Featured
ಬೆಂಗಳೂರಿನಲ್ಲಿ 7 ಕೋಟಿ ರೂ. ದರೋಡೆ: ತಿರುಪತಿಯಲ್ಲಿ ಆರೋಪಿಗಳ ಬಂಧನ
ಬೆಂಗಳೂರಿನಲ್ಲಿ ಬುಧವಾರ ಎಟಿಎಂಗೆ ಹಣ ಹಾಕುವ ಕಾರು ತಡೆದು 7 ಕೋಟಿ ರೂ. ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ತಿರುಪತಿಯಲ್ಲಿ ಬಂಧಿಸಿದ್ದಾರೆ. ಹೇಮಂತ್, ಸುನೀಲ್ ಬಂಧಿತ ಆರೋಪಿಗಳಾಗಿದ್ದು, ದರೋಡೆಗೆ ಬಳಸಿದ್ದಾರೆ ಎನ್ನಲಾದ ಕಾರನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಯನಗರದ ಅಶೋಕ ಪಿಲ್ಲರ್ ಬಳಿ ಎಟಿಎಂ ವಾಹನ ಅಡ್ಡಗಟ್ಟಿ ನಾವು ಆರ್‌ಬಿಐನವರು ಎಂದು ಹೇಳಿಕೊಂಡು ನೀವು ನಿಯಮ ಉಲ್ಲಂಘಿಸಿದ್ದೀರಿ. ಠಾಣೆಗೆ ಬನ್ನಿ ಎಂದು ಹೇಳಿ ಆರೋಪಿಗಳು ಎಟಿಎಂ ವಾಹನ ಹೈಜಾಕ್
ಮಸೂದೆ ಅಂಗೀಕಾರಕ್ಕೆ ರಾಷ್ಟ್ರಪತಿ, ರಾಜ್ಯಪಾಲರಿಗೆ ಕಾಲಮಿತಿ ಇಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಮಸೂದೆಗಳನ್ನು ಅಂಗೀಕಾರ ನೀಡಲು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನೇತೃತ್ವದ ಸಾಂವಿಧಾನಿಕ ಪೀಠ ಗುರುವಾರ ನಿಗದಿತ ಕಾಲಮಿತಿಯೊಳಗೆ ಮಸೂದೆಗಳ ಕುರಿತು ತೀರ್ಮಾನ ಕೈಗೊಳ್ಳುವಂತೆ ರಾಷ್ಟ್ರಪತಿ
ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಮಿತಿ ಹೆಚ್ಚಳಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ
ಬೆಳ್ತಂಗಡಿಯಲ್ಲಿ ಸ್ಕೂಟಿಗೆ ಕಾರು ಡಿಕ್ಕಿ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು
ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿ ಕಾರು ಹಾಗೂ ಸ್ಕೂಟಿ ಮಧ್ಯೆ ನಡೆದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಅಂತಿಮ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ 21 ವರ್ಷದ ಅನನ್ಯಾ ಮೃತಪಟ್ಟ ವಿದ್ಯಾರ್ಥಿನಿ. ಈಕೆ ಕಡಬದ ಸುನೀಲ್ ಎಂಬವರ ಪುತ್ರಿ. ಸ್ಕೂಟಿಯಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿ
ಬಳ್ಳಾರಿಯಲ್ಲಿ ಜೀನ್ಸ್‌ಪಾರ್ಕ್ ಎಲ್ಲಿ: ರಾಹುಲ್ ಗಾಂಧಿಗೆ ಆರ್ ಅಶೋಕ ಪ್ರಶ್ನೆ
