Saturday, January 17, 2026
Menu

ಬಾಲಿವುಡ್‌ ನಟ ಧರ್ಮೇಂದ್ರ ಇನ್ನಿಲ್ಲ

ಬಾಲಿವುಡ್‍ನ ಹೆಸರಾಂತ ನಟ ಧರ್ಮೇಂದ್ರ ನಿಧನರಾದರು. ಅವರಿಗೆ 89 ವರ್ಷವಾಗಿತ್ತು. ಧರ್ಮೇಂದ್ರ ಅನಾರೋಗ್ಯ ಪೀಡಿತರಾಗಿ ಮುಂಬೈನ ಬ್ರೀಜ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇತ್ತೀಚೆಗೆ ಮನೆಗೆ ಹಿಂದಿರುಗಿದ್ದರು, ಆದರೂ ಅವರ ಆರೋಗ್ಯದಲ್ಲಿ ಚೇತರಿಕೆಯಾಗದೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಅವರ ಅಂತ್ಯಕ್ರಿಯೆ ಪವನ್ ಹನ್ಸ್ ಸ್ಮಶಾನದಲ್ಲಿ ನಡೆಯಲಿದೆ. ಧರ್ಮೇಂದ್ರ ಅವರ ಪೂರ್ಣ ಹೆಸರು ಧರ್ಮೇಂದ್ರ ಕೇವಲ್ ಕೃಷ್ಣ ಡಿಯೋಲ್. ಡಿಸೆಂಬರ್ 8, 1935 ರಂದು ಪಂಜಾಬ್‌ನ ನಸ್ರಾನಿ ಗ್ರಾಮದಲ್ಲಿ ಜನಿಸಿದ್ದರು. ಆರು ದಶಕಗಳಿಗೂ

BREAKING ಬಾಲಿವುಡ್ ಹೀಮ್ಯಾನ್ ಖ್ಯಾತಿಯ ಹಿರಿಯ ನಟ ಧರ್ಮೆಂದ್ರ ಇನ್ನಿಲ್ಲ

ಮುಂಬೈ: ಅನಾರೋಗ್ಯದಿಂದ ಚೇತರಿಸಿಕೊಂಡಿದ್ದ ಬಾಲಿವುಡ್ ಹಿರಿಯ ನಟ ಧರ್ಮೆಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೆಂದ್ರ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಚೇತರಿಸಿಕೊಂಡು ಮರಳಿದ್ದ ಧರ್ಮೆಂದ್ರ ಅವರ ಆರೋಗ್ಯ ಸ್ಥಿತಿ

ಪಾಕ್‌ ಅರಸೇನಾಪಡೆ ಕಚೇರಿ ಮೇಲೆ ಆತ್ಮಾಹುತಿ ಬಾಂಬ್‌ ದಾಳಿ: ಆರು ಸಾವು

ಪಾಕಿಸ್ತಾನದ ಪೇಶಾವರದಲ್ಲಿರುವ ಅರೆಸೇನಾ ಪಡೆಯ ಪ್ರಧಾನ ಕಚೇರಿಯ ಮೇಲೆ ಆತ್ಮಾಹುತಿ ಬಾಂಬ್​ ದಾಳಿ ನಡೆದಿದ್ದು, ದಾಳಿ ಹಾಗೂ ನಂತರದ ಕಾರ್ಯಾಚರಣೆಯಲ್ಲಿ ಒಟ್ಟು 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದಾಳಿಯಲ್ಲಿ ಅಸು ನೀಗಿದವರಲ್ಲಿ ಮೂವರು ಉಗ್ರರು ಹಾಗೂ ಮೂವರು ಭದ್ರತಾ ಸಿಬ್ಬಂದಿ ಸೇರಿದ್ದಾರೆ. ಪ್ಯಾರಾಮಿಲಿಟರಿ

ಮೂರು ದಿನದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಮಧುಗಿರಿ ತಾಲೂಕಿನಲ್ಲಿ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಮಧು (38) ಎಂಬ ವ್ಯಕ್ತಿ ಬೈಕ್ ಸಮೇತ ಶವವಾಗಿ ಪತ್ತೆಯಾಗಿದ್ದಾರೆ. ಮಧುಗಿರಿಯ ಹೊಸಕೆರೆ-ನೇರಳೆಕೆರೆ ರಸ್ತೆಯಲ್ಲಿರುವ ಲಕ್ಷ್ಮೀದೇವಿಪುರ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದೆ. ಇವರು ಕಾಣೆಯಾಗಿದ್ದ ಬಗ್ಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

53ನೇ ಸಿಜೆಐ ಆಗಿ ಜಸ್ಟಿಸ್‌ ಸೂರ್ಯಕಾಂತ್ ಪ್ರಮಾಣ ವಚನ

ದೇಶದ 53ನೇ ಸಿಜೆಐ ಆಗಿ ಜಸ್ಟಿಸ್‌ ಸೂರ್ಯಕಾಂತ್ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಸೂರ್ಯಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು

