Featured
ಪ್ರತ್ಯೇಕ ಧಾರವಾಡ ಪಾಲಿಕೆ ರಚನೆಗೆ ರಾಜ್ಯಪಾಲರು ಅಸ್ತು
ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಕೊನೆಗೂ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಕೊನೆಯದಾಗಿ ಅದನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಟ್ಟಿತ್ತು. ಆದರೆ ರಾಜ್ಯಪಾಲರು ಅದಕ್ಕೆ ಅಂಕಿತ ಹಾಕದೇ ತಮ್ಮ ಬಳಿ ಇಟ್ಟುಕೊಂಡಿದ್ದರು. ಇದರ ಹಿಂದೆ ರಾಜಕಾರಣ ಇದೆ ಎಂದು ಆರೋಪಿಸಿ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟಗಾರರು, ಕಾಂಗ್ರೆಸ್ ಕಾರ್ಯಕರ್ತರು, ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಬಿ.ಡಿ.ಹಿರೇಮಠ ಅವರು ಧಾರವಾಡ
ಬೆಂಗಳೂರಿನಲ್ಲಿ ಲಿವ್ ಇನ್ ರಿಲೇಷನ್‌ನಲ್ಲಿದ್ದ ರೇಡಿಯೊ ಜಾಕಿ ಸುಸೈಡ್
ರೇಡಿಯೋ ಜಾಕಿಯಾಗಿದ್ದ ಮುಂಬೈನ ಮಹಿಳೆ ಮನಿಷಾ ಎಂಬವರು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್ ಪತ್ತೆಯಾಗಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರಾಕಾರ ಮಳೆಗೆ ಮೇಲ್ಛಾವಣಿಯ ಕಲ್ಲು ಬಿದ್ದು ಬಾಲಕಿ ಸಾವು
ಬಿರುಗಾಳಿ ಸಹಿತ ಧಾರಾಕಾರ ಆಲಿಕಲ್ಲು ಮಳೆ ಸುರಿದ ರಭಸಕ್ಕೆ ಮನೆಯ ಮೇಲ್ಛಾವಣಿ ಮೇಲಿಟ್ಟಿದ್ದ ಕಲ್ಲು ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೀದರ್ ಹುಲಸೂರು ಪಟ್ಟಣದ ತಹಸೀಲ್ದಾರ್ ಕಚೇರಿ ಬಳಿ ನಡೆದಿದೆ. ಮೂರು ವರ್ಷದ ಮಾಹೆರಾ ಪೈಸ್ ಇಸ್ಮಾಯಿಲ್ ಶೇಕ್
ಕರ್ನಾಟಕದಲ್ಲಿ ಬಿಜೆಪಿಗೆ ದಳ ಅನಿವಾರ್ಯವೇ?
ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿ ಅಧಿಕಾರ ನಡೆಸಿದ್ದುಂಟು. ಆದರೆ ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ೧೩೬ ಸೀಟು ಗಳಿಸಿ ಅಧಿಕಾರ ನಡೆಸುವ ಅಚಲ ವಿಶ್ವಾಸವನ್ನು ಹೊಂದಿದೆಯೇ ಎಂಬುದು ಗಂಭೀರ ಪ್ರಶ್ನೆ. ರಾಜ್ಯದಲ್ಲಿ ಬಿಜೆಪಿಗೆ ಜೆಡಿಎಸ್ ಸಖ್ಯ ಅನಿವಾರ್ಯವೇ
ಮೇಕೆದಾಟು ಡಿಪಿಆರ್ ತಿರಸ್ಕರಿಸಿ: ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಆಗ್ರಹ
ಕರ್ನಾಟಕ ಸರ್ಕಾರದ ಮೇಕೆದಾಟು ಯೋಜನೆಯ ಭೂಮಿ ಪೂಜೆಗೆ ತಮಿಳುನಾಡು ಸರ್ಕಾರ ಆಕ್ಷೇಪ ವ್ಯಕ್ತಪಡಿಸಿ, ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಅಲ್ಲಿನ ಸಿಎಂ ವಿಜಯ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದ ಈ ಯೋಜನೆಯಿಂದ ಜೀವನೋಪಾಯಕ್ಕಾಗಿ