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ “ಜೀನ್ಸ್ ಪಾರ್ಕ್” ಮಾಡುತ್ತೇವೆ, ಬಳ್ಳಾರಿಯನ್ನು “ಜೀನ್ಸ್ ರಾಜಧಾನಿ” ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡಿದ್ದ @INCKarnataka ಪಕ್ಷ ಈಗ ಸರಿಯಾದ ಮೂಲಸೌಕರ್ಯವಿಲ್ಲದೆ 36 ಜೀನ್ಸ್ ತಯಾರಿಕಾ ಘಟಕಗಳು ಮುಚ್ಚುವ ಪರಿಸ್ಥಿತಿ ತಂದಿಟ್ಟಿದೆ. ಇದರಿಂದ 2 ಲಕ್ಷಕ್ಕೂ ಹೆಚ್ಚು
ಗಣಿ ಅಧಿಕಾರಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಾರಿಗೆ ಸಿಲುಕಿ ಟಿಪ್ಪರ್ ಚಾಲಕ ಸಾವು
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್‌ನ ಕೃಷ್ಣ ಕನ್ವೆನ್ಷನ್ ಸೆಂಟರ್ ಬಳಿ ಗಣಿ ಅಧಿಕಾರಿಗೆ ಹೆದರಿ ಓಡಿ ಹೋಗುವಾಗ ಕಾರಿಗೆ ಅಡ್ಡ ಸಿಕ್ಕಿ ಟಿಪ್ಪರ್ ಚಾಲಕ ಮೃತಪಟ್ಟಿರುವ ಘಟನೆಯೊಂದು ನಡೆದಿದೆ. ರಾಯಚೂರು ಲಿಂಗಸೂರಿನ ರಮೇಶ್ (35) ಮೃತಪಟ್ಟಿರುವ ಚಾಲಕ. ಟಿಪ್ಪರ್ ಲಾರಿ ಚೇಸ್
ಬೇಲೂರಿನ ಮನೆಯೊಂದರಲ್ಲಿ ಮಹಿಳೆಯ ನಗ್ನ ಶವ ಪತ್ತೆ
ಬೇಲೂರು ಪಟ್ಟಣದ ಗಾಣಿಗರ ಬೀದಿಯ ಮನೆಯೊಂದರಲ್ಲಿ ಮಹಿಳೆಯ ಶವ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನ (34) ಎಂದು ಗುರುತಿಸಲಾಗಿದೆ. ಈ ಮಹಿಳೆ ಪತಿಯಿಂದ ದೂರಾಗಿ ಎಂಟು ದಿನಗಳ ಹಿಂದೆ ಬೇಲೂರಿನಲ್ಲಿ ಬಾಡಿಗೆ ಮನೆಗೆ ಬಂದು
ಬಂಟ್ವಾಳ: ಮಾರುವೇಷದಲ್ಲಿ ಬಂದು ಗಂಡನ ಕೊಲೆಗೆ ಯತ್ನಿಸಿದ ಪತ್ನಿ
ಬಂಟ್ವಾಳದ ಬಿಸಿ ರೋಡ್‌ನಲ್ಲಿರುವ ಟೆಕ್ಸ್ ಟೈಲ್ ಅಂಗಡಿಗೆ ಬುರ್ಖಾ ಧರಿಸಿಕೊಂಡು ಬಂದ ಮಹಿಳೆ ಗಂಡನಿಗೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಕೃಷ್ಣ ಕುಮಾರ್ ಸೋಮಯಾಜಿ ಅವರು ತಮ್ಮ ಟೆಕ್ಸ್ ಟೈಲ್ ಅಂಗಡಿಯ ಕ್ಯಾಶ್ ಕೌಂಟರ್‌ನಲ್ಲಿ
ದೇವರು, ಧರ್ಮದ ಹೆಸರಲ್ಲಿ ಸಾಯ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ: ಸಿಎಂ ಸಿದ್ದರಾಮಯ್ಯ ಕಳವಳ
ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ
ಕೆಲಸ ಮಾಡಲು ಯೋಗ್ಯತೆ ಇಲ್ಲದವರಿಂದ ಪ್ರತಿಭಟನೆ: ಜೆಡಿಎಸ್ ವಿರುದ್ಧ ಡಿಸಿಎಂ ವಾಗ್ದಾಳಿ
“ಜೆಡಿಎಸ್‌ನವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು ಆಗಿಲ್ಲ. ಈಗ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿಕೆಶಿವಕುಮಾರ್ ಹರಿಹಾಯ್ದರು.




