Saturday, October 03, 2026
Menu

NEET ಬರೆಯಲು ಬಂದಿದ್ದ ಒಂಬತ್ತು ನಕಲಿ ಅಭ್ಯರ್ಥಿಗಳ ಬಂಧನ

ಬಿಹಾರದ ಪರೀಕ್ಷಾ ಕೇಂದ್ರಗಳಲ್ಲಿ ಜೂ 21ರಂದು ನಡೆದ ನೀಟ್‌-ಯುಜಿ ಮರುಪರೀಕ್ಷೆ ಬರೆಯಲು ಬಂದಿದ್ದ ಒಂಬತ್ತು ನಕಲಿ ಅಭ್ಯರ್ಥಿಗಳು ಹಾಗೂ ಅವರೊಂದಿಗಿದ್ದ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಖಿಸರಾಯ್ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದ್ದು, ಪರೀಕ್ಷಾ ಕೇಂದ್ರಗಳ ಮೇಲೆ ದಾಳಿ ನಡೆಸಿ ಬೇರೆಯವರ ಹೆಸರಿನಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ಒಂಬತ್ತು ನಕಲಿ ಅಭ್ಯರ್ಥಿಗಳು ಸೇರಿ 30 ಜನರನ್ನು ಬಂಧಿಸಿದೆ. ಲಖಿಸರಾಯ್ ಜಿಲ್ಲೆಯ ಕೇಂದ್ರಗಳಲ್ಲಿ ನಡೆಸಿದ ತಪಾಸಣೆ ವೇಳೆ

ಬೆಂಗಳೂರಿನಲ್ಲಿ ಉದ್ಯಮಿಗೆ 2.66 ಕೋಟಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್‌

ದುರಾಸೆಯ ಬೆನ್ನು ಹತ್ತಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರು ಆರೋಪಿಗಳನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆ ಶಾಖೆಯ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿನೋದ್ ಕುಮಾರ್, ಅರುಣ್ ಕುಮಾರ್ ಮತ್ತು ಕಿರಣ್ ಬಂಧಿತ ಆರೋಪಿಗಳು. 30

ಬಿಎಂಟಿಸಿ, ಕೆಎಸ್ಸಾರ್ಟಿಸಿ ಟಿಕೆಟ್‌ ದರ 44%, 33% ಹೆಚ್ಚಳ?

ಆರ್ಥಿಕ ನಷ್ಟ ಹಾಗೂ ಡೀಸೆಲ್‌ ದರ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಮತ್ತು ಕೆಎಸ್ಸಾರ್ಟಿಸಿ ಬಸ್ ಟಿಕೆಟ್ ದರವನ್ನು ಹೆಚ್ಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಪ್ರಸ್ತಾವನೆ ಸಲ್ಲಿಸಿವೆ. ಬಿಎಂಟಿಸಿ ಟಿಕೆಟ್ ದರದಲ್ಲಿ 44%, ಕೆಎಸ್ಸಾರ್ಟಿಸಿ

ಟ್ರಂಪ್‌ ದಾಳಿ ಬೆದರಿಕೆ: ಜಾಗರೂಕರಾಗಿರಿ ಎಂದು ಇರಾನ್‌ ತಿರುಗೇಟು

ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಅಮೆರಿಕ-ಇರಾನ್ ಯುದ್ಧ ನಿಲ್ಲಿಸುವ ಕುರಿತು ಶಾಂತಿ ಮಾತುಕತೆ ಆರಂಭಗೊಂಡಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಾಯಕರ ನಡುವಿನ ವಾಗ್ದಾಳಿ ಮುಂದುವರಿದಿದೆ. ಇರಾನ್ ಮೇಲೆ ಮತ್ತೊಮ್ಮೆ ಭೀಕರ ದಾಳಿ ನಡೆಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದು, ನಮ್ಮ ಸಶಸ್ತ್ರ ಪಡೆಗಳು

ಬೆಂಗಳೂರಿನಲ್ಲಿ ದಿನಕ್ಕೆ 1,775 ಟನ್ ಸಂಸ್ಕರಣೆಯಾಗದ ಕಸ ರಾಜಕಾಲುವೆಗೆ: ಆರ್‌ ಅಶೋಕ

ಬೆಂಗಳೂರಿನಲ್ಲಿ ಪ್ರತಿದಿನ 1,775 ಟನ್ ಕಸ ಸಂಸ್ಕರಣೆಯಾಗದೇ ರಸ್ತೆ, ರಾಜಕಾಲುವೆ ಸೇರುತ್ತಿದೆ. ನಿಮ್ಮ ಮುಖ್ಯಮಂತ್ರಿ @DKShivakumar ಅವರ “ಬ್ರ್ಯಾಂಡ್ ಬೆಂಗಳೂರು” ಅಂದರೆ ಸಾರ್ವಜನಿಕರು ಕಲುಷಿತ ನೀರು ಕುಡಿದು ಸಾಯಬೇಕಾ,  ಕಸದ ರಾಶಿಯಲ್ಲಿ ನರಳಬೇಕಾ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಪ್ರಶ್ನಿಸಿದ್ದಾರೆ.