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ತಡೆ
ಕರ್ನಾಟಕದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಕೇಂದ್ರ ಗೃಹ ಸಚಿವಾಲಯವು ತಡೆ ನೀಡಿದೆ. ಈಗಿರುವ ಕಾನೂನು ವ್ಯವಸ್ಥೆ ಸಮರ್ಪಕವಾಗಿದೆ. ಹೊಸ ಕಾನೂನು ಅಗತ್ಯವಿಲ್ಲದಿರಬಹುದು ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಕಳೆದ ಫೆಬ್ರವರಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಮೇಕೆದಾಟು ವಿಚಾರದಲ್ಲಿ ಸುಪ್ರೀಂಕೋರ್ಟ್‌ಗೆ ಧನ್ಯವಾದ ಎಂದ ಡಿಕೆ ಶಿವಕುಮಾರ್
ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಇದು ಕರ್ನಾಟಕ ಪಾಲಿಗೆ ಶುಭಸುದ್ದಿ. ಕರ್ನಾಟಕ ರಾಜ್ಯದ ಜನರ ಪರವಾಗಿ ನಾವು ಸುಪ್ರೀಂ ಕೋರ್ಟಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯಸಭೆ ಚುನಾವಣೆ ಚರ್ಚೆಗೆ ಸಿಎಂ ದೆಹಲಿಗೆ: ಈಶ್ವರ ಖಂಡ್ರೆ
ಮುಂಬರುವ ರಾಜ್ಯಸಭಾ ಚುನಾವಣೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಮತ್ತು ನಾಯಕರು ದೆಹಲಿಗೆ ಹೋಗಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಮಾಡಿದ ಬಳಿಕ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ
ಪ್ಯಾಲೆಸ್ಟೀನ್ ಪರ ನಿಲುವು ಪುನರುಚ್ಛರಿಸಿದ ಪಾಕ್ : ಟ್ರಂಪ್‌ಗೆ ಹಿನ್ನಡೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನವು ಅಬ್ರಹಾಂ ಒಪ್ಪಂದಕ್ಕೆ ಸೇರ್ಪಡೆಯಾಗಬೇಕು ಎಂದು ಕರೆ ನೀಡಿದ್ದು, ಪಾಕಿಸ್ತಾನ ಸ್ಪಷ್ಟವಾಗಿ ನಿರಾಕರಿಸುವ ಮೂಲಕ ಪ್ಯಾಲೆಸ್ಟೀನ್ ಪರ ನಿಲುವನ್ನು ಮತ್ತೊಮ್ಮೆ ವ್ಯಕ್ತಪಡಿಸಿದೆ. ಇಸ್ರೇಲ್ ಜೊತೆ ಯಾವುದೇ ಸಂಬಂಧ ಸಾಮಾನ್ಯೀಕರಣಕ್ಕೆ ಸಮ್ಮತಿಸುವುದಿಲ್ಲ ಎಂದು ಸಂದೇಶ ನೀಡಿದೆ. ಮಧ್ಯಪ್ರಾಚ್ಯದಲ್ಲಿ ಇಸ್ರೇಲ್
ಬೀದರ್ ಪಶು ವೈದ್ಯಕೀಯ ವಿವಿಯಲ್ಲಿ ಬಹುಕೋಟಿ ಹಗರಣ: ಆರು ಮಂದಿಯ ಬಂಧನ
2017-18ರ ಅವಧಿಯಲ್ಲಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬೀದರ್ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮಾಜಿ ಉಪಕುಲಪತಿ ಸೇರಿ ಆರು ಜನರನ್ನು ಬಂಧಿಸಿದ್ದಾರೆ. ಪಶು ವಿವಿಯ ಮಾಜಿ ಉಪಕುಲಪತಿ ಪ್ರೊ.




