Saturday, January 17, 2026
Menu

ಕಠಿಣ ಸವಾಲು ಎದುರಿಸಿ ಪಕ್ಷ ಕಟ್ಟಿದ್ದೇವೆ; ಮುಂದೆಯೂ ಕಟ್ಟುತ್ತೇವೆ: ಹೆಚ್.ಡಿ. ದೇವೇಗೌಡ ಗುಡುಗು

ಬೆಂಗಳೂರು: ಅದೆಷ್ಟೋ ಕಠಿಣ ಸವಾಲುಗಳನ್ನು ಎದುರಿಸಿ ನಾವು ಜೆಡಿಎಸ್ ಪಕ್ಷವನ್ನು ಕಟ್ಟಿದ್ದೇವೆ. ಮುಂದೆಯೂ ಇಂಥಹ ಸವಾಲುಗಳನ್ನು ಮೆಟ್ಟಿನಿಂತು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ. ಯಾರಿಗೂ ಯಾವ ರೀತಿಯ ಅನುಮಾನ ಬೇಕಿಲ್ಲ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹೇಳಿದರು. ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ನಮ್ಮ ಪಕ್ಷವನ್ನು ಬಹಳಷ್ಟು ನಾಯಕರು ಬಿಟ್ಟು ಹೋಗಿದ್ದಾರೆ. ಈಗಿನ ಕರ್ನಾಟಕದ ಮುಖ್ಯಮಂತ್ರಿ ಸೇರಿ. ನಮ್ಮ ಪಕ್ಷದಿಂದಲೇ

ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಮೆಕ್ಕೆಜೋಳ ಖರೀದಿಸು ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದ್ದು, ಇವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ರೈತರ ಬೇಡಿಕೆಯಂತೆ ಪ್ರತಿ ಕ್ವಿಂಟಾಲ್‌ಗೆ 3000 ರೂ. ಕೊಟ್ಟು ಮೆಕ್ಕೆಜೋಳ ಖರೀದಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ

ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ

ಧಾರವಾಡ: ಸಾಲದ ಭಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಚಿಕ್ಕಮಲ್ಲಿಗವಾಡದ ನಾರಾಯಣ ಶಿಂಧೆ (42), ಇವರ ತಂದೆ ವಿಠ್ಠಲರಾವ (85), ಇಬ್ಬರು ಮಕ್ಕಳಾದ ಶಿವರಾಜ (12) ಮತ್ತು ಶ್ರೀನಿಧಿ

ದುಬೈ ಏರ್ ಶೋನಲ್ಲಿ ಭಾರತದ ತೇಜಸ್ ವಿಮಾನ ಪತನ: ಪೈಲೆಟ್ ಸಾವು

ನವದೆಹಲಿ: ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್‌ ಯುದ್ಧ ವಿಮಾನ ಪತನಗೊಂಡಿದ್ದು, ಪೈಲೆಟ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್‌ ನಿರ್ಮಿತ ಲಘು ಯುದ್ಧ ವಿಮಾನವು ಸ್ಥಳೀಯ ಕಾಲಮಾನ ಇಂದು ಮಧ್ಯಾಹ್ನ 2:10ರ ಸುಮಾರಿಗೆ ವೈಮಾನಿಕ ಪ್ರದರ್ಶನ ನೀಡುವಾಗ

ನನಗೆ ಯಾವುದೇ ಬಣ ಇಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ. ನಾನು ಯಾವುದೇ ಬಣದ ನಾಯಕ ಅಲ್ಲ. ನಾನು 140 ಜನ ಶಾಸಕರ ಅಧ್ಯಕ್ಷ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರು ದೆಹಲಿಗೆ ಹೋದ ವಿಚಾರಕ್ಕು

10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ಸರ್ಕಾರ ತೀರ್ಮಾನ, ಆಮದು ನಿಲ್ಲಿಸುವಂತೆ ಕೇಂದ್ರಕ್ಕೆ ಒತ್ತಾಯ

ಮೆಕ್ಕೆ ಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ. ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತ ಸೇರಿ 3 ದೇಶಗಳಲ್ಲಿ ಭೂಕಂಪನ: ಬಾಂಗ್ಲಾದಲ್ಲಿ 6 ಸಾವು