ಅಧಿಕಾರ ಹಂಚಿಕೆ: ಹೈಕಮಾಂಡ್‌ ತೀರ್ಮಾನಕ್ಕೆ ನಾನೂ, ಶಿವಕುಮಾರ್‌ ಬದ್ಧರಾಗಬೇಕು ಎಂದ ಸಿಎಂ

ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ ಕೆ ಶಿವಕುಮಾರ್ ಒಪ್ಪಬೇಕು,  ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿಕೆ ಶಿವಕುಮಾರ್ ಬದ್ಧರಾಗಬೇಕು ಎಂದು  ಮುಖ್ಯಮಂತ್ರಿ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ  ಉತ್ತರಿಸಿದರು. ಕ್ಕಬಳ್ಳಾಪುರ- ಶಿಡ್ಲಘಟ್ಟದಲ್ಲಿ

ನ್ಯಾಯಾಂಗ ಬಂಧನ ಮುಗಿದರೂ ಹಾಜರುಪಡಿಸದ ಪೊಲೀಸ್‌: ಆರೋಪಿಗೆ ಜಾಮೀನು ನೀಡಿದ ಹೈಕೋರ್ಟ್‌

ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಪೊಲೀಸರು ಕಸ್ಟಡಿ ವಿಸ್ತರಣೆಗೆ ಕೋರದ ಮತ್ತು ಬಂಧಿತನನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಮುಂದೆ ಹಾಜರುಪಡಿಸದ ಕಾರಣ ಪ್ರಕರಣವೊಂದರಲ್ಲಿ ಯುವಕನಿಗೆ ಹೈಕೋರ್ಟ್‌ ಜಾಮೀನು ನೀಡಿದೆ. ನ್ಯಾಯಾಂಗ ಬಂಧನದಲ್ಲಿದ್ದ ಮಂಡ್ಯ ಹುಬ್ಬನಹಳ್ಳಿ ಗ್ರಾಮದ ಎಚ್‌.ವಿ.ಚರಣ್‌ ಜಾಮೀನು ಕೋರಿ ಸಲ್ಲಿಸಿದ್ದ

ಮಾಲೂರಿನಲ್ಲಿ ಬ್ರಿಡ್ಜ್‌ನಿಂದ ಉರುಳಿದ ಕಾರು: ಸ್ಥಳದಲ್ಲೇ ನಾಲ್ವರು ಯುವಕರ ಸಾವು

ಕೋಲಾರದ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬ್ರಿಡ್ಜ್ ಬಳಿ ತಡರಾತ್ರಿ ಚೆನ್ನೈ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಬ್ರಿಡ್ಜ್‌ ಮೇಲಿನಿಂದ ಉರುಳಿ ನಾಲ್ವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ಯುವಕರು ಚೆನ್ನೈನವರಾಗಿದ್ದು, ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27),

ಡಿಕೆ ಶಿವಕುಮಾರ್‌ ಸಿಎಂ ಆಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ಅಭಿಮಾನಿಗಳಿಂದ ಪೂಜೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳು ಸಿಎಂ‌ ಸಿದ್ದರಾಮಯ್ಯ ತವರು ಜಿಲ್ಲೆಯ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಮಾಲಾಧಾರಿಗಳಾಗಿ ಶಬರಿಮಲೆ ಯಾತ್ರೆಗೆ ಸಿದ್ಧರಾಗಿರುವ ಭಕ್ತರು ಡಿಕೆ ಶಿವಕುಮಾರ್ ಅವರ ಭಾವಚಿತ್ರ

ಪೊಲೀಸ್‌ ಅಧಿಕಾರಿಗಳು, ಬ್ಯಾಂಕ್‌ ಮ್ಯಾನೇಜರ್‌ಗಳ ಮದುವೆಯಾಗಿ ಕೋಟಿ ಕೋಟಿ ದೋಚುತ್ತಿದ್ದ ಮಹಿಳೆ ಪೊಲೀಸ್‌ ಬಲೆಗೆ

ಪೊಲೀಸರು ಸೇರಿದಂತೆ ಸರ್ಕಾರಿ ಅಧಿಕಾರಿಗಳು, ಬ್ಯಾಂಕ್‌ ಮ್ಯಾನೇಜರ್‌ಗಳನ್ನು ಒಲಿಸಿ ಮದುವೆಯಾಗಿ ನಂಬಿಸುವುದು, ಮತ್ತೆ ಕೆಲವರನ್ನು ಸಂಬಂಧ ಬೆಳೆಸಿ ಬಲೆಗೆ ಬೀಳಿಸುವುದು, ಬಳಿಕ ಅವರಲ್ಲಿದ್ದ ಹಣವನ್ನೆಲ್ಲ ದೋಚುವುದನ್ನೇ ಜೀವನವನ್ನಾಗಿಸಿಕೊಂಡಿದ್ದ ಉತ್ತರ ಪ್ರದೇಶದ ಮಹಿಳೆಯೊಬ್ಬಳು ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಕೆಲವು ಬ್ಯಾಂಕ್​ ಮ್ಯಾನೇಜರ್​ ಮತ್ತು