Featured
ಕಸ್ತೂರಿ ರಂಗನ್ ವರದಿ: ನೆಲಮಟ್ಟದ ಸರ್ವೆ ಮಾಡಿ, ಉತ್ತಮ ವಕೀಲರನ್ನು ನೇಮಿಸಲು ಆರ್ ಅಶೋಕ ಸಲಹೆ
ಎನ್‌ಜಿಟಿ ಆದೇಶದಂತೆ ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೆ ಅಧಿಸೂಚನೆ ಹೊರಡಿಸಿದೆಯೇ ಹೊರತು, ಸ್ವಯಂಪ್ರೇರಿತ ನಿರ್ಧಾರ ಕೈಗೊಂಡಿಲ್ಲ. ಆದ್ದರಿಂದ ಈ ವಿಚಾರದಲ್ಲಿ ರಾಜಕೀಯ ಮಾಡದೆ ನೆಲಮಟ್ಟದ ಸರ್ವೆ ಹಾಗೂ ಕೋರ್ಟ್‌ನಲ್ಲಿ ಉತ್ತಮ ವಕೀಲರನ್ನು ನೇಮಿಸಿ ಮನವರಿಕೆ ಮಾಡಲು ರಾಜ್ಯ ಸರ್ಕಾರ ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಸಲಹೆ ನೀಡಿದರು. ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಸಂಬಂಧ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಜಾರಿಯಾದರೆ
ನಕಲಿ ಔಷಧ ದಂಧೆ: ಎಫ್‌ಡಿಎ ಓಂಕಾರೇಶ್ವರ್ ಅಮಾನತು
ನಕಲಿ ಔಷಧ ತಯಾರಿಕೆ ಮತ್ತು ಪೂರೈಕೆ ಜಾಲದ ವಿರುದ್ಧ ತನಿಖೆ ತೀವ್ರಗೊಂಡಿದ್ದು, ಚಾಮರಾಜಪೇಟೆಯ ಕೃಪಾ ಹೆಲ್ತ್ ಕೇರ್ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪದಡಿ ಎಫ್‌ಡಿಎ ಓಂಕಾರೇಶ್ವರ್ ಅವರನ್ನು ಅಮಾನತುಗೊಳಿಸಲಾಗಿದೆ. ನಕಲಿ ಔಷಧ ದಂಧೆ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳ ಮಟ್ಟದಲ್ಲಿ ತೆಗೆದುಕೊಂಡ
ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾ ಗೌಡ ಜಾಮೀನು ಅರ್ಜಿಗೆ ಪ್ರಾಸಿಕ್ಯೂಷನ್ ಆಕ್ಷೇಪ
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ೧ ಆರೋಪಿಯಾಗಿರುವ ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹವಾಸಿಯಾಗಿ ಒಂದು ವರ್ಷವಾಗಿದ್ದು, ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಂದೂಡಿಕೆಯಾಗಿದೆ. ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸೋಮವಾರ ವಿಚಾರಣೆ ಬಂದಿತ್ತು, ಅರ್ಜಿ ಸಲ್ಲಿಸಿದ್ದು
ಕೊಪ್ಪಳದಲ್ಲಿ ಕೋತಿ ತಳ್ಳಿದ್ದಕ್ಕೆ ಬಿದ್ದು ಮೃತಪಟ್ಟ ಮಹಿಳೆ
ಕೊಪ್ಪಳದ ಬಿಟಿ ಪಾಟೀಲ್ ನಗರದಲ್ಲಿ ಕೋತಿಯೊಂದು ತಳ್ಳಿದ ರಭಸಕ್ಕೆ ಕುಸಿದುಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಜಮುನಿಸಾ ಬೇಗಂ (91) ಮೃತಪಟ್ಟವರು. ನಜಮುನಿಸಾ ಬೇಗ್‌ಂ ಮನೆ ಮುಂದೆ ನಿಂತುಕೊಂಡಿದ್ದಾಗ ಬಂದ ಕೋತಿ ಅವರನ್ನು ತಳ್ಳಿದೆ, ಪರಿಣಾಮ ನಜಮುನಿಸಾ ಬೇಗಂ ಅವರ ತಲೆಗೆ ಪೆಟ್ಟು
