Friday, September 19, 2025
Menu

ಬಹುಕೋಟಿ ವಂಚನೆ ಪ್ರಕರಣ: ನಟ ಧ್ರುವ ಸರ್ಜಾಗೆ ಸದ್ಯಕ್ಕೆ ರಿಲೀಫ್‌

ನಿರ್ಮಾಪಕ ರಾಘವೇಂದ್ರ ಹೆಗಡೆ ಮುಂಬೈನಲ್ಲಿ ದಾಖಲಿಸಿದ್ದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ನ್ಯಾಯಾಲಯ ನೀಡಿರುವ ಆದೇಶದಿಂದ ನಟ ಧ್ರುವ ಸರ್ಜಾ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಧ್ರುವ ಸರ್ಜಾ ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಪಡೆದು ಸಿನಿಮಾ ಮಾಡಲು ಡೇಟ್ಸ್ ನೀಡದೆ ವಂಚನೆ ಮಾಡಿದ್ದಾರೆ ಎಂದು ರಾಘವೇಂದ್ರ ಹೆಗಡೆ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಆಗಸ್ಟ್ ನಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದಲ್ಲಿ ಪೊಲೀಸರು ಧ್ರುವ ಸರ್ಜಾ ವಿರುದ್ಧ

ಸ್ಲಂ ಬೋರ್ಡ್‌ನಡಿ 42 ಸಾವಿರ ಮನೆಗಳ ನಿರ್ಮಾಣ, ಮೂಲಸೌಲಭ್ಯಗಳಿಗೆ ಅನುದಾನ

ಸ್ಲಂ ಬೋರ್ಡ್ ಅಡಿ 42ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಸತಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳ ಬಗ್ಗೆ ವಿವರಿಸಿದರು.

ಗ್ರೇಟರ್‌ ಬೆಂಗಳೂರು: 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನದ ಕಟ್ಟಡಗಳಿಗೆ OC ಬೇಕಿಲ್ಲ

ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿಗದಿತ ಮಿತಿಯೊಳಗೆ ನಿರ್ಮಾಣಗೊಂಡಿರುವ ಮಹಡಿಗಳು ಮತ್ತು ಹೊಸದಾಗಿ ನಿರ್ಮಿಸುವ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ)ದಿಂದ ವಿನಾಯಿತಿ ನೀಡುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. 1200

ಜನರನ್ನು ವಿಭಜಿಸಿ ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ:  ಡಿಕೆ ಶಿವಕುಮಾರ್ 

“ಕೋಮು ಭಾವನೆ ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ತರಾಟೆಗೆ ತೆಗೆದುಕೊಂಡಿದ್ದಾರೆ.  ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಅವರು  ಪ್ರತಿಕ್ರಿಯಿಸಿದರು. ಮದ್ದೂರು ಗಣೇಶ ವಿಸರ್ಜನೆ

ಬೆಳೆ ಹಾನಿ ಪರಿಹಾರ ವಿಳಂಬ ತಡೆಗೆ  ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಬದಲಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಶಿವಾನಂದ ಪಾಟೀಲ 

ಬೆಳೆ ಹಾನಿ ಪರಿಹಾರ ವಿತರಣೆಯನ್ನು ಸರಳೀಕರಣಗೊಳಿಸಲು ಎನ್‌ಡಿಆರ್‌ಎಫ್‌ ಮಾರ್ಗಸೂಚಿಗಳಲ್ಲಿ ಬದಲಾವಣೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ  ಶಿವಾನಂದ ಪಾಟೀಲ ರೈತರಿಗೆ ಭರವಸೆ ನೀಡಿದರು. ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿದ

ಕನ್ನಡಕ್ಕೆ ಅವಮಾನ: ವಿಚಾರಣೆಗೆ ಹಾಜರಾಗದ ಸೋನು ನಿಗಮ್‌ ವಿರುದ್ಧ ಪೊಲೀಸರು ಮತ್ತೆ ಕೋರ್ಟ್‌ಗೆ

ಗಾಯಕ ಸೋನು ನಿಗಮ್ ಅವರು ಕನ್ನಡಿಗರ ಮನವಿಯನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದಡಿ ಆವಲಹಳ್ಳಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿಲ್ಲ. ಈ ಕಾರಣಕ್ಕೆ ಈಗ ಈಗ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ

ಬೀದರ್‌ ವಿವಿಯಲ್ಲಿ ಅವ್ಯವಹಾರ: 67 ಕಡೆ ಲೋಕಾಯುಕ್ತ ದಾಳಿ

ಬೀದರ್‌ನ ಪಶು ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ 2017-19ರವರೆಗೆ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ನಡೆಸಿದೆ. ಪಶು ಮತ್ತು ಮೀನುಗಾರಿಕಾ ವಿಶ್ವವಿದ್ಯಾಲಯದ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ

ಕತಾರ್‌ನಲ್ಲಿ ಇಸ್ರೇಲ್‌ ಪಡೆ ವೈಮಾನಕ ದಾಳಿ: ಹಮಾಸ್‌ ನಾಯಕನ ಮಗ ಸೇರಿ ಆರು ಮಂದಿ ಸಾವು

ಕತಾರ್‌ ರಾಜಧಾನಿ ದೋಹಾದಲ್ಲಿ ಇಸ್ರೇಲ್‌ ಪಡೆಯು ಭೀಕರ ವಾಯುದಾಳಿ ನಡೆಸಿದ್ದು, ನಮ್ಮ ನಾಯಕನ ಪುತ್ರ ಸೇರಿ ಕನಿಷ್ಠ 6 ಮಂದಿ ಮೃತಪಟ್ಟಿರುವುದಾಗಿ ಹಮಾಸ್‌ ಬಂಡುಕೋರರ ಗುಂಪು ಅಧಿಕೃತ ಹೇಳಿಕೆ ನೀಡಿದೆ. ಈ ದಾಳಿಯಲ್ಲಿ ಹಮಾಸ್ ನಾಯಕ ಖಲೀಲ್ ಅಲ್-ಹಯ್ಯನ ಪುತ್ರ, ಸಹಾಯಕ

ಗಂಗಾವತಿಯಲ್ಲಿ ಬಾಕಿ ಶುಲ್ಕ ಪಾವತಿಗೆ ವಿದ್ಯಾರ್ಥಿನಿ ತಾಯಿಯ ತಾಳಿ ಪಡೆದ ಕಾಲೇಜು ಚೇರ್ಮನ್‌

ಗಂಗಾವತಿಯ ಬಿಬಿಸಿ ನರ್ಸಿಂಗ್ ಕಾಲೇಜಿನ ಚೇರ್ಮನ್‌ ಡಾ. ಸಿಬಿ ಚಿನಿವಾಲ ವಿದ್ಯಾರ್ಥಿನಿಯ ಶುಲ್ಕ ಪಾವತಿಗಾಗಿ ಆಕೆಯ ತಾಯಿಯ ತಾಳಿಯನ್ನೇ ಒತ್ತೆಯಾಗಿಟ್ಟುಕೊಂಡ ಆರೋಪ ಕೇಳಿ ಬಂದಿದೆ. ಕನಕಗಿರಿ ತಾಲೂಕಿನ ಮುಸ್ಲಾಪೂರ ಗ್ರಾಮದ ಕಾವೇರಿ ವಾಲಿಕಾರ್ ಎಂಬ ವಿದ್ಯಾರ್ಥಿನಿ ಗಂಗಾವತಿಯ ಬಿಬಿಸಿ ನರ್ಸಿಂಗ್ ಕಾಲೇಜಿನಲ್ಲಿ

ರಾಣೇಬೆನ್ನೂರಿನಲ್ಲಿ ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಸಾಯಿಸಿದ ತಾಯಿ

ರಾಣೇಬೆನ್ನೂರು ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವಿನ ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತ ಮಗುವನ್ನು ಪ್ರಿಯಾಂಕಾ (4) ಎಂದು ಗುರುತಿಸಲಾಗಿದೆ. ರಾಣೇಬೆನ್ನೂರು ನಗರದ ಎಕೆಜಿ