Menu

ರಂಭಾಪುರಿ ಮಠದ ಭವನಕ್ಕೆ ಐದು ಕೋಟಿ ರೂಪಾಯಿ: ಡಿಕೆ ಶಿವಕುಮಾರ್

“ರಂಭಾಪುರಿ ಶ್ರೀಗಳು ನಿಂತು ಹೋಗಿದ್ದ ಭವನಕ್ಕೆ ನೀವು ಸಹಾಯ ಮಾಡಬೇಕು ಎಂದು ಹೇಳಿದ್ದರು. ನಾನು ಈ ಹಿಂದೆ ಸ್ವಲ್ಪ ಅಡಚಣೆಗಳಿವೆ ಎಂದು ತಡೆಯಲು ಹೇಳಿದ್ದೆ. ಈಗ ಸಮಯ ಒದಗಿ ಬಂದಿದೆ. ಐದು ಕೋಟಿ ರೂಪಾಯಿ ನೀಡಲಾಗುವುದು‌. ನಾನೇ ಖುದ್ದಾಗಿ ಬಂದು ಅದನ್ನು ಉದ್ಘಾಟನೆ ಮಾಡುತ್ತೇನೆ” ಎಂದು  ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಧರ್ಮ,‌ ಪೂಜೆ, ಭಕ್ತಿ ಇವು ಪ್ರದರ್ಶನಕ್ಕೆ ಇರುವಂತಹ ಸಂಗತಿಗಳಲ್ಲ. ಇವು ಮನುಷ್ಯನ ಆತ್ಮವಿಶ್ವಾಸವನ್ನು ಹೆಚ್ಚಿಸುವ ಸಲುವಾಗಿ ಇರುವ

ಇಸ್ರೇಲ್‌ ಇರಾನ್‌ ಸಂಘರ್ಷ: ರದ್ದುಗೊಂಡ ವಿಮಾನಗಳು, ದುಬೈನಲ್ಲಿ ಸಿಕ್ಕಾಕಿಕೊಂಡ ಕನ್ನಡಿಗರು

ಇರಾನ್-ಇಸ್ರೇಲ್ ಸಂಘರ್ಷ ತೀವ್ರಗೊಂಡು ಅಮೆರಿಕದ ದಾಳಿಗೆ ಪ್ರತಿದಾಳಿಯಾಗಿ ಇರಾನ್‌ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿರುವ ಅಮೆರಿಕ ಸೇನಾ ನೆಲೆಗಳನ್ನು ಗುರಿಯಾಗಿಸಿ ಕಾರ್ಯಾಚರಣೆ ನಡೆಸುತ್ತಿದೆ. ಹೀಗಾಗಿ ಕೊಲ್ಲಿ ರಾಷ್ಟ್ರಗಳಲ್ಲೂ ಆತಂಕದ ಸ್ಥಿತಿ ನಿರ್ಮಾಣಗೊಂಡಿದ್ದು, ಲಕ್ಷಾಂತರ ಭಾರತೀಯರಿಗೆ ಸಂಕಷ್ಟ ಎದುರಾಗಿದೆ. ರಾಜ್ಯದಿಂದ ಬಹಳಷ್ಟು ಪ್ರವಾಸಿಗರು ದುಬೈನಲ್ಲಿದ್ದು, ಅಲ್ಲಿಂದ

ಖಮೇನಿ ಮಾತ್ರವಲ್ಲ, ಇರಾನ್‌ನ 48 ನಾಯಕರನ್ನು ಹೊಡೆದುರುಳಿಸಿದ್ದೇವೆ ಎಂದ ಟ್ರಂಪ್‌

ಇಸ್ರೇಲ್‌ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ ಮೇಲೆ ಭೀಕರ ದಾಳಿಗಳನ್ನು ನಡೆಸಿದ್ದು, ಅಲ್ಲಿನ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಮಾತ್ರವಲ್ಲದೆ ಅಲ್ಲಿನ 48 ನಾಯಕರನ್ನು ಹೊಡೆದುರುಳಿಸಿರುವುದಾಗಿ ಡೊನಾಲ್ಡ್ ಟ್ರಂಪ್‌ ಮಾಹಿತಿ ನೀಡಿದ್ದಾರೆ. ಈ ದಾಳಿಯಲ್ಲಿ ನಾವು ಪಡೆಯುತ್ತಿರುವ ಯಶಸ್ಸು ನಂಬಲು

ಇರಾನ್‌-ಇಸ್ರೇಲ್‌ ಸಂಘರ್ಷ ತೀವ್ರ: ಇರಾನ್‌ ಶಾಲೆ ಮೇಲಿನ ದಾಳಿಗೆ ಐವರು ಬಲಿ

ಇರಾನ್ ಹಾಗೂ ಇಸ್ರೇಲ್ ಕದನ ತೀವ್ರ ಸ್ವರೂಪ ಪಡೆದುಕೊಂಡಿದೆ. ಅಮೆರಿಕ ದಾಳಿ ಬೆನ್ನಲ್ಲೇ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ್ದರಿಂದ ಇರಾನ್‌ನ ಪ್ರಾಥಮಿಕ ಶಾಲೆಯೊಂದು ಧ್ವಂಸಗೊಂಡು ಐವರು ಮೃತಪಟ್ಟಿದ್ದಾರೆ. ಅಮೆರಿಕ ಆರಂಭಿಸಿದ ಯುದ್ಧದಲ್ಲಿ ಇಸ್ರೇಲ್ ಕೂಡ ಕೈ ಜೋಡಿಸಿದ್ದು, ಪರಿಸ್ಥಿತಿ ವಿಷಮಿಸುತ್ತಿದೆ. ಇರಾನ್

