ಟು ಹಾಸ್ಟೆಲ್‌ನಲ್ಲಿ ಸುಸೈಡ್‌

ಬೆಂಗಳೂರು ನಗರದ ಹಾಸ್ಟೆಲ್‌ವೊಂದರಲ್ಲಿ ಬಿಟೆಕ್‌ ವಿದ್ಯಾರ್ಥಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರದ ರಕ್ಷನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆ.6 ರಂದು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಾನು ಒಳ್ಳೆ ಮಗನಾಗಲಿಲ್ಲ ಎಂದು ಡೆತ್‌ನೋಟ್ ಬರೆದಿಟ್ಟಿದ್ದಾನೆ.  ರಕ್ಷನ್ ಮೃತದೇಹವನ್ನು ಪೊಲೀಸರು ಪೋಷಕರಿಗೆ

ಮೀಸಲಾತಿ ಭಿಕ್ಷೆಯಲ್ಲ, ಅದು ಶೋಷಿತರ ಹಕ್ಕು: ಸಾಮಾಜಿಕ ನ್ಯಾಯ ದಿನಾಚರಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಕೂಡ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಸಿಗಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರತಿಪಾದಿಸಿದರು. ಇಂದು ಅವರು ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ

ಹೆಸರಘಟ್ಟದಲ್ಲಿ ಭಾರತದ ಮೊದಲ ಕ್ವಾಂಟಮ್ ಸಿಟಿ: ಸಿಎಂ ಡಿಕೆ ಶಿವಕುಮಾರ್

ಕರ್ನಾಟಕ ಕ್ವಾಂಟಮ್ ಮಿಷನ್ ಬೆಂಬಲದೊಂದಿಗೆ ಬೆಂಗಳೂರು ಈಗಾಗಲೇ ನವೋದ್ಯಮ ಮತ್ತು ಜಾಗತಿಕ ತಂತ್ರಜ್ಞಾನ ಕಂಪನಿಗಳ ಬೆಳವಣಿಗೆಗೆ ಪೂರಕ ಪರಿಸರ ವ್ಯವಸ್ಥೆಯನ್ನು ಹೊಂದಿದ್ದು, ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸೈನ್ಸ್

ವಿಧಾನ ಪರಿಷತ್‌ ಸಭಾಪತಿಯಿಂದ ಬಲವಂತದ ರಾಜೀನಾಮೆ ಪಡೆದ ಗೂಂಡಾ ಸರ್ಕಾರ: ಆರ್‌ ಅಶೋಕ

ವಿಧಾನಪರಿಷತ್‌ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರ ಕಚೇರಿಗೆ ಕಾಂಗ್ರೆಸ್‌ ನಾಯಕರು ನುಗ್ಗಿ ಬಲವಂತವಾಗಿ ರಾಜೀನಾಮೆ ಪಡೆದಿರುವುದು ಇಡೀ ಸದನಕ್ಕೆ ಆಗಿರುವ ಅಪಮಾನವಾಗಿದೆ. ಇದು ಗೂಂಡಾಗಿರಿ ಮಾಡುವ ಸರ್ಕಾರ ಎಂದು ಈ ಘಟನೆಯಿಂದ ಸಾಬೀತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು.

ಡಿಜಿಟಲ್ ಅರೆಸ್ಟ್ ಪಿಡುಗಿಗೆ ಆರ್‌ಬಿಐ ಸರ್ಜರಿ

ಈಗ ಎಲ್ಲ ಕಡೆ ಡಿಜಿಟಲರ್ ಅರೆಸ್ಟ್ ದೂರುಗಳು ಕೇಳಿಬರುತ್ತಿದೆ. ಇದಕ್ಕೆ ಸೂಕ್ತ ಕಾನೂನು ಅಗತ್ಯ. ದೇಶಾದ್ಯಂತ ಡಿಜಿಟಲ್ ಅರೆಸ್ಟ್ ಮೂಲಕ ಸಾವಿರಾರು ಜನ ಹಣ ಕಳೆದುಕೊಳ್ಳುತ್ತಿದ್ದು ಒಂದು ತಿಂಗಳಲ್ಲಿ ಆರ್‌ಬಿಐ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ ಎಲ್ಲ ಬ್ಯಾಂಕ್‌ಗಳು ಮತ್ತು ನ್ಯಾಯಾಂಗ ಹಾಗೂ

ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆಗೆ ಅವಕಾಶ ಸರಿಯೇ: ಕೇಂದ್ರಕ್ಕೆ ದೆಹಲಿ ಹೈಕೋರ್ಟ್‌ ಪ್ರಶ್ನೆ

ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆಗಳ ಹೆಸರಿನಲ್ಲಿ ಇಡೀ ದೆಹಲಿ ನಗರದ ಜನಜೀವನವನ್ನು ಹಾಳುಗೆಡವಲು ಅವಕಾಶ ನೀಡುವುದು ಸರಿಯಲ್ಲ ಎಂದು ದೆಹಲಿ ಹೈಕೋರ್ಟ್‌ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ದೇಶದಲ್ಲಿ ನಿರಂತವಾಗಿ ಪ್ರತಿಭಟನೆಗಳು ಮತ್ತು ಧರಣಿಗಳು ನಡೆಯುತ್ತಿರುವುದರ ಬಗ್ಗೆ ದೆಹಲಿ ಹೈಕೋರ್ಟ್‌ ಆಕ್ಷೇಸಿದೆ.

ಆ.14 ರಂದು ವಿಧಾನ ಪರಿಷತ್‌ ನೂತನ ಉಪಸಭಾಪತಿ, ಸಭಾಪತಿ ಆಯ್ಕೆ: ಮುಖ್ಯಮಂತ್ರಿ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ

ಹಂಪಿಯಲ್ಲಿ ಹೋಂ ಸ್ಟೇ: 54 ಅಧಿಕಾರಿಗಳ ವಿರುದ್ಧ ಲೋಕಾಯಕ್ತ ದೂರು ದಾಖಲು

ಹಂಪಿ ಸಂರಕ್ಷಿತ ಪ್ರದೇಶಗಳ್ಲಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳು ಮತ್ತು ಹೋಂಸ್ಟೇ ನಡೆಸಲು ಅವಕಾಶ ಕಲ್ಪಿಸಿರುವ 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಹಂಪಿ ವಿಶ್ವಪಾರಂಪರಿಕ ತಾಣವಾಗಿ ಗುರುತಿಸಿಕೊಂಡಿದ್ದು, ಅಲ್ಲಿ ನಿಯಮಗಳ ಉಲ್ಲಂಘನೆ ವಿಚಾರವನ್ನು ನ್ಯಾಯಮೂರ್ತಿ

ವಿಧಾನಪರಿಷತ್‌ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ

ಕರ್ನಾಟಕ ವಿಧಾನಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜೀನಾಮೆ ನೀಡುವಂತೆ ಹೊರಟ್ಟಿ ಅವರಿಗೆ ಹೇಳಿದ್ದರು. ಅದರಂತೆ ಈಗ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ ಅಂದರೆ ಆಗಸ್ಟ್ 14