Featured
ಡೇಟಿಂಗ್ ಆ್ಯಪ್ ಸುಂದರಿ ಆಸೆಗೆ 1.66 ಕೋಟಿ ರೂ. ಕಳೆದುಕೊಂಡ ಟೆಕ್ಕಿ
ಬೆಂಗಳೂರಿನಲ್ಲಿ ಡೇಟಿಂಗ್ ಆ್ಯಪ್ ಮೂಲಕ ಮಹಿಳೆಯ ಮಾತಿಗೆ ಮರುಳಾದ ಸಾಫ್ಟ್‌ವೇರ್ ಎಂಜಿನಿಯರ್ 1.66 ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಡೇಟಿಂಗ್ ಆ್ಯಪ್ ವಂಚಕಿ ಟೆಕ್ಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಮೂರು ತಿಂಗಳಲ್ಲಿ ಟೆಕ್ಕಿಯಿಂದ 1.66 ಕೋಟಿ ರೂಪಾಯಿ ವಂಚಿಸಿದ್ದಾಳೆ. ಸೌರವ್ ದುಬೆಗೆ ಎಂಬ ಟೆಕ್ಕಿ ಫೆಬ್ರವರಿ 15ರಂದು ಟಂಟನ್ ಡೇಟಿಂಗ್ ಆ್ಯಪ್‌ನಲ್ಲಿ ರಿಯಾ ಅಗರ್ವಾಲ್ ಎಂಬ ಯುವತಿಯ ಪರಿಚಯವಾಗಿತ್ತು. ಚಾಟಿಂಗ್ ಮೂಲಕ ಶುರುವಾದ ಪರಿಚಯ
ಸಿಎಂ ರಾಜೀನಾಮೆ ಸ್ವೀಕರಿಸಬೇಕಿದ್ದ ರಾಜ್ಯಪಾಲ ಗೆಹ್ಲೋಟ್ ಮುಂಬೈಗೆ ಪ್ರಯಾಣ?
ಸಿಎಂ ಸಿದ್ದರಾಮಯ್ಯ ಇಂದು ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳ ಬಗ್ಗೆ ಸಾಕಷ್ಟು ಅನುಮಾನಗಳನ್ನು ಹುಟ್ಟಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬುಧವಾರ ರಾತ್ರಿ ಮುಂಬೈಗೆ ಪ್ರಯಾಣಿಸಿದ್ದು, ಮೂರು ದಿನ ಲಭ್ಯ ಇರುವುದಿಲ್ಲ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅಂದರೆ
ಉಗಾಂಡದ ಎಬೋಲಾ ಶಂಕಿತೆಯ ವರದಿ ನೆಗೆಟಿವ್: ಸಚಿವ ದಿನೇಶ್ ಗುಂಡೂ ರಾವ್
ಎಬೋಲಾ ವೈರಸ್ ಶಂಕಿತ ಉಗಾಂಡಾದ 28 ವರ್ಷದ ಮಹಿಳೆಯ ತಪಾಸಣಾ ವರದಿಯಲ್ಲಿ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ಜನರು ಈ ವಿಚಾರದಲ್ಲಿ ಆತಂಕಪಡಬೇಕಿಲ್ಲ ಎಂದು ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ. ಎಬೋಲಾ ವೈರಸ್ ಪೀಡಿತ ಉಗಾಂಡದಿಂದ ಬಂದಿದ್ದ ಮಹಿಳೆಯೊಬ್ಬರಿಗೆ ಮಂಗಳವಾರ
ಮೈಸೂರಿನಲ್ಲಿ ಸಿಡಿಲು ಬಡಿದು ಟೆಕ್ಕಿ ಸಾವು
ಮೈಸೂರಿನ ಯೆಲಿವಾಳ ಬಳಿ ಸಿಡಿಲು ಬಡಿದು ಬೆಂಗಳೂರಿನ 43 ವರ್ಷದ ಟೆಕ್ಕಿಯೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಮೃತ ಟೆಕ್ಕಿಯನ್ನು ಹೊಸೊಕ್ಲು ರೋಷನ್ ಬಾಲಕೃಷ್ಣ ಎಂದು ಗುರುತಿಸಲಾಗಿದೆ. ರೋಷನ್ ಕೊಡಗು ಜಿಲ್ಲೆಯವರು, ಐಟಿ ಕಂಪನಿಯ ಉದ್ಯೋಗಿಯಾಗಿದ್ದು ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಮೈಸೂರಿನಲ್ಲಿರುವ
SIR ಜಾರಿ ಸಮರ್ಥಿಸಿದ ಸುಪ್ರೀಂಕೋರ್ಟ್
ಕೇಂದ್ರ ಚುನಾವಣಾ ಆಯೋಗ ಜಾರಿಗೊಳಿಸಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಬೆಂಬಲಿಸಿದೆ. ದೇಶದಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆಗಳನ್ನು ನಡೆಸುವ ಉದ್ದೇಶದ ಈ ಪ್ರಕ್ರಿಯೆ ಸಂಪೂರ್ಣವಾಗಿ ಸಂವಿಧಾನಬದ್ಧವಾಗಿದ್ದು, ಚುನಾವಣಾ ಆಯೋಗ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದೆ
ಆಧುನಿಕ ಭಾರತ ನಿರ್ಮಾಣದಲ್ಲಿ ನೆಹರೂ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ
ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಮಾತನಾಡಿದರು.
ಹೆಚ್ಚಿನ ಲಾಭ ಆಮಿಷವೊಡ್ಡಿ ದಾವಣಗೆರೆಯಲ್ಲಿ ಜನರಿಗೆ ಕೋಟ್ಯಾಂತರ ರೂ. ವಂಚಿಸಿದಾತ ಅರೆಸ್ಟ್
ನಾವಾಬಿಟ್ ನಕಲಿ ಆ್ಯಪ್ ಮೂಲಕ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ 13,000 ಅಮಾಯಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಸೈಬರ್ ವಂಚಕನನ್ನು ಪೊಲೀಸರು ಬಂಧಿಸಿದ್ದಾರೆ. 10,000 ರೂ. ಹೂಡಿಕೆಗೆ ಪ್ರತಿದಿನ 400 ರೂ. ಲಾಭದ ಆಮಿಷ ಒಡ್ಡಿ ಸ್ಥಳೀಯ ಶಾಲಾ ಮುಖ್ಯ ಶಿಕ್ಷಕಿಯನ್ನು ಬಡ
ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಗೆ ಎಬೋಲಾ ಸೋಂಕು?
ಉಗಾಂಡಾದಿಂದ ಬೆಂಗಳೂರಿಗೆ ಬಂದಿರುವ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ತುರ್ತು ಕ್ರಮ ಕೈಗೊಂಡು ಆಕೆಯನ್ನು ಪ್ರತ್ಯೇಕ ವಾರ್ಡ್‌ಗೆ ದಾಖಲಿಸಿ ಕಟ್ಟುನಿಟ್ಟಿನ ವೈದ್ಯಕೀಯ ನಿಗಾ ತೆಗೆದುಕೊಂಡಿದೆ. ಮಹಿಳೆಯಲ್ಲಿ ಎಬೋಲಾ ವೈರಸ್‌ಗೆ ಹೋಲುವ ಲಕ್ಷಣಗಳು ಕಂಡುಬಂದಿವೆ, ಸೋಂಕು ದೃಢೀಕರಣಕ್ಕಾಗಿ ರಕ್ತದ
ಜೊತೆಯಲ್ಲಿದ್ದ ಅಂಧ ಮಹಿಳೆಯ ಚಿನ್ನ, ನಗದು ದೋಚಿದ್ದ ದಂಪತಿ ಸೆರೆ
ಎಂಟು ವರ್ಷಗಳಿಂದ ಜೊತೆಯಲ್ಲೇ ವಾಸವಿದ್ದು ಅಂಧ ಮಹಿಳೆಯ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದು ದೋಚಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಎಂಬಿಎ ಪದವೀಧರೆ ಶರ್ಮಿಳಾ ಶೇಷಾದ್ರಿ ಮತ್ತು ಪತಿ ಡಿಪ್ಲೊಮಾ ಪದವೀಧರ ಗಣೇಶ್ ಕುಮಾರ್ ಬಂಧಿತರು. ಅಂಧ ಸಂತ್ರಸ್ತೆ ಕಳೆದ ಎಂಟು
ನಾಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್‌ಗೆ ಅಧಿಕಾರ?
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆಯ ಜಟಾಪಟಿ ಕೊನೆಯ ಹಂತಕ್ಕೆ ಬಂದಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಗುರುವಾರ) ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ, ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿ ಪತ್ರ ರವಾನಿಸಿದ್ದಾರೆ.