ಎಫ್‌ಡಿ ಮೇಲೆ ಸಾಲ ಕೊಡಿಸೋದಾಗಿ ಗ್ರಾಹಕರಿಗೆ ಮೂರು ಕೋಟಿ ವಂಚಿಸಿದ ಮ್ಯಾನೇಜರ್‌

ಹಾಸನದ ಸೂರ್ಯೋದಯ ಸ್ಮಾಲ್ ಫೈನಾನ್ಸ್​​​ ಬ್ಯಾಂಕ್ ಮ್ಯಾನೇಜರ್‌ ನಿಗದಿತ ಠೇವಣಿ ಮೇಲೆ ಸಾಲ‌ ಕೊಡಿಸುವುದಾಗಿ ನಂಬಿಸಿ 50ಕ್ಕೂ ಹೆಚ್ಚು ಗ್ರಾಹಕರಿಂದ ಮೂರು ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ ವಂಚಿಸಿರುವ ಆರೋಪ ಕೇಳಿ ಬಂದಿದೆ. ಬ್ಯಾಂಕ್​ ಮ್ಯಾನೇಜರ್ ಹೆಚ್​​.ಎಸ್​.ಪೂಜಾ ವಿರುದ್ಧ ಜಿಲ್ಲಾ

ಅಂಗನವಾಡಿ ಮಕ್ಕಳಿಗೆ ತರಕಾರಿಗಾಗಿ 50 ಪೈಸೆ: ಆರ್‌ ಅಶೋಕ ಟೀಕೆ

ಅಂಗನವಾಡಿ ಕಾರ್ಯಕರ್ತರು, ಗುತ್ತಿಗೆದಾರರು, ಸಾರಿಗೆ ನೌಕರರು ಪ್ರತಿಭಟನೆ ಮಾಡುತ್ತಿದ್ದಾರೆ. ಬೊಕ್ಕಸ ಖಾಲಿಯಾಗಿರುವುದರಿಂದ ಎಲ್ಲರೂ ಪ್ರತಿಭಟನೆ ಮಾಡುತ್ತಿದ್ದಾರೆ. ಅಂಗನವಾಡಿ ಮಕ್ಕಳಿಗೆ ತರಕಾರಿಗೆ 50 ಪೈಸೆ ನೀಡುತ್ತಿದ್ದಾರೆ. ಅಂದರೆ ಹತ್ತು ಮಕ್ಕಳಿಗೆ 5 ರೂ. ನೀಡಲಾಗುತ್ತದೆ. ಅರ್ಧ ಕೆಜಿ ತರಕಾರಿಯನ್ನು ಹತ್ತು ಮಕ್ಕಳಿಗೆ ನೀಡಬೇಕಾಗುತ್ತದೆ.

ಮಗು, ಬಾಣಂತಿ ಸೇರಿ ಕುಟುಂಬವನ್ನು ಮನೆಯಿಂದ ಹೊರ ಹಾಕಿದ ಫೈನಾನ್ಸ್‌ ಕಂಪನಿ

ಬೆಳಗಾವಿ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಚಿಕ್ಕೋಡಿಯ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಕಂಪನಿ ಕಿರುಕುಳದಿಂದ ಕುಟುಂಬ ಬೀದಿಗೆ ಬಿದ್ದಿದೆ. ಕಂಪನಿಯು ಮನೆ ಸೀಜ್ ಮಾಡಿದ್ದು, ಮೂರು ತಿಂಗಳ ಮಗು ಸೇರಿ ಐವರು ಕುಟುಂಬಸ್ಥರು ಮನೆ ಹೊರಗೆ ಊಟ, ನಿದ್ರೆಯಿಲ್ಲದೆ ರಾತ್ರಿ ಕಳೆಯುವಂತಾಗಿದೆ.

ಗದಗದಲ್ಲಿ ಈಜಲು ಹೋದ ವಿದ್ಯಾರ್ಥಿಗಳಿಬ್ಬರು ನೀರುಪಾಲು

ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಲು ತೆರಳಿದ್ದು, ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ.  ಪರಶುರಾಮ ವಡ್ಡರ ಮತ್ತು ಬಸವರಾಜ ಬಡಿಗೇರ ಮೃತಪಟ್ಟ ವಿದ್ಯಾರ್ಥಿಗಳು. ಒಬ್ಬ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮುಳಗುಂದ

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ: ಅಕ್ರಮ ಸಂಬಂಧ ಹೊಂದಿರುವ ಪತ್ನಿ ಮೇಲೆ ಶಂಕೆ

ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದ ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ. ಗ್ರಾಮದ ಮುನಿರಾಜು (42) ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ. ಪತ್ನಿಯ ಅಕ್ರಮ ಸಂಬಂಧದಿಂದ ನೊಂದಿದ್ದ

ರಾಜಕಾರಣದಲ್ಲಿ ಶಸ್ತ್ರ, ಅಸ್ತ್ರ ಬೇಕಾಗಿಲ್ಲ, ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗ್ತಾರೆ: ಡಿಕೆ ಸುರೇಶ್‌

“ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ,” ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನೀವು ಶಸ್ತ್ರತ್ಯಾಗ ಮಾಡಿದ್ದೀರಾ ಎಂದು