Featured
ಜಾತಿ ಗಣತಿ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಕಾರ!
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಸಮೀಕ್ಷೆ ನಡೆಸುವ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೆಲವೊಂದು ಷರತ್ತುಗಳನ್ನು ವಿಧಿಸಿ, ಜಾತಿ ಗಣತಿ ಮುಂದುವರಿಸಲು ಅವಕಾಶ ನೀಡಿ ಸಿಜೆ ವಿಭು ಭಕ್ರು ಅವರ ನೇತೃತ್ವದ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಕಳೆದ ಮೂರು ದಿನದಿಂದ ಅರ್ಜಿದಾರರು, ರಾಜ್ಯ ಸರ್ಕಾರದ ಹಾಗೂ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಪರವಾಗಿ ವಕೀಲರ ವಾದ-ಪ್ರತಿವಾದ ಆಲಿಸಿದ
ಶುಕ್ರವಾರ, ಶನಿವಾರ ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ!
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 26 (ಶುಕ್ರವಾರ) ಮತ್ತು 27 (ಶನಿವಾರ) ದಿನಗಳಲ್ಲಿ BESCOM ತುರ್ತು ಕಾರ್ಯಾಚರಣೆಯಿಂದಾಗಿ ಈ ಕೆಳಗಿನ ಬಡಾವಣೆಯಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ ವಾಗಲಿದೆ. ವಿದ್ಯುತ್ ವ್ಯತ್ಯಯ ಸಮಯ ಮತ್ತು ಉಪಕೇಂದ್ರಗಳು ಇಸ್ಕಾನ್ ಉಪಕೇಂದ್ರ ವ್ಯಾಪ್ತಿಯಲ್ಲಿ: ಬೆಳಿಗ್ಗೆ 10:00
ಕೋರ್ಟ್ ಆದೇಶ ಕೊಟ್ಟರೂ, ಯಾವ ಸೌಲಭ್ಯನೂ ಕೊಟ್ಟಿಲ್ಲ: ನಟ ದರ್ಶನ್ ಆರೋಪ
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಗುರುವಾರ ವಿಚಾರಣೆಗೆ ಹಾಜರಾದರು. ಇದೇ ವೇಳೆ ದರ್ಶನ್ ಪರ ವಕೀಲರು
ಬೈಕ್ ಟ್ಯಾಕ್ಸಿ ನಿರ್ಬಂಧ: ನಿಯಮ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ
ಬೈಕ್ ಟ್ಯಾಕ್ಸಿ ಸೇವೆ ನಿರ್ಬಂಧ ಕುರಿತು ನೀತಿ ಚೌಕಟ್ಟು ರೂಪಿಸಲು ಒಂದು ತಿಂಗಳ ಸಮಯ ನೀಡಲಾಗಿದ್ದರೂ ಈವರೆಗೂ ಯಾವುದೇ ನಿಯಮಾವಳಿ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬೈಕ್ ಟ್ಯಾಕ್ಸಿ ಮಾಲೀಕರ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠವು,
ದಾವಣಗೆರೆಯಲ್ಲಿ “ಐ ಲವ್ ಮಹಮ್ಮದೀಯ” ಫ್ಲೆಕ್ಸ್ : ಕೋಮುಗಳ ಮಧ್ಯೆ ಜಗಳ
ದಾವಣಗೆರೆ ನಗರದ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಐ ಲವ್ ಮಹಮ್ಮದೀಯ ಫ್ಲೆಕ್ಸ್ ಹಾಕಿದ್ದಕ್ಕೆ ಎರಡು ಕೋಮಿನ ನಡುವೆ ಗಲಾಟೆ ನಡೆದಿದೆ. ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್ ನಲ್ಲಿ ಅನ್ಯ ಕೋಮಿನ ಮನೆ ಮುಂದೆ ಐ ಲವ್ ಮಹಮ್ಮದೀಯ
ಸಾವಿನಲ್ಲೂ ಸಾರ್ಥಕತೆ ಮೆರೆದ ಬಿಜೆಪಿ ಶಾಸಕ ಸುರೇಶ್ ಕುಮಾರ್ ತಾಯಿ
ಬದುಕಿದ್ದಾಗ ಮಮತೆ, ಅಕ್ಕರೆಯಿಂದ ಮಕ್ಕಳನ್ನು ಪೋಷಿಸಿದ ತಾಯಿ, ಇಹಲೋಕ ತ್ಯಜಿಸಿದ ಬಳಿಕವೂ ಅನ್ಯರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹೌದು, ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ಅವರು ಇಹಲೋಕ
ಮೈಸೂರಿನಲ್ಲಿ ಎಸ್ ಎಲ್ ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ
ಕನ್ನಡದ ಖ್ಯಾತ ಕಾದಂಬರಿಕಾರ, ಸಾಹಿತಿ, ಪದ್ಮಭೂಷಣ ಎಸ್.ಎಲ್ ಭೈರಪ್ಪ ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ, ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ
ರಸ್ತೆ ಗುಂಡಿಗಳು ಬಿಜೆಪಿ ದುರಾಡಳಿತದ ಫಲ, ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಅನುದಾನ ಕೊಟ್ಟಿಲ್ಲ: ಡಿಸಿಎಂ
ಬೆಂಗಳೂರಿನ ರಸ್ತೆ ಗುಂಡಿಗಳು ಬಿಜೆಪಿ ಸರಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಟ್ಟಿಲ್ಲ ಎಂಬುದನ್ನು ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು
ತುಮಕೂರು ಮಿಲ್ಕ್ ಯೂನಿಯನ್‌ನಲ್ಲಿ ನೆಲದಲ್ಲಿ ಕುಳಿತು ಕೆಲಸ ಮಾಡುತ್ತಿರುವ ದಲಿತ ಅಧಿಕಾರಿ
ದಲಿತನೆಂಬ ಕಾರಣಕ್ಕೆ ತುಮಕೂರು ಮಿಲ್ಕ್ ಯೂನಿಯನ್ ನಲ್ಲಿ ಅಧಿಕಾರಿಯೊಬ್ಬರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಕಚೇರಿಯ ಹಿರಿಯ ಅಧಿಕಾರಿಗಳು ದಲಿತ ಅಧಿಕಾರಿಯ ಕುರ್ಚಿ-ಟೇಬಲ್ ಕಿತ್ತುಕೊಂಡು ನೆಲದ ಮೇಲೆ ಕುಳಿತು ಕೆಲಸ ಮಾಡಿಸಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತುಮುಲ್ ಲೆಕ್ಕಪತ್ರ ವಿಭಾಗದ
ಪತ್ನಿಯ ಶೀಲದ ಬಗ್ಗೆ ಶಂಕೆ: ಯಾದಗಿರಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆಗೈದ ತಂದೆ
ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೊಬ್ಬ ತನ್ನ ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಭಯಾನಕ ಕೃತ್ಯ ನಡೆದಿದೆ. ಪತಿ-ಪತ್ನಿಯ ಜಗಳದಿಂದ ಅಮಾಯಕ ಮುದ್ದು ಮಕ್ಕಳ ಪ್ರಾಣ ಬಲಿಯಾಗಿದೆ. ಮಲಗಿದ್ದ ಮಕ್ಕಳ ಮೇಲೆ ತಂದೆಯಾದವ ರಾಕ್ಷಸನಂತೆ




