Saturday, October 03, 2026
Menu

ರಾಮಲಿಂಗಾ ರೆಡ್ಡಿ ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ: ಸಿಎಂ

ರಾಮಲಿಂಗಾ ರೆಡ್ಡಿ ಅವರು ಗ್ರಾಮೀಣ ಭಾಗದಿಂದ ಬಂದವರಲ್ಲ. ಅವರಿಗೆ ಜಲಸಂಪನ್ಮೂಲ ಸಚಿವಾಲಯ ಸಿಕ್ಕಿದ್ದು, ಅವರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ರಾಮಲಿಂಗಾ ರೆಡ್ಡಿ ಅವರು ರಾಜಿನಾಮೆ ನೀಡಿರುವ ಬಗ್ಗೆ ಕೇಳಿದಾಗ ಹೀಗೆ ಪ್ರತಿಕ್ರಿಯಿಸಿದ್ದಾರೆ. ರಾಮಲಿಂಗಾ ರೆಡ್ಡಿ ಪ್ರಮುಖ ನಾಯಕರು ಹಾಗೂ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ನಾನು ಮಾತನಾಡುತ್ತೇನೆ ಎಂದು ತಿಳಿಸಿದರು.  ಕೆಲವು ಕಾರ್ಯಕರ್ತರು

5% ಬಡ್ಡಿಯ ಆಮಿಷ, ಕೋಟ್ಯಂತರ ರೂ.ವಂಚನೆ: ಆದಿತ್ಯರಾಜ್‌ ಕ್ಯಾಪಿಟಲ್ ಮೇಲೆ ಪೊಲೀಸ್‌ ದಾಳಿ

ಹೆಚ್ಚಿನ ಬಡ್ಡಿಯ ಆಮಿಷ ತೋರಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹಿಸಿ ವಂಚಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ,  ಬೆಳಗಾವಿಯ ಭಾಗ್ಯನಗರದಲ್ಲಿರುವ ‘ಆದಿತ್ಯರಾಜ್‌ ಕ್ಯಾಪಿಟಲ್ ಸಂಸ್ಥೆಯ ಕಚೇರಿಯ ಮೇಲೆ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳ ಜಂಟಿ ತಂಡ  ದಾಳಿ ನಡೆಸಿದೆ. ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ

ಖಾತೆಗಾಗಿ ಕ್ಯಾತೆ: ನೆಕ್ಸ್ಟ್‌ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಷ್ಟವೆಂದು ಸಚಿವ ಮುನಿಯಪ್ಪ ಬೆದರಿಕೆ

ಸಿಎಂ ಡಿಕೆ ಶಿವಕುಮಾರ್‌ ಸಂಪುಟದಲ್ಲಿ ಆಹಾರ ಖಾತೆ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಕೆಹೆಚ್‌ ಮುನಿಯಪ್ಪ ಆ ಖಾತೆ ಬೇಡವೆಂದು ಕ್ಯಾತೆ ತೆಗೆದಿದ್ದು, ನೀರಾವರಿ, ಕೃಷಿ, ಸಮಾಜ ಕಲ್ಯಾಣದಂತ ದೊಡ್ಡ ಖಾತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು,

ಉಗ್ರನೊಂದಿಗೆ ಸಂಪರ್ಕ ಶಂಕೆ: ತುಮಕೂರಿನಲ್ಲಿ ಯುವಕ ಅರೆಸ್ಟ್‌

ವಿದೇಶಿ ಭಯೋತ್ಪಾದಕನ ಜೊತೆ ನಿರಂತರ ಸಂಪರ್ಕ ಹಾಗೂ ದೇಶದ ಭದ್ರತೆಗೆ ಧಕ್ಕೆ ತರುವಂಥ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಂಕೆಯಿಂದ ತುಮಕೂರಿನ ಯುವಕನೊಬ್ಬನನ್ನು ಕ್ಯಾತಸಂದ್ರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳು ನೀಡಿದ ನಿಖರ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ತುಮಕೂರು ನಗರ ಪೊಲೀಸರು

