Menu

ಇದೇ ವರ್ಷದಿಂದ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ: ಸಿಎಂ ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ  ಮಾರ್ಗದರ್ಶನದಂತೆ  ಇದೇ ವರ್ಷದಿಂದ ವಿದ್ಯಾರ್ಥಿ ಚುನಾವಣೆ ನಡೆಸಲಾಗುವುದು. ವಿದ್ಯಾರ್ಥಿ ನಾಯಕರ ಚುನಾವಣೆಯನ್ನು ಕಾಲೇಜುಗಳಲ್ಲಿ ನಡೆಸಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು.  ಆ ಮೂಲಕ ಪಂಚಾಯಿತಿಗಳಿಂದ ಪಾರ್ಲಿಮೆಂಟ್ ವರೆಗೂ ನಾಯಕರನ್ನು ತಯಾರು ಮಾಡಲಾಗುವುದು. ಇನ್ನು ಮಹಿಳೆಯರಿಗೆ ಮೀಸಲಾತಿ ನೀಡುವುದನ್ನು ತಪ್ಪಿಸಲಾಗುವುದಿಲ್ಲ. ಹೀಗಾಗಿ ವಿದ್ಯಾರ್ಥಿ ಘಟಕ, ಮಹಿಳಾ ಘಟಕ ಹೆಚ್ಚಿನ ಸಂಘಟನೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ಶಿವಕುಮಾರ್ ಕೆಪಿಸಿಸಿ

ಬಿಡದಿ ಯೋಜನೆ ಕುಮಾರಸ್ವಾಮಿ ಆರಂಭಿಸಿ ಯಡಿಯೂರಪ್ಪ ಮುಂದುವರಿಸಿದ್ದರು: ಸಿಎಂ 

ಬಿಡದಿಯಲ್ಲಿ ಕುಮಾರಸ್ವಾಮಿ  ನೋಟಿಫಿಕೇಷನ್ ಮಾಡಿದ್ದರು. ಯಡಿಯೂರಪ್ಪ ಯೋಜನೆ ಮುಂದುವರಿಸಿದ್ದರು. ಅದನ್ನು ನಾವು ಇನ್ನಷ್ಟು ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದೇವೆಯೇ ಹೊರತು ಹೊಸದಾಗಿ ನಾವೇನೂ ಮಾಡುತ್ತಿಲ್ಲ. ಬಿಡದಿ ಕೈಗಾರಿಕಾ ಪ್ರದೇಶಕ್ಕೆ ಭೂಸ್ವಾಧೀನ ಮಾಡಿದವರು ಯಾರು,  ಈಗಿರುವ 9 ಸಾವಿರ ಎಕರೆಯಲ್ಲಿ 1 ಸಾವಿರ ಎಕರೆಯನ್ನು

ಪ್ರಜಾಸೇವೆ ಇಲಾಖೆ ಅಸ್ತಿತ್ವಕ್ಕೆ, ರಾಜ್ಯದ ವಿದ್ಯಾರ್ಥಿಗಳಿಗೆ ದೆಹಲಿಯಲ್ಲಿ ಕರ್ನಾಟಕ ಭವನ: ಸಿಎಂ

ಸಾರ್ವಜನಿಕರ ಕುಂದುಕೊರತೆಗಳು, ಸಾರ್ವಜನಿಕ ಹೋರಾಟಗಳ ಅಹವಾಲುಗಳನ್ನು ಆಲಿಸಲು “ಪ್ರಜಾಸೇವೆ ಇಲಾಖೆ” ಯನ್ನು ಹೊಸದಾಗಿ ಪ್ರಾರಂಭ ಮಾಡಲಾಗುತ್ತಿದೆ. ಪ್ರತ್ಯೇಕ ಸಚಿವರಿಗೆ ಇದರ ಜವಾಬ್ದಾರಿ ವಹಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಶಿವಕುಮಾರ್‌ ಮಾಧ್ಯಮಗೋಷ್ಠಿಯಲ್ಲಿ

ಸಾಯಲು ಹೋಗಿದ್ದ ಮಗನ ಉಳಿಸಲು ಯತ್ನಿಸಿ ತಂದೆಯೂ ಸಾವು

ಜಗಳವಾಡಿ ಸಾಯಲು ಹೋಗಿದ್ದ ಮಗನನನ್ನು ಉಳಿಸಲು ಹೋದ ವ್ಯಕ್ತಿ ಮೇಲೆ ರೈಲು ಹರಿದು ತಂದೆ-ಮಗ ಇಬ್ಬರೂ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ದೇವರಿಯಾದಲ್ಲಿ ನಡೆದಿದೆ. ಗೋರಖ್‌ಪುರ-ಛಾಪ್ರಾ ರೈಲು ವಿಭಾಗದ ಗೌರಿಬಜಾರ್ ಪಶ್ಚಿಮ ರೈಲ್ವೆ ಕ್ರಾಸಿಂಗ್ ಬಳಿ ಈ ದುರಂತ ಸಂಭವಿಸಿದೆ. ಗೌರಿಬಜಾರ್ ಪೊಲೀಸ್