ಬಹುತ್ವ ಕಾಪಾಡಲು ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್‌ ಹೋರಾಟ ನಿರಂತರವಾಗಿರಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ನಮ್ಮ ಸಮಾಜದಲ್ಲಿರುವ ಬಹುತ್ವವನ್ನು ಕಾಪಾಡುವ ಅಗತ್ಯವಿದೆ. ಹರಿಪ್ರಸಾದ್‌ ಅವರು ಆರ್‌ಎಸ್‌ಎಸ್‌ನ ವಿರುದ್ಧವಾಗಿ, ಬಿಜೆಪಿಯ ವಿರುದ್ಧವಾಗಿ ಹೋರಾಟದ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ಆ ಪ್ರಯತ್ನ ನಮ್ಮೆಲ್ಲಾ ಕಾರ್ಯಕರ್ತರಲ್ಲಿ ಬರಬೇಕು. ಈ ಪ್ರಯತ್ನ ಮಾಡಿದಾಗ ಮಾತ್ರ ನಾವು ಈ

ಇದೇ ವರ್ಷದಿಂದ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ: ಸಿಎಂ ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ  ಮಾರ್ಗದರ್ಶನದಂತೆ  ಇದೇ ವರ್ಷದಿಂದ ವಿದ್ಯಾರ್ಥಿ ಚುನಾವಣೆ ನಡೆಸಲಾಗುವುದು. ವಿದ್ಯಾರ್ಥಿ ನಾಯಕರ ಚುನಾವಣೆಯನ್ನು ಕಾಲೇಜುಗಳಲ್ಲಿ ನಡೆಸಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು.  ಆ ಮೂಲಕ ಪಂಚಾಯಿತಿಗಳಿಂದ ಪಾರ್ಲಿಮೆಂಟ್ ವರೆಗೂ ನಾಯಕರನ್ನು ತಯಾರು ಮಾಡಲಾಗುವುದು. ಇನ್ನು ಮಹಿಳೆಯರಿಗೆ ಮೀಸಲಾತಿ ನೀಡುವುದನ್ನು ತಪ್ಪಿಸಲಾಗುವುದಿಲ್ಲ.

ಬಿಡದಿ ಯೋಜನೆ ಕುಮಾರಸ್ವಾಮಿ ಆರಂಭಿಸಿ ಯಡಿಯೂರಪ್ಪ ಮುಂದುವರಿಸಿದ್ದರು: ಸಿಎಂ 

ಬಿಡದಿಯಲ್ಲಿ ಕುಮಾರಸ್ವಾಮಿ  ನೋಟಿಫಿಕೇಷನ್ ಮಾಡಿದ್ದರು. ಯಡಿಯೂರಪ್ಪ ಯೋಜನೆ ಮುಂದುವರಿಸಿದ್ದರು. ಅದನ್ನು ನಾವು ಇನ್ನಷ್ಟು ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದೇವೆಯೇ ಹೊರತು ಹೊಸದಾಗಿ ನಾವೇನೂ ಮಾಡುತ್ತಿಲ್ಲ. ಬಿಡದಿ ಕೈಗಾರಿಕಾ ಪ್ರದೇಶಕ್ಕೆ ಭೂಸ್ವಾಧೀನ ಮಾಡಿದವರು ಯಾರು,  ಈಗಿರುವ 9 ಸಾವಿರ ಎಕರೆಯಲ್ಲಿ 1 ಸಾವಿರ ಎಕರೆಯನ್ನು

ಪ್ರಜಾಸೇವೆ ಇಲಾಖೆ ಅಸ್ತಿತ್ವಕ್ಕೆ, ರಾಜ್ಯದ ವಿದ್ಯಾರ್ಥಿಗಳಿಗೆ ದೆಹಲಿಯಲ್ಲಿ ಕರ್ನಾಟಕ ಭವನ: ಸಿಎಂ

ಸಾರ್ವಜನಿಕರ ಕುಂದುಕೊರತೆಗಳು, ಸಾರ್ವಜನಿಕ ಹೋರಾಟಗಳ ಅಹವಾಲುಗಳನ್ನು ಆಲಿಸಲು “ಪ್ರಜಾಸೇವೆ ಇಲಾಖೆ” ಯನ್ನು ಹೊಸದಾಗಿ ಪ್ರಾರಂಭ ಮಾಡಲಾಗುತ್ತಿದೆ. ಪ್ರತ್ಯೇಕ ಸಚಿವರಿಗೆ ಇದರ ಜವಾಬ್ದಾರಿ ವಹಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಶಿವಕುಮಾರ್‌ ಮಾಧ್ಯಮಗೋಷ್ಠಿಯಲ್ಲಿ

ಸಾಯಲು ಹೋಗಿದ್ದ ಮಗನ ಉಳಿಸಲು ಯತ್ನಿಸಿ ತಂದೆಯೂ ಸಾವು

ಜಗಳವಾಡಿ ಸಾಯಲು ಹೋಗಿದ್ದ ಮಗನನನ್ನು ಉಳಿಸಲು ಹೋದ ವ್ಯಕ್ತಿ ಮೇಲೆ ರೈಲು ಹರಿದು ತಂದೆ-ಮಗ ಇಬ್ಬರೂ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ದೇವರಿಯಾದಲ್ಲಿ ನಡೆದಿದೆ. ಗೋರಖ್‌ಪುರ-ಛಾಪ್ರಾ ರೈಲು ವಿಭಾಗದ ಗೌರಿಬಜಾರ್ ಪಶ್ಚಿಮ ರೈಲ್ವೆ ಕ್ರಾಸಿಂಗ್ ಬಳಿ ಈ ದುರಂತ ಸಂಭವಿಸಿದೆ. ಗೌರಿಬಜಾರ್ ಪೊಲೀಸ್