ಧರ್ಮಸ್ಥಳ ಸೌಜನ್ಯ ಕೇಸ್ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಧರ್ಮಸ್ಥಳ ಸೌಜನ್ಯ ಸಾವಿನ ಪ್ರಕರಣದ ಮರು ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಆರೋಪಿಗಳನ್ನು ಈಗಾಗಲೇ ಖುಲಾಸೆಗೊಳಿಸಿದೆ. ಇದನ್ನು ಪ್ರಶ್ನಿಸಿ ಸೌಜನ್ಯ ಅವರ ತಾಯಿ ಕುಸುಮಾವತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮರುತನಿಖೆಗೆ ಮನವಿ
ಸೈಬರ್ ವಂಚನೆ: ಅಕ್ರಮ ಹಣ ವರ್ಗಾವಣೆಗೆ ಮ್ಯೂಲ್ ಖಾತೆಗಳ ಬಳಕೆ
ಸೈಬರ್ ವಂಚನೆ ಮೂಲಕ ದೋಚಿದ ಹಣವನ್ನು ಅಕ್ರಮವಾಗಿ ವರ್ಗಾಯಿಸಲು ಮ್ಯೂಲ್ ಬ್ಯಾಂಕ್ ಖಾತೆಗಳನ್ನು ಬಳಸುತ್ತಿರುವ ಜಾಲವನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಯಲಿಗೆಳೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ಮೊಬೈಲ್ ಫೋನ್‌ಗಳಲ್ಲಿ 507 ಖಾತೆಗಳ ಮಾಹಿತಿ
ಗಣೇಶ ವಿಸರ್ಜನೆ: ಕೆರೆಯಲ್ಲಿ ಮುಳುಗಿ ಯುವಕ ಸಾವು
ಶಿವಮೊಗ್ಗದ ಭದ್ರಾವತಿ ತಾಲೂಕಿನ ದೇವರಹಳ್ಳಿ ಗ್ರಾಮದ ಬಳಿ ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ದೇವರಹಳ್ಳಿ ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ೨೦ ವರ್ಷದ ರಾಕೇಶ್ ಮೃತಪಟ್ಟಿರುವ ಯುವಕ. ಈತ ಭದ್ರಾವತಿಯಲ್ಲಿ ಪದವಿ ಓದುತ್ತಿದ್ದ.
ಸರ್ಕಾರದಲ್ಲಿ ಹಣಕಾಸಿನ ಕೊರತೆ ಇಲ್ಲ, ಬಿಜೆಪಿ ನಾಯಕರಿಂದ ಬೊಗಳೆ: ಬೈರತಿ ಸುರೇಶ್
ರಾಜ್ಯದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಆರೋಗ್ಯ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಿದೆ ಎಂದು ಹೆಬ್ಬಾಳ ಕ್ಷೇತ್ರದ ಶಾಸಕ, ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜು ಆವರಣದಲ್ಲಿ 125 ಹಾಸಿಗೆ
ಪಿಜಿಆರ್ ಸಿಂಧ್ಯಾ ಜೀವನ ಶಿಸ್ತು, ಮೌಲ್ಯ ಮತ್ತು ಜನಸೇವೆ ಮಾದರಿ: ಮಾಜಿ ಸಿಎಂ ಸಿದ್ದರಾಮಯ್ಯ
ಪಿಜಿಆರ್ ಸಿಂಧ್ಯಾ ಅವರು ಯಾವುದೇ ಇಲಾಖೆ ನೀಡಿದರೂ ಅದನ್ನು ಅಚ್ಚುಕಟ್ಟಾಗಿ, ಶಿಸ್ತಿನಿಂದ ಹಾಗೂ ಸಮರ್ಥವಾಗಿ ನಿರ್ವಹಿಸುತ್ತಿದ್ದ ಹಾರ್ಡ್ ವರ್ಕರ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಮಾಜಿ ಸಚಿವರಾದ ಸಿಂಧ್ಯಾ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಪಿಜಿಆರ್
ರೈತರ ಹಿತರಕ್ಷಣೆಗೆ ಸೂಕ್ತ ನಿರ್ಣಯ ಅಂಗೀಕಾರ: ಮುಖ್ಯಮಂತ್ರಿ ಶಿವಕುಮಾರ್ ಭರವಸೆ
ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತ ಕೆ. ಕಸ್ತೂರಿರಂಗನ್ ಸಮಿತಿ ವರದಿ ಬಗ್ಗೆ ಚರ್ಚಿಸಲು ಕರೆದಿರುವ ವಿಶೇಷ ಅಧಿವೇಶನದಲ್ಲಿ ರೈತರಿಗೆ ಧಕ್ಕೆಯಾಗದಂತೆ ಸೂಕ್ತ ನಿರ್ಣಯ ಅಂಗೀಕರಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಸಕಲೇಶಪುರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ, ಗ್ಯಾರಂಟಿ ಅನುಷ್ಠಾನ




