Menu

ಚಾಮರಾಜನಗರ ಅರಣ್ಯ ಸಿಬ್ಬಂದಿ ಹುಲಿ ದಾಳಿಗೆ ಬಲಿ!

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ. ಗಡಿನಾಡು ಚಾಮರಾಜನಗರದಲ್ಲಿ ಫಾರೆಸ್ಟ್ ವಾಚರ್ ಸಣ್ಣ ಹೈದ (56) ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. 56 ವರ್ಷದ ಸಣ್ಣ ಹೈದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ನ ಮರಳಹಳ್ಳದ ಕಳ್ಳಬೇಟೆ ಶಿಬಿರದಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದರು. ದಿನ ನಿತ್ಯ

ಕಿತ್ತೋಗಿರೋ ಕಮೆಂಟ್ ಬಗ್ಗೆ ತಲೆಕೆಡಿಸಿಕೊಳ್ಳಲ್ಲ: ಅಭಿಮಾನಿಗಳ ಕಮೆಂಟ್ ಕುರಿತು ಸುದೀಪ್ ಪ್ರತಿಕ್ರಿಯೆ

ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ಮಕ್ಕಳು. ಅವರ ಬಗ್ಗೆ ಮಾತನಾಡಿದರೆ ನಾವು ಚೀಪ್ ಆಗುತ್ತೇವೆ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಮಾರ್ಕ್ ಚಿತ್ರದ ಯಶಸ್ಸಿನ ಬೆನ್ನಲ್ಲೆ ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುತ್ರಿ ಸಾನ್ವಿ ಬಗ್ಗೆ

24 ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ ಕರೆದೊಯ್ದ ಕೊಪ್ಪಳದ ಶಿಕ್ಷಕ!

ವೈಯಕ್ತಿಕ ಖರ್ಚಿನಿಂದ ಸರ್ಕಾರಿ ಶಾಲೆಯ 24 ವಿದ್ಯಾರ್ಥಿಗಳು ಸೇರಿದಂತೆ 40 ಮಂದಿಗೆ ಮುಖ್ಯೋಪಾಧ್ಯಾಯ 2 ದಿನಗಳ ವಿಮಾನ ಪ್ರವಾಸ ಆಯೋಜಿಸಿ ಮಾದರಿಯಾದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಬಹದ್ದೂರು ಬಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ

ಜನವರಿ 5 ರಿಂದ ದೇಶಾದ್ಯಂತ ಮನರೇಗಾ ಬಚಾವೋ ಆಂದೋಲನ: ಸಿಎಂ ಸಿದ್ದರಾಮಯ್ಯ

ನವದೆಹಲಿ: ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು

ಜ. 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ

ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ-ರಾಮ್  ಜಿ ಎಂದು ಬದಲಾಯಿಸಲಾಗಿದ್ದು,  ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ

ಹಾವೇರಿ ಆಸ್ಪತ್ರೆಯಲ್ಲಿ ಸಿಸೇರಿಯನ್‌ ವೇಳೆ ಮಗುವಿನ ತಲೆಗೆ ಬ್ಲೇಡ್‌ ತಾಗಿ ಗಾಯ

ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆಗೆ ಸಿಸೇರಿಯನ್‌ ಮಾಡುವಾಗ ಮಗುವಿನ ತಲೆಗೆ ಬ್ಲೇಡ್‌ ತಾಗಿ ರಕ್ತಸ್ರಾವವಾಗಿದೆ. ರಾಣೇಬೆನ್ನೂರಿನ ಮಹಮ್ಮದ್ ಮುಜಾಹೀದ್ ಪತ್ನಿ ಬೀಬಿಅಪ್ಸ್ ಮೊದಲ ಹೆರಿಗೆಗಾಗಿ ಹಾವೇರಿಯ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿದ ವೈದ್ಯರು

ಉದ್ಯಮಕ್ಕೆಂದು ಪಡೆದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್‌ಗೆ ಮಾರಿದ ಇನ್ಫೋಸಿಸ್‌ ?

ಉದ್ಯಮಕ್ಕಾಗಿ ಕೆಐಎಡಿಬಿಯಿಂದ ಭೂಮಿ ಪಡೆದು ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಭೂಮಿ ಮಾರಿದ ಆರೋಪ ಹೊಂದಿರುವ ಇನ್ಫೋಸಿಸ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆನೇಕಲ್‌ ಕೆಐಎಡಿಬಿಯಿಂದ ಹಲವು ವರ್ಷಗಳ ಹಿಂದೆ ಇನ್ಫೋಸಿಸ್‌ಗೆ 53.5 ಎಕರೆ ಭೂಮಿ ಮಂಜೂರು ಮಾಡಿದ್ದು,

ಬೆಂಗಳೂರಿನಲ್ಲಿ 2 ಕಿ.ಮೀ. ಬೆನ್ನಟ್ಟಿ ಮಹಿಳೆಗೆ ಬೈಕ್ ಸವಾರರ ಕಿರುಕುಳ!

ಬೆಂಗಳೂರಿನಲ್ಲಿ ತಡರಾತ್ರಿ ಸ್ಕೂಟಿಯಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಸುಮಾರು 2 ಕಿ.ಮೀ. ದೂರದವರೆಗೆ ಹಿಂಬಾಲಿಸಿಕೊಂಡು ಬೈಕ್ ನಲ್ಲಿ ಮೂವರು ಪುಂಡರು ಕಿರುಕುಳ ನೀಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಕೂಟಿಯಲ್ಲಿ ಹೆಲ್ಮೆಟ್ ಧರಿಸಿ ಹೋಗುತ್ತಿದ್ದ ಯುವತಿಗೆ ಮತ್ತೊಂದು ಸ್ಕೂಟಿಯಲ್ಲಿ ಬಂದ

ದೆವ್ವದ ಹೆಸರಲ್ಲಿ ಹೊಡೆದು ಮಗನ ಎದುರೇ ಕಲಬುರಗಿ ಮಹಿಳೆಯ ಹತ್ಯೆಗೈದ ಪತಿ ಮನೆಯವರು

ದೆವ್ವ ಹಿಡಿದಿದೆ ಎಂದು ಹೇಳಿಕೊಂಡು ಕಲಬುರಗಿಯ ಮಹಿಳೆಗೆ ಆಕೆಯ ಗಂಡನ ಮನೆಯವರು ಮಗನ ಎದುರಲ್ಲೇ ಬೇವಿನ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಕೊಲೆಯಾದ ಮಹಿಳೆ ಕಲಬುರಗಿ ಆಳಂದ

ನರ್ಸ್ ಬಟ್ಟೆ ಬದಲಿಸುವ ವೀಡಿಯೊ ರೆಕಾರ್ಡ್‌: ಆಸ್ಪತ್ರೆ ಟೆಕ್ನಿಷಿಯನ್ ಅರೆಸ್ಟ್‌

ಬೆಂಗಳೂರಿನ ನಾಗರಭಾವಿ 2 ನೇ ಹಂತದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಬಟ್ಟೆ ಬದಲಾಯಿಸುತ್ತಿರುವ ವೀಡಿಯೊ ರೆಕಾರ್ಡ್‌ ಮಾಡಿದ್ದ ಟೆಕ್ನಿಷಿಯನ್ ಒಬ್ಬನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯ ಡ್ರೆಸ್ಸಿಂಗ್ ಕೋಣೆಯಲ್ಲಿ ಮೊಬೈಲ್ ಫೋನ್ ಇಟ್ಟಿದ್ದ ಆರೋಪಿ ಸುವೇಂದು ಮೋಹತ (23) ಪಶ್ಚಿಮ