ನವದೆಹಲಿ: ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಭಾರತದ ಕೋಲ್ಕತಾದಲ್ಲಿ ಶುಕ್ರವಾರ ಭೂಕಂಪನ ಸಂಭವಿಸಿದ್ದು, ಬಾಂಗ್ಲಾದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾದ ನರ್ಸಿಂಗ್ ಗುಡಿಯಿಂದ 14 ಕಿ.ಮೀ. ದೂರದಲ್ಲಿ ಬೆಳಿಗ್ಗೆ 10.08ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದ್ದು,

ಸಿಎಂ ಸ್ಥಾನ ಹಂಚಿಕೆ ಒಪ್ಪಂದ ನಡೆದಿದೆಯೇ ಇಲ್ಲವೇ ಜನರಿಗೆ ಸರಿಯಾಗಿ ತಿಳಿಸಿ: ಆರ್‌ ಅಶೋಕ

ಕ್ರಾಂತಿ ಇಲ್ಲ ಎಂದು ಹೇಳಿದ್ದರೂ ಎಲ್ಲರೂ ಹೈಕಮಾಂಡ್‌ಗೆ ಬಳಿಗೆ ಹೋಗಿದ್ದಾರೆ. ಸಿಎಂ ಸ್ಥಾನಕ್ಕೆ ಒಪ್ಪಂದ ನಡೆದಿದೆಯೇ ಇಲ್ಲವೇ ಎಂಬುದನ್ನು ಜನರಿಗೆ ಸರಿಯಾಗಿ ತಿಳಿಸಬೇಕು. ಕಾಂಗ್ರೆಸ್‌ ಸರ್ಕಾರ ಹೋಳಾಗಿ ಸಿಎಂ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ. ಡಿಕೆಶಿವಕುಮಾರ್‌ ಸಿಎಂ ಕುರ್ಚಿಗಾಗಿ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ 

ವೈದ್ಯನ ಮನೆಯಲ್ಲಿ ಸ್ಫೋಟಕ ತಯಾರಿಸಲು ಬಳಸುತ್ತಿದ್ದ ಗಿರಣಿ ಯಂತ್ರ ಪತ್ತೆ!

ನವದೆಹಲಿ: ಬಂಧಿತ ವೈದ್ಯ ಉಗ್ರ ಬಾಂಬ್ ಹಾಗೂ ಸ್ಫೋಟಕಗಳನ್ನು ತಯಾರಿಸಲು ಬಳಸುತ್ತಿದ್ದ ಹಿಟ್ಟಿನ ಗಿರಣಿ ಯಂತ್ರವನ್ನು ಪತ್ತೆ ಹಚ್ಚಲಾಗಿದೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ವೈದ್ಯ ಮುಝಮ್ಮಿಲ್ ಶಕೀಲ್ ಗನೈ ಸ್ಫೋಟಕಗಳಿಗೆ ಬೇಕಾದ

ಶಿವಮೊಗ್ಗ ಜೈಲು ಕೈದಿಗೆ ಬಾಳೆಗೊನೆಯಲ್ಲಿ ಗಾಂಜಾ, ಸಿಗರೇಟ್‌ ಸಪ್ಲೈ

ಶಿವಮೊಗ್ಗದ ಸೋಗಾನೆಯಲ್ಲಿರುವ ಜೈಲಿಗೆ ಬಾಳೆಗೊನೆಯಲ್ಲಿ ಗಾಂಜಾ ಮತ್ತು ಸಿಗರೇಟ್‌ ಅನ್ನು ಕೈದಿಗಳಿಗೆ ಸರಬರಾಜು ಮಾಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದ್ದು, ಜೈಲು ಸಿಬ್ಬಂದಿಯೇ ಬೆಚ್ಚಿ ಬಿದ್ದಿದಾರೆ. ಆಟೋ ಚಾಲಕನೊಬ್ಬ ಸೋಗಾನೆ ಜೈಲಿನ ಮುಖ್ಯ ಗೇಟ್ ಬಳಿ ಬಂದು ಜೈಲು ಕ್ಯಾಂಟೀನ್‌ಗೆ ಬೇಕಾದ ಬಾಳೆಗೊನೆ