ನೀಟ್‌ ಮರುಪರೀಕ್ಷೆ: ನಾಗ್ಪುರ ನಿವಾಸಿಗೆ ಅಬುಧಾಬಿ ಕೇಂದ್ರ ನಿಯೋಜಿಸಿ ಎಡವಟ್ಟು

ನಾಗ್ಪುರ ನಗರದ ನಿವಾಸಿ, ನೀಟ್ ಅಭ್ಯರ್ಥಿ ಅಬ್ದುಲ್ಲಾ ಮೊಹಮ್ಮದ್ ತಾಲಿಬ್ ಎಂಬಾತನಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನೀಟ್‌-ಯುಜಿ ಮರುಪರೀಕ್ಷೆಯ ಹಾಲ್ ಟಿಕೆಟ್ ನೀಡಿದ್ದು, ಅಬುಧಾಬಿ ಇಂಡಿಯನ್‌ ಸ್ಕೂಲ್‌ ಅನ್ನು ಪರೀಕ್ಷಾಕೇಂದ್ರವಾಗಿ ನಿಯೋಜಿಸಿದೆ. ಜೂನ್ 14 ರಂದು ನೀಡಿರುವ ಪ್ರವೇಶ ಪತ್ರದಲ್ಲಿ ಅಬುಧಾಬಿ

ಲೆಬನಾನ್‌ನಲ್ಲಿ ಮುಂದುವರಿದ ಇಸ್ರೇಲ್‌ ದಾಳಿ: ಐವರು ಬಲಿ

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ಡ್ರೋನ್ ಮತ್ತು ವಾಯು ದಾಳಿ ಮುಂದುವರಿಸಿದ್ದು, ಕನಿಷ್ಠ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ. ಶನಿವಾರ ಬೆಳಗಿನ ಜಾವದವರೆಗೆ ಇಸ್ರೇಲ್‌ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳು ಲೆಬನಾನ್‌ನ ನಬತಿಯೇಹ್ ವಸತಿ ಕಟ್ಟಡಗಳ ಮೇಲೆ

ಗಿಫ್ಟ್‌ ಆಮಿಷವೊಡ್ಡಿ ನಿವೃತ್ತ ಯೋಧನಿಗೆ 2.82 ಲಕ್ಷ ರೂಪಾಯಿ ವಂಚನೆ

ನಿವೃತ್ತ ಯೋಧರೊಬ್ಬರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಕರೆ ಮಾಡಿದ್ದ ದುಷ್ಕರ್ಮಿಗಳು ಉಡುಗೊರೆ ಕಳುಹಿಸುವುದಾಗಿ ನಂಬಿಸಿ 2.82 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದಲ್ಲಿ ನಡೆದಿದೆ. ಜೂನ್ 20ರಂದು ನಿವೃತ್ತ ಯೋಧ ಶಿವಕುಮಾರ್ ಅವರ ಹುಟ್ಟುಹಬ್ಬದಂದು ಬೆಳಗ್ಗೆ ವಂಚಕರು

“ಅಡ್ಡಕಸುಬಿ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತ ಸಂಪೂರ್ಣ ಮುಳುಗಿ ಹೋಗಿದೆ”

ವಿರೋಧ ಪಕ್ಷದ ಶಾಸಕರಿಗೆ ಆಮಿಷ ಒಡ್ಡಿ, ಅಡ್ಡಮತದಾನ ಮಾಡಿಸುವ ರಾಜಕೀಯ ಸರ್ಕಸ್‌ನಲ್ಲಿ ದಿನಪೂರ್ತಿ ಮುಳುಗಿರುವ ಮುಖ್ಯಮಂತ್ರಿ @DKShivakumar ಅವರೇ, ನಿಮ್ಮ ಈ ಅಡ್ಡಕಸುಬಿ ಆಡಳಿತದಿಂದಾಗಿ ರಾಜ್ಯದ ಶಾಲಾ ಮಕ್ಕಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ಶವ ಸಂಸ್ಕಾರ ಶುಲ್ಕ 250 ರೂ. ನಿಗದಿ ಸೇರಿ ಮಾರ್ಗಸೂಚಿ ಪ್ರಕಟ

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಐದು ವಿದ್ಯುತ್‌ ಚಿತಾಗಾರಗಳಲ್ಲಿ ಶವಸಂಸ್ಕಾರ ನಡೆಸುವ ಸಂಬಂಧ ಪಾಲಿಕೆ ಸಾರ್ವಜನಿಕರಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಶವಸಂಸ್ಕಾರ ನಡೆಸುವವರು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕೃತ ಜಾಲತಾಣ www.bbmp.gov.in ನಲ್ಲಿ ಮಾತ್ರ ನೋಂದಾಯಿಸಿಕೊಳ್ಳಬೇಕು, ಪ್ರತಿ ಶವಸಂಸ್ಕಾರಕ್ಕೆ 250 ರೂ..ಶುಲ್ಕ

ಮಹಿಳೆಯ ನಗ್ನ ವೀಡಿಯೊ, ಬ್ಲ್ಯಾಕ್‌ಮೇಲ್‌: ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಎಸ್‌ಐಟಿಗೆ ಹೈಕೋರ್ಟ್‌ ನೋಟಿಸ್‌

ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವೀಡಿಯೊ ಚಿತ್ರೀಕರಿಸಿಕೊಂಡ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ಅರ್ಜಿ ಸಂಬಂಧ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಜ್ವಲ್‌ ಪರ ವಕೀಲರು, ಈ ಪ್ರಕರಣದಲ್ಲಿ