ಜಲಸಂಪನ್ಮೂಲ ಬೇಡ, ಬೆಂಗಳೂರು ಅಭಿವೃದ್ಧಿ ಖಾತೆಯೇ ಬೇಕೆಂದು ರಾಮಲಿಂಗಾರೆಡ್ಡಿ  ರಾಜೀನಾಮೆ

ಬೆಂಗಳೂರು ಅಭಿವೃದ್ಧಿ ಖಾತೆಯೇ ಬೇಕು, ಜಲಸಂಪನ್ಮೂಲ ಇಲಾಖೆ ಬೇಡ ಎಂದು ಅಸಮಾಧಾನಗೊಂಡು ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ದ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, ಈಗಿನ ಮುಖ್ಯಮಂತ್ರಿಗಳು ಹಿಂದೆ ಅವರಾಗಿಯೇ ಬೆಂಗಳೂರು ನಗರಾಭಿವೃದ್ಧಿ

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಿಂದ ಐವರು ಅಭ್ಯರ್ಥಿಗಳು: ಸಿಎಂ ಡಿಕೆ ಶಿವಕುಮಾರ್

ವಿಧಾನ ಪರಿಷತ್ ಅಭ್ಯರ್ಥಿಗಳು ಕೂಡ ನಾಮಪತ್ರ ಸಲ್ಲಿಸಲಿದ್ದು, ನಾವು ಐವರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದು, ಈಗಾಗಲೇ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಐದನೇ ಅಭ್ಯರ್ಥಿಯನ್ನು ಇಂದು  ಪ್ರಕಟಿಸುವುದಾಗಿ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಗಳಾಗಿ ಮೊದಲ

ಸಿರಗುಪ್ಪದಲ್ಲಿ ಬೈಕ್‌ ರಸ್ತೆ ಗುಂಡಿಗೆ ಬಿದ್ದು ನರ್ಸ್‌ ಬಲಿ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಚಾಣಕನೂರು ಕ್ರಾಸ್ ಬಳಿ ಅವೈಜ್ಞಾನಿಕ ರಸ್ತೆ ಕಾಮಗಾರಿಗೆ ನರ್ಸ್‌ ಬಲಿಯಾಗಿದ್ದು, ಆಕೆಯ ಪತಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳುತ್ತಿದ್ದ ದಂಪತಿ ಬೈಕ್ ಸಮೇತ ರಸ್ತೆ ಗುಂಡಿಗೆ ಬಿದ್ದಿದ್ದು, ಪತ್ನಿ

ನೂತನ ಕೆಪಿಸಿಸಿ ಸಾರಥಿಗೆ ನಾನಾ ಸವಾಲು

ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಮುಂದಿನ ದಿನಗಳ ಕಾಂಗ್ರೆಸ್ ಆಡಳಿತವನ್ನು ಜನತೆಯ ಮುಂದೆ ಪರಿಣಾಮಕಾರಿ ತೆಗೆದುಕೊಂಡು ಹೋಗುವ ಗುರುತರ ಹೊಣೆಗಾರಿಕೆ ಮತ್ತು ವಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕೆಲಸವೂ ಈಗ ಹರಿಪ್ರಸಾದ್ ಅವರ ಹೆಗಲೇರಿದೆ. ಕೆಪಿಸಿಸಿ ಸಾರಥ್ಯವೀಗ ಕಾಂಗ್ರೆಸ್ ಪಾರ್ಟಿಯ ಹಿರಿಯ ನಾಯಕ

ಚಿಕ್ಕನಾಯಕನಹಳ್ಳಿಯಲ್ಲಿ ಕಾರುಗಳು ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

ಎರಡು ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟಟ್ಟಿರುವ ದಾರುಣ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗುತ್ತಿದೆ. ಈ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ

ಮಳೆಗೆ ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ವಿದ್ಯಾರ್ಥಿ ಸಾವು

ಧಾರಾಕಾರ ಮಳೆಗೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಎಂಟು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೀದರ್‌ನ ಹುಲಸೂರು ಪಟ್ಟಣದಲ್ಲಿ ನಡೆದಿದೆ. ಎಂಟು ವರ್ಷದ ಅಲಿ ಮೊಮಿನ್ ಮೃತಪಟ್ಟ ಬಾಲಕ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯ ಕಾರಣ ವಿದ್ಯುತ್‌ ಕಂಬದಿಂದ ಮನೆಗೆ