Featured
ನವೆಂಬರ್ 20ರಂದು ನಿತೀಶ್ ಕುಮಾರ್ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ!
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಜೆಡಿಯು ಮುಖಂಡ ನಿತೀಶ್ ಕುಮಾರ್ ದಾಖಲೆಯ 10ನೇ ಬಾರಿ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ NDA ಭರ್ಜರಿ ಗೆಲುವು ದಾಖಲಿಸಿದೆ. ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದು, ನವೆಂಬರ್ 20 ರಂದು ರಾಜ್ಯ ರಾಜಧಾನಿಯ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ಮತ್ತೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ
ಅರಣ್ಯದಂಚಿನಲ್ಲಿ 20 ಹುಲಿಗಳು: ಅರಣ್ಯ ಇಲಾಖೆಯಿಂದ ಸುಂದರ್ ಬನ್ಸ್ ಮಾಸ್ಟರ್ ಪ್ಲಾನ್
ಮೈಸೂರು: ಗಡಿ ಜಿಲ್ಲೆಯಾದ ಚಾಮರಾಜನಗರ ಮತ್ತು ಮೈಸೂರು ಭಾಗದ ಅರಣ್ಯ ಪ್ರದೇಶಗಳಲ್ಲಿ 20ಕ್ಕೂ ಹೆಚ್ಚು ಹುಲಿಗಳು ಸಂಚರಿಸುತ್ತಿವೆ. ಇದರಲ್ಲಿ 5 ಸೆರೆ ಹಿಡಿಯಲಾಗಿದೆ. ಗಡಿ ಭಾಗದಲ್ಲಿ ಒಂದೆರಡು ಹುಲಿಗಳಲ್ಲ, ಸಂಚರಿಸುತ್ತಿರುವ 20ಕ್ಕೂ ಹೆಚ್ಚು ಹುಲಿಗಳು. ಈ ಹಿನ್ನೆಲೆಯಲ್ಲಿ ಎರಡು ಜಿಲ್ಲೆಗಳ ಹಲವು
ರಾಷ್ಟ್ರೀಯ ರೇಸಿಂಗ್ ಚಾಂಪಿಯನ್‌ಶಿಪ್: ಬೆಂಗಳೂರಿನ ಅನಿಶ್ ಶೆಟ್ಟಿ, ಧ್ರುವ್ ಗೋಸ್ವಾಮಿ ಜಯಭೇರಿ!
ಕೊಯಮತ್ತೂರು, ನವೆಂಬರ್ 15: 28ನೇ FMSCI ಜೆಕೆ ಟೈರ್ ನ್ಯಾಷನಲ್ ರೇಸಿಂಗ್ ಚಾಂಪಿಯನ್‌ಶಿಪ್‌ನ ಮೂರನೇ ಮತ್ತು ಅಂತಿಮ ಸುತ್ತಿನಲ್ಲಿ ಎಂ-ಸ್ಪೋರ್ಟ್‌ನ ಧ್ರುವ್ ಗೋಸ್ವಾಮಿ ಗಮನಾರ್ಹ ಜಯವನ್ನು ದಾಖಲಿಸಿದ್ದಾರೆ. ಭಾರತದ ಅತಿ ದೀರ್ಘಕಾಲದ ಸಿಂಗಲ್-ಸೀಟರ್ ಚಾಂಪಿಯನ್‌ಶಿಪ್‌ನ ಭಾನುವಾರದ ಅಂತಿಮ ಎರಡು ರೇಸ್‌ಗಳನ್ನು ಎದುರುನೋಡುತ್ತಿರುವ
ಸಿಎಂ ಬದಲಾವಣೆ ಇಲ್ಲದಿದ್ದರೆ ದೆಹಲಿಗೆ ಹೋಗಿದ್ದು ಯಾಕೆ: ಕೈ ನಾಯಕರಿಗೆ ಅಶೋಕ್ ಪ್ರಶ್ನೆ
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ನಾನು ಪದೇ ಪದೆ ಹೇಳಿದ್ದೆ. ಆದರೂ ಆ ರೀತಿ ಇಲ್ಲ ಎಂದು ಕಾಂಗ್ರೆಸ್
ಜಾರ್ಖಂಡ್ ಸಿಎಂ ಹೆಸರಲ್ಲಿ ಡಿಕೆ ಶಿವಕುಮಾರ್ ದಂಪತಿಗೆ ಕರೆ ಮಾಡಿ ಕಿರುಕುಳ: ಎಫ್ ಐಆರ್ ದಾಖಲು
ಬೆಂಗಳೂರು: ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೆಸರನ್ನು ದುರುಪಯೋಗಪಡಿಸಿಕೊಂಡು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಪತ್ನಿಗೆ ದುಷ್ಕರ್ಮಿಯೊಬ್ಬ ಕರೆ ಮಾಡಿ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ. ಶನಿವಾರ ತಡರಾತ್ರಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಆಪ್ತ ಕಾರ್ಯದರ್ಶಿ ನೀಡಿದ ದೂರಿನ ಅನ್ವಯ
ಇಂದಿನಿಂದ ಶಬರಿಮಲೆ ಯಾತ್ರೆ ಆರಂಭ: ಮೊದಲ ದಿನವೇ ಭಕ್ತಸಾಗರ
ಶಬರಿಮಲೆ: ಸುಪ್ರಸಿದ್ಧ ಕೇರಳದ ಶಬರಿಮಲೆಯ ಯಾತ್ರೆ ಮಲಯಾಳಂ ತಿಂಗಳ ವೃಚಿಕಂನ ಶುಭ ದಿನವಾದ ವಾರ್ಷಿಕ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆ ಕೂಡ ಪ್ರಾರಂಭವಾಗಿದೆ. ಮೊದಲ ದಿನವೇ ಅಯ್ಯಪ್ಪನ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಸಾಂಪ್ರದಾಯಿಕ ಕಪ್ಪು ಉಡುಪು ಧರಿಸಿ, ‘ಇರುಮುಡಿಕ್ಕೆಟ್ಟು’ವನ್ನು ತಲೆಯ ಮೇಲೆ
ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ
ಬೆಂಗಳೂರಿನ ಆಡುಗೋಡಿ ವ್ಯಾಪ್ತಿಯಲ್ಲಿ ನವೆಂಬರ್ 18 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಫ್ ಗೋಡೌನ್,
ಮೃಗಾಲಯದಲ್ಲಿ 31ಕ್ಕೇರಿದ ಕೃಷ್ಣಮೃಗಗಳ ಸಾವಿನ ಸಂಖ್ಯೆ: ಬನ್ನೇರುಘಟ್ಟ ತಜ್ಞರಿಂದ ಪರಿಶೀಲನೆ
ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದೆ. ಸೋಮವಾರ ಬೆಳಗಿನ ಜಾವ ಮತ್ತೊಂದು ಮೃತಪಟ್ಟಿದ್ದು, ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿರು ಮೃಗಾಲಯದಲ್ಲಿ ಕಳೆದ ಒಂದು ವಾರದಿಂದ
ಕಾಂಗೋದಲ್ಲಿ ಗಣಿ ಸೇತುವೆ ಕುಸಿದು 32 ಮಂದಿ ಸಾವು
ಕಾಂಗೋ ಗಣರಾಜ್ಯದ ಲುವಾಲಾಬಾ ಪ್ರಾಂತ್ಯದ ತಾಮ್ರ ಮತ್ತು ಕೋಬಾಲ್ಟ್ ಗಣಿ ಸೇತುವೆ ಕುಸಿದು ಕನಿಷ್ಠ 32 ಮಂದಿ ಮೃತಪಟ್ಟಿದ್ದಾರೆ. ದುರಂತದಲ್ಲಿ ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಬಿರುಸಾಗಿ ಮುಂದುವರಿದಿದೆ. ಈ ದುರಂತದ ಭೀಕರ ದೃಶ್ಯಗಳ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶಿವಮೊಗ್ಗದಲ್ಲಿ ಹಿಂದೂನಾ, ಮುಸ್ಲಿಮನಾ ಎಂದು ಪ್ರಶ್ನಿಸಿ ಹಲ್ಲೆ
ಶಿವಮೊಗ್ಗದ ಮಾರ್ನಮಿ ಬೈಲ್‌ನಲ್ಲಿ ಸ್ಥಳೀಯ ನಿವಾಸಿ ಹರೀಶ್ ಎಂಬವರ ಮೇಲೆ ನೀ ಹಿಂದೂನಾ, ಮುಸ್ಲಿಮನಾ ಎಂದು ಪ್ರಶ್ನಿಸಿ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ರಾತ್ರಿ ಮನೆ ಪಕ್ಕದಲ್ಲೇ ವಾಕ್ ಮಾಡುತ್ತಿದ್ದಾಗ ಬಂದ ದುಷ್ಕರ್ಮಿಗಳು ಅಟ್ಟಾಡಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಿಂದೂ




