Saturday, November 22, 2025
Menu

ರಾಜ್ಯ ಸೇರಿ ದೇಶದ ಹಲವೆಡೆ ಭಾರಿ ಮಳೆ ಸಾಧ್ಯತೆ

ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ, ಸೆಪ್ಟೆಂಬರ್ 22ರಂದು ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಕರಾವಳಿಯಲ್ಲಿ ಸಮುದ್ರವು ಪ್ರಕ್ಷುಬ್ಧವಾಗುವ ಬಗ್ಗೆ ಇಲಾಖೆ ಎಚ್ಚರಿಕೆ ನೀಡಿದೆ. ಒಡಿಶಾ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದ ಮೀನುಗಾರರು ಪರಿಸ್ಥಿತಿ ಸುಧಾರಿಸುವವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ದಕ್ಷಿಣದಲ್ಲಿ ಕೇರಳ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ದೇಶದ ಪೂರ್ವ, ಈಶಾನ್ಯ ಮತ್ತು ದಕ್ಷಿಣ ಭಾಗಗಳಲ್ಲಿ ವ್ಯಾಪಕವಾಗಿ ಮುಂಗಾರು

ಇಬ್ಬರು ಯುವತಿಯರೊಂದಿಗೆ ಸಂಬಂಧ; ಲಿವ್‌ ಇನ್‌ ಸಂಗಾತಿಯ ಕೊಂದ ಯುವಕ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಇಬ್ಬರು ಯುವತಿಯರೊಂದಿಗೆ ಸಂಬಂಧ ಹೊಂದಿದ್ದ ಯುವಕನೊಬ್ಬ ಒಬ್ಬಾಕೆಯ ಮಾತು ಕೇಳಿ ತನ್ನ ಲಿವ್-ಇನ್ ಸಂಗಾತಿಯನ್ನು ಕೊಲೆ ಮಾಡಿದ್ದಾನೆ. ಎರಡನೇ ಯುವತಿ ಆತ ಮತ್ತು ಆತನ ಮೊದಲ ಗೆಳತಿ ನಡುವಿನ ಸಂಬಂಧದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಆಕೆಯನ್ನು ಕೊಲೆ

ಇಂದು, ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಸ್ಕಾಂ ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಉತ್ತರ ಮತ್ತು ದಕ್ಷಿಣ ಭಾಗದಲ್ಲಿ ಸೆಪ್ಟೆಂಬರ್

ಕೂಡಲಸಂಗಮ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ

ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ಕೂಡಲಸಂಗಮ ಪೀಠದಿಂದ  ಉಚ್ಛಾಟಿಸಲಾಗಿದ್ದು, ಪಂಚಮಸಾಲಿ ಸಮುದಾಯದಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಅಖಿಲ ಭಾರತ ಲಿಂಗಾಯ ಪಂಚಮಸಾಲಿ ಸಮಾಜ ಟ್ರಸ್ಟ್ ನ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ವಾಮೀಜಿಗಳ ಉಚ್ಛಾಟನೆ ನಿರ್ಧಾರ

ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಕೆ ಶಿವಕುಮಾರ್

“ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು

ಜಾತಿ ಗಣತಿ ಸಮೀಕ್ಷೆಯ ಹಿಂದೆ ಕ್ರೈಸ್ತ ಮಿಷನರಿಗಳ ಕೈವಾಡವಿದೆ: ಆರ್‌ ಅಶೋಕ

ಜಾತಿ ಗಣತಿ ಸಮೀಕ್ಷೆಯ ಹಿಂದೆ ಕ್ರೈಸ್ತ ಮಿಷನರಿಗಳ ಕೈವಾಡವಿದೆ. ಸರ್ಕಾರ ಸಮೀಕ್ಷೆ ಹೆಸರಲ್ಲಿ ಹಿಂದೂ ಧರ್ಮ ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಅಜೆಂಡಾದಲ್ಲೇ ಹಿಂದೂ ವಿರೋಧಿ ನೀತಿಯಿದೆ. ಹೊಸದಾಗಿ 52 ಜಾತಿಗಳನ್ನು ಸೇರಿಸಿ ಗೊಂದಲ ಮಾಡಿದ್ದರು. ಎಲ್ಲದರ ಮುಂದೆ ಕ್ರಿಶ್ಚಿಯನ್ ಹೆಸರು

ಲೈಂಗಿಕ ಕ್ರಿಯೆಗೆ ಒತ್ತಾಯದ ಆರೋಪ: ದೇಗುಲದೊಳಗೆ ಅರ್ಚಕ ಆತ್ಮಹತ್ಯೆ

ಅರ್ಚಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿರುವುದಾಗಿ ಯುವತಿಯೊಬ್ಬಳು ಆರೋಪಿಸಿ ಕೇಸ್ ದಾಖಲಿಸಿದ ಕೆಲವೇ ಗಂಟೆಗಳ ನಂತರ ಮುಂಬೈ ಉಪನಗರದ ದೇವಸ್ಥಾನದೊಳಗೆ ಅರ್ಚಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಾಂದಿವಲಿ ಪ್ರದೇಶದ ದೇವಾಲಯದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅರ್ಚಕರ ಮೃತದೇಹ

ಎಚ್-1ಬಿ ವೀಸಾ ಶುಲ್ಕ ಹೆಚ್ಚಳ: ಟ್ರಂಪ್‌ ಸ್ಪಷ್ಟನೆ

ಅಮೆರಿಕದಲ್ಲಿ ಕೆಲಸ ಮಾಡಲು ಎಚ್-1ಬಿ ವೀಸಾ ಪಡೆಯುವವರಿಗೆ ಶುಲ್ಕ ಹೆಚ್ಚಳದ ಬಗ್ಗೆ ಡೊನಾಲ್ಡ್ ಟ್ರಂಪ್ ಆಡಳಿತವು ಸ್ಪಷ್ಟನೆಗಳನ್ನು ನೀಡಿದೆ. ಈ ಸ್ಪಷ್ಟನೆಗಳಿಂದ ಭಾರತೀಯರು ಸೇರಿದಂತೆ ನಾನಾ ದೇಶಗಳ ಉದ್ಯೋಗಿಗಳ ಆತಂಕ ಕಡಿಮೆಯಾಗಿದೆ. ಶುಲ್ಕ ಹೆಚ್ಚಳವು ಹೊಸ ಅರ್ಜಿಗಳಿಗೆ ಮಾತ್ರ ಅನ್ವಯಿಸಲಿದೆ. ಎಚ್-1ಬಿ

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಕಾಟ: ರಾಜ್ಯದಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ವ್ಯಾಪಕವಾಗಿದ್ದು, ಈ ವರ್ಷ ಸೋಂಕಿಗೆ 19 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆ ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಭಯ ಪಡುವ ಅವಶ್ಯಕತೆ ಇಲ್ಲ ಎಂದು ಕೆ.ಸಿ ಜನರಲ್ ಆಸ್ಪತ್ರೆ

ನೆಲಮಂಗಲದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಡಿಯಿಂದ ಬಿದ್ದು ಸಾವು

ಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ಗೆಜ್ಜಗದಹಳ್ಳಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಕಾಮಗಾರಿ ವೇಳೆ ಆಯತಪ್ಪಿ ಎರಡನೇ ಮಹಡಿಯಿಂದ ಬಿದ್ದು ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ಬೀರಪ್ಪ (34) ಮೃತ ಕಾರ್ಮಿಕ. ಕಳೆದ 8 ವರ್ಷದಿಂದ